Breaking News
Home / ಜಿಲ್ಲೆ (page 730)

ಜಿಲ್ಲೆ

ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ದಾವಣಗೆರೆ: ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಜಗಳೂರು ತಾಲೂಕಿನ ಅಶ್ವತ್ಥರೆಡ್ಡಿ ನಗರ ಸಮೀಪದ ಬಿದರಕೆರೆ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಎಗ್​ರೈಸ್ ವ್ಯಾಪಾರಿ ಬಸವರಾಜ(45) ಭೀಕರವಾಗಿ ಕೊಲೆಯಾದವ. ಗೋಪಗೊಂಡನಹಳ್ಳಿ ಸಮೀಪದಲ್ಲಿರುವ ಹೊಲಕ್ಕೆಂದು ಬುಧವಾರ ಬೆಳಗಿನ ಜಾವ ಬಸವರಾಜ ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಶವ ಎಸೆದು ಪರಾರಿಯಾಗಿದ್ದಾರೆ …

Read More »

DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..

ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು. ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು.‌ ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ …

Read More »

10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿವೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರ ಜೊತೆಗೆ ಜಿಲ್ಲೆಯ ಹಲವೆಡೆ ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಹರಿಯುತ್ತಿದೆ. ಚಿಮ್ಮಡ, ರಬಕವಿಯ ಬ್ರಹ್ಮಾನಂದ ನಗರದಲ್ಲಿನ ವಿಜಯ ಹೂಗಾರ ಮನೆಯ ಬೋರ್‌ವೆಲ್‌ನಲ್ಲಿ …

Read More »

ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ …

Read More »

ಓವರ್ ಟೆಕ್ ಮಾಡುವಾಗ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ

ಹಾಸನ: ಮುಂದೊಂದು ಚಲಿಸುತ್ತಿರುವ ಸಾರಿಗೆ ಬಸ್ ಅನ್ನು ಓವರ್ ಟೆಕ್ ಮಾಡುವಾಗ.. ಎದುರಿಗೆ ಬಂದ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ತುಮಕೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಡುವೆ ಈ ಡಿಕ್ಕಿ ಸಂಭವಿಸಿದೆ. …

Read More »

ಧಾರಾಕಾರ ಮಳೆಗೆ ಎಲ್ಲವೂ ಹಾನಿ.. ಜನಜೀವನ ಅಸ್ತವ್ಯಸ್ತ

ವಿಜಯಪುರ: ಧಾರಾಕಾರ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ನದಿತೀರದ ಉಕುಮನಾಳ, ಸಾರವಾಡದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ತಾಳಿಕೋಟೆ ಸೇತುವೆ ಜಲಾವೃತವಾದ ಹಿನ್ನೆಲೆಯಲ್ಲಿ ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಟ್ ಆಗಿದೆ. ತಾಳಿಕೋಟೆ ಬಳಿಯ ಹನುಮಾನ್ ಮಂದಿರ ನೀರಿನಲ್ಲಿ ಮುಳುಗಿದೆ. ಕಟಾವಿಗೆ ಬಂದಿದ್ದ ಕಬ್ಬು ನಾಶ: ಇನ್ನು ನದಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಜಲಾವೃತಗೊಂಡಿದೆ. ಗದ್ದೆಗಳಲ್ಲಿ ನೀರು ನಿಂತಿರುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ. …

Read More »

RR ನಗರಕ್ಕೆ BJP ಅಭ್ಯರ್ಥಿ ನಾನೇ: ಚುನಾವಣೆ ಹೊಸ್ತಿಲಲ್ಲಿ ಹೀಗಂದಿದ್ದು ಯಾರು?

ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ! ಇಲ್ಲಿ ಯಾವ ಬಂಡೆ, ಕಲ್ಲು ಇಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಆರ್.ಅಶೋಕ್, ಪಕ್ಷದ ಅಧಿಕೃತ ಅಭ್ಯರ್ಥಿ ಮುನಿರತ್ನಗೆ ಶಕ್ತಿ ತುಂಬಲು ಹೀಗೆ ಹೇಳಿರುವುದಾಗಿ ತಿಳಿದುಬಂದಿದೆ. ಜೊತೆಗೆ ತನ್ಮೂಲಕ ಪ್ರತಿಪಕ್ಷದ ಪಾಳಯಕ್ಕೆ ಖಡಕ್ ಸಂದೇಶವನ್ನೂ ರವಾನಿಸಿರುವುದಾಗಿ ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕಂದಾಯ ಸಚಿವ ಅಶೋಕ್ ಅವರು …

Read More »

7 ಬಾರಿಯ ಸಂಸದ ಕೆ.ಹೆಚ್. ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ? ಕ್ಷೇತ್ರ ಯಾವುದು?

ಕೋಲಾರ: ನಿರಂತರವಾಗಿ 1991ರಿಂದ ಕಾಂಗ್ರೆಸ್​ ಪಕ್ಷದ ವತಿಯಿಂದ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿರುವ ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಪರಾಜಯಗೊಂಡ ಕೆ.ಹೆಚ್. ಮುನಿಯಪ್ಪ ಇದೀಗ ರಾಜ್ಯ ರಾಜಕಾರಣಕ್ಕೆ ಬರಲು ಒಲವು ತೋರಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು. ಕ್ಷೇತ್ರ ಯಾವುದು, ಡಿಕೆಶಿ ಮಾಸ್ಟರ್ ಪ್ಲ್ಯಾನ್​ ಏನು? ಕೇಂದ್ರದ ಮಾಜಿ ಸಚಿವ, 72 ವರ್ಷದ ಕೆ.ಎಚ್. ಮುನಿಯಪ್ಪ ರಾಜ್ಯ ರಾಜಕಾರಣದತ್ತ ಮರಳಲು ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಒತ್ತಾಯ ಕಾರಣ ಎನ್ನಲಾಗಿದೆ. …

Read More »

ಪ್ರವಾಹದಲ್ಲಿ ಸಿಲುಕಿದ್ದ ಮೂವರು ಬಿಹಾರಿ ಕಾರ್ಮಿಕರ ರಕ್ಷಣೆ.. ಯಾವೂರಲ್ಲಿ?

ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲೇ ಬಿಹಾರ ಮೂಲದ ಮೂವರು ಕಾರ್ಮಿಕರು ಶೆಡ್ ನಿರ್ಮಿಸಿಕೊಂಡಿದ್ದರು. ಆದರೆ ಶೆಡ್​ಗೆ ಏಕಾಏಕಿ ಮಳೆ ನೀರು ನುಗ್ಗಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೂವರು ಕಾರ್ಮಿಕರ …

Read More »

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು …

Read More »