Breaking News

ಜಿಲ್ಲೆ

ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ದಂಧೆಯನ್ನ ಸಂಸದ ತೇಜಸ್ವಿ ಸೂರ್ಯ ಬಯಲು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿದ್ದ ಬೆಡ್ ದಂಧೆಯನ್ನ ಸಂಸದ ತೇಜಸ್ವಿ ಸೂರ್ಯ ಬಯಲು ಮಾಡಿದ್ದು, ವಾರ್ ರೂಮಿನಲ್ಲಿದ್ದ ದಂಧೆಕೋರರ ಬೆವರಿಳಿಸಿದ್ದಾರೆ. ಕಳೆದ ಐದಾರು ದಿನಗಳಿಂದ ಬೆಡ್ ಹಂಚಿಕೆ ಕುರಿತು ತನಿಖೆ ನಡೆಸಿರುವ ತೇಜಸ್ವಿ ಸೂರ್ಯ, ಬೆಡ್ ಅಭಾವದ ಕಾರಣ ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಸೌಥ್ ವಾರ್ ರೂಮಿಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಬೆಡ್ ದಂಧೆಯ ಮಾಹಿತಿ ಬಿಚ್ಚಿಟ್ಟರು. ಬೆಂಗಳೂರಿನ ನಿವಾಸಿಗೆ ಪಾಸಿಟಿವ್ ವರದಿ ಬರುತ್ತಿದ್ದಂತೆ, ಆಯಾ ಭಾಗದ …

Read More »

ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೊಡಲಾಗುವ ರೆಮಿಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವಂತೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದರು. ರೆಮ್ ಡಿಸಿವಿರ್ ಕೊರತೆ ಬಗ್ಗೆ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. …

Read More »

ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ …

Read More »

ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ.

ಬೆಳಗಾವಿ – ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ. ಬೆಳಗಾವಿಯ ಬಾಕ್ಸೈಟ್ ರಸ್ತೆಯ ವಿದ್ಯಾನಗರದ ನಿವಾಸಿಗಳಾದ ಪಾರ್ವತಿ ಕೃಷ್ಣಾ ತೇರಗಾಂವ( 76),  ನಿವೃತ್ತ  ಉಪ ನೊಂದನಾಧಿಕಾರಿ ಕೃಷ್ಣಾ ಭೀಮಪ್ಪ ತೇರಗಾಂವ  (80) ಮತ್ತು ಪ್ರಶಾಂತ ಕೃಷ್ಣಾ ತೇರಗಾಂವ್ (49) ಮೃತರಾದವರು.ಪಾರ್ವತಿ ಏ.24ರಂದು, ಕೃಷ್ಣಾ ಏ. 29ರಂದು ಹಾಗೂ ಪ್ರಶಾಂತ ಮೇ 3ರಂದು ಮೃತರಾದರು. ಕೃಷ್ಣಾ ಹಾಗೂ ಪ್ರಶಾಂತ ಸಬ್ ರಜಿಸ್ಟ್ರಾರ್ ಕಚೇರಿ ಕನ್ಸಲ್ಟಂಟ್ ಆಗಿ ಕೆಲಸ …

Read More »

ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ

ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ.4 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ …

Read More »

ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ.

ಬಾಗಲಕೋಟೆ: ಜಿಲ್ಲೆಯಲ್ಲಿ ಕದ್ದು ಮುಚ್ಚಿ ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿಯೇ ಈ ಕಳ್ಳರಾಗಿರೋದು ಬೆಳಕಿಗೆ ಬಂದಿದೆ. 10 ಜನರಲ್ಲಿ ಮೂವರು ಕೋವಿಡ್ ಆಸ್ಪತ್ರೆ ಸಿಬ್ಬಂದಿ, 7 ಜನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಆಗಿದ್ದಾರೆ. ರೋಗಿಗಳಿಗೆ ಕೊಡುವ ಇಂಜೆಕ್ಷನ್ ಅನ್ನು ಹೊರತಂದು ಬ್ಲಾಕ್‍ನಲ್ಲಿ 25-30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾರೆ. ಇತ್ತ, ತುಮಕೂರಿನಲ್ಲಿ …

Read More »

ಕೊರೊನಾ ಪರಿಣಾಮ: ಭಾರತದ ನಿರುದ್ಯೋಗ ದರ 4 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ

ಭಾರತದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ನಾಲ್ಕು ತಿಂಗಳ ಗರಿಷ್ಠ ಶೇಕಡಾ 8ಕ್ಕೆ ಏರಿಕೆಗೊಂಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಅನೇಕ ರಾಜ್ಯಗಳು ನಿರ್ಬಂದಕ್ಕೊಳಗಾಗಿದ್ದು, ವೈರಸ್‌ ಪ್ರಕರಣಗಳಲ್ಲಿ ದಾಖಲೆಯ ಏರಿಕೆ ಕಂಡಿದೆ. ಖಾಸಗಿ ಸಂಶೋಧನಾ ಸಂಸ್ಥೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಪ್ರೈ.ಲಿ.ನ ಅಂಕಿ ಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಶೇಕಡಾ 6.5 ರಷ್ಟಿದ್ದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ಶೇಕಡಾ 7.97ಕ್ಕೆ ಏರಿಕೆಗೊಂಡಿದೆ. ಭಾರತದಲ್ಲಿ ಭಾನುವಾರ 3,689ರಷ್ಟು ಸೋಂಕಿತರು ಕೋವಿಡ್‌-19ಗೆ ಬಲಿಯಾಗಿದ್ದು ದಾಖಲೆಯಾಗಿದೆ. …

Read More »

1912 ಹೆಲ್ಪ್‌ಲೈನ್‌ ಸರಿಯಾಗಲು 2 ದಿನ ಗಡುವು ನೀಡಿದ ಡಿಸಿಎಂ

ಬೆಂಗಳೂರು: ಎರಡು ದಿನಗಳ ಒಳಗಾಗಿ ಬೆಂಗಳೂರು ಮಹಾನಗರದಲ್ಲಿ ಕೋವಿಡ್‌ಗೆ ಸಂಬಂಧಿತ ಎಲ್ಲ ಸೇವೆಗಳನ್ನು 1912 ಹೆಲ್ಪ್‌ಲೈನ್‌ಗೆ ಜೋಡಿಸಬೇಕು; ಬೆಡ್ ಹಂಚಿಕೆ ಪಾರದರ್ಶಕಗೊಳಿಸಬೇಕು ಎಂದು \ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಡೆಡ್‌ಲೈನ್‌ ವಿಧಿಸಿದರು. ಬೆಂಗಳೂರಿನಲ್ಲಿ ದಿನವಿಡೀ ಕೋವಿಡ್‌ ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡ ಅವರು, ಮಾಹಿತಿ ಮತ್ತು ಸೌಲಭ್ಯಗಳ ಕೊಂಡಿಯಾಗಿರುವ ಹೆಲ್ಪ್‌ಲೈನ್‌ ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶದಿಂದ ಸೋಮವಾರ ಸಂಜೆ ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಬೆಂಗಳೂರು ನಗರದಲ್ಲಿರುವ ಕೋವಿಡ್‌ ಬೆಡ್‌ಗಳ ಪ್ರಮಾಣ, ಹಂಚಿಕೆ …

Read More »

ಮುಖ್ಯಮಂತ್ರಿ B.S.Y.ರಾಜೀನಾಮೆ ನೀಡಲಿ- ಸಿದ್ದರಾಮಯ್ಯ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ …

Read More »

ನನ್ನ ತಾಯಿಗೇ ಬೆಡ್ ಕೊಡ್ತಿಲ್ಲ ಎಂದು ಸಿದ್ದರಾಮಯ್ಯ ಬಳಿ ಕಣ್ಣೀರಿಟ್ಟ ಶಾಸಕಿ ಕುಸುಮಾ ಶಿವಳ್ಳಿ!

ಬೆಂಗಳೂರು: ಕರ್ನಾಟಕದ ಪಾಲಿಗೆ ಇಂದು ಕರಾಳ ದಿನ. ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್​​ ಕೊರತೆ ಉಂಟಾಗಿ 24 ಮಂದಿ ರೋಗಿಗಳು ನರಳಾಡಿ ಪ್ರಾಣ ಬಿಟ್ಟಿದ್ದಾರೆ. ಇನ್ನು ಸೋಂಕಿತರಿಗೆ ಬೆಡ್​ ಸಿಗದೇ ಪರದಾಡುತ್ತಿರುವುದು ಸಾಮಾನ್ಯವೇನೋ ಎನ್ನುವಂತಾಗಿದೆ. ಸಚಿವರು, ಶಾಸಕರು, ಸೆಲೆಬ್ರೆಟಿಗಳು ಕೂಡ ತಮ್ಮವರಿಗಾಗಿ ಬೆಡ್​​​ ಹೊಂದಿಸಲಾಗದೇ ದಿಕ್ಕೆಟ್ಟಿದ್ದಾರೆ. ತಮ್ಮೆಲ್ಲಾ ಪ್ರಭಾವನ್ನು ಬಳಸಿದರೂ ಆಸ್ಪತ್ರೆಗಳಲ್ಲಿ ಒಂದು ಬೆಡ್​ ಸಿಗುತ್ತಿಲ್ಲ. ಇದಕ್ಕೆ ಕುಂದಗೋಳ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಕುಸುಮಾ ಶಿವಳ್ಳಿಯೂ ಹೊರತಾಗಿಲ್ಲ. ತಮ್ಮ ಸೋಂಕಿತ ತಾಯಿಗೆ …

Read More »