ಬೆಂಗಳೂರು: ಕೊರೊನಾ ದೇಶದೆಲ್ಲೇಡೆ ಹಬ್ಬಿದ್ದು, ಸಾವು-ನೋವು ಸಂಭವಿಸಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಪತಿಸ್ಥಿತಿಯನ್ನು ಹತೋಟಿಗೆ ತರಲು ಲಾಕ್‍ಡೌನ್ ಘೋಷಣೆ ಮಾಡಿದ್ದು, ಜನರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸಿನಿಮಾ ರಂಗದವರು ಕೂಡ ಈ ಸಂಕಷ್ಟದಿಂದ ಹೊರತಾಗಿಲ್ಲ. ಹೀಗಾಗಿ ಅನೇಕರು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಸಹಾಯ ಹಸ್ತ ನೀಡುತ್ತಿದ್ದಾರೆ. ಈ ರೀತಿ ನೆರವಿಗೆ ದಾವಿಸಿದವರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಪುತ್ರ ನಟ ವಿನೋದ್ ರಾಜ್ ಕೂಡ ಒಬ್ಬರು. ಇದೀಗ ಸಿನಿಮಾ …
Read More »ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ. ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ …
Read More »ಎಲ್ಲರೂ ಒಟ್ಟಾಗಿ ಕೋವಿಡ್ ಸೋಂಕನ್ನು ಸೋಲಿಸೋಣ: ಸಿಎಂ ಯಡಿಯೂರಪ್ಪ
ಬೆಂಗಳೂರು: ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಕಠಿಣ ನಿಯಮಗಳು ಯಶಸ್ವಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೋನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. …
Read More »ಕುಂಟು ನೆಪ ಹೇಳಿ ರಸ್ತೆಗಿಳಿದವ್ರಿಗೆ ಬಿಸಿ ಮುಟ್ಟಿಸುತ್ತಿರೋ ಪೊಲೀಸ್, ಸಾಲು ಸಾಲು ವಾಹನಗಳು ಸೀಜ್
ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಲಾಕ್‍ಡೌನ್ ಜಾರಿಯಾಗಿದೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಸುಖಾಸುಮ್ಮನೆ ವಾಹನಗಳಲ್ಲಿ ರಸ್ತೆಗಿಳಿಯದಂತೆ ಸೂಚಿಸಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಕುಂಟು ನೆಪಗಳನ್ನ ಹೇಳಿಕೊಂಡು ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಜೊತೆಗೆ ವಾಹನಗಳನ್ನ ಸೀಜ್ ಮಾಡ್ತಿದ್ದಾರೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲ ಜನರು ಅನಾವಶ್ಯಕ ಓಡಾಡೋದಲ್ಲದೆ ಪೊಲೀಸರ ಜೊತೆ ವಾಗ್ವಾದ ಮಾಡ್ತಿದ್ದಾರೆ. …
Read More »ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್ ಸೋಂಕಿನಿಂದ ಸಾವು
ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ …
Read More »ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ
ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ …
Read More »ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್; ಶೀಘ್ರ ಸಮಸ್ಯೆಗೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್
ಬೆಳಗಾವಿ;-ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಮೇ 9) ನಡೆದ ಅಧಿಕಾರಿಗಳ …
Read More »ನಾಳೆ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಲಾಕ್ ಡೌನ್ : 10 ಗಂಟೆ ಬಳಿಕ ಹೊರಗೆ ಬಂದ್ರೆ ದಂಡ ಫಿಕ್ಸ್!
ಬೆಂಗಳೂರು : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಮೇ.10 ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಪರಿಷ್ಕೃತ ಮಾರ್ಗಸೂಚಿಯಂತೆ ಮೇ.10ರ ಬೆಳಿಗ್ಗೆ 6 ಗಂಟೆಯಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಮೊದಲು ನೈಟ್ ಕರ್ಪ್ಯೂ, ಆನಂತ್ರದ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಬಳಿಕ, ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಆದ್ರೇ.. ಕೊರೋನಾ ಮಾತ್ರ …
Read More »ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಸೋಂಕಿತರ ನಾಪತ್ತೆ- ಮತ್ತೆ 6,029 ಮಂದಿ ಎಸ್ಕೇಪ್
ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಉದ್ಯಾನ ನಗರಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆಯಿಂದ ನಿತ್ಯ ನೂರಾರು ಜನ ಸಾವನ್ನಪ್ಪುತ್ತಿದ್ದಾರೆ. ಇದೆಲ್ಲದರ ನಡುವೆ ಮತ್ತೊಂದು ಶಾಕಿಂಗ್ ಸುದ್ದಿ ಬಹಿರಂಗವಾಗಿದ್ದು, ಇಂದು ಸಹ 6,029 ಜನ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಜನರಲ್ಲಿ ಮತ್ತೆ ಆತಂಕ ಹೆಚ್ಚಿದೆ. ಕೊರೊನಾ ಕರ್ಫ್ಯೂ ಇದೀಗ ಮತ್ತೆ ಲಾಕ್‍ಡೌನ್ ಮಡಿರುವ ಮಧ್ಯೆ ನಗರದಲ್ಲಿ ಸೋಂಕಿತರು ನಾಪತ್ತೆಯಾಗಿದ್ದಾರೆ. ಈ ಹಿಂದೆ 10,835 ಜನ …
Read More »ವಿಜಯಪುರ: ‘ಬಿಎಲ್ ಡಿಇ’ ಆಸ್ಪತ್ರೆಗೆ ರೆಮಿಡಿಸಿವರ್ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ಎಂ.ಬಿ ಪಾಟೀಲ್ ವಾಗ್ದಾಳಿ
ವಿಜಯಪುರ: ತನ್ನ ಮಾಲಿಕತ್ವದ 500 ಕೋವಿಡ್ ಬೆಡ್ ಗಳ ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ಶೇಕಡ 70% ಕಡಿತಗೊಳಿಸಿ ಕಡಿಮೆ ವೆಚ್ಚದಲ್ಲಿ ನಿರ್ವಹಣೆ ಮಾಡಿ ಮಾನವೀಯತೆ ಮೆರೆದ ಮಾಜಿ ಗೃಹಸಚಿವ ಎಂ.ಬಿ ಪಾಟೀಲ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ ಮನವಿ ಸಲ್ಲಿಸಿದರೂ ಸರಿಯಾದ ಪ್ರಮಾಣದಲ್ಲಿ ರೆಮಿಡಿಸಿವರ್ ಔಷಧವನ್ನು ನೀಡದೇ, ಬೇಡಿಕೆಗೆ ಸರಿಯಾಗಿ ಸ್ಪಂದಿಸದೇ ಅಸಡ್ಡೆ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, …
Read More »
Laxmi News 24×7