ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ. ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.
Read More »ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ರಾಜ್ಯ ವಿವಿಧ ಕಡೆಗಳಲ್ಲೂ ನೂರಾರು ಸಂಖ್ಯೆಯ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಂಡ ಹಾಕಲಾಗಿದೆ. ಜಪ್ತಿ ಮಾಡಿರುವ ವಾಹನಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುವುದಿಲ್ಲ ಎನ್ನಲಾಗಿದೆ. ಜಪ್ತಿ ಮಾಡಿದ ವಾಹನಗಳನ್ನು ಠಾಣೆಗೆ ಸಾಗಿಸಿದ್ದು, ಅವುಗಳ ರಕ್ಷಣೆ, ಸುರಕ್ಷತೆ ಪೊಲೀಸರಿಗೆ ಸವಾಲಾಗಿದೆ. ಬಹುತೇಕ …
Read More »32ನೇ ಸುತ್ತಿನಲ್ಲಿ ಬಿಜೆಪಿ 11883 ಮತಗಳಿಂದ ಮುನ್ನಡೆ
ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 32ನೇ ಸುತ್ತಿನಲ್ಲಿ ಬಿಜೆಪಿ 11883 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 165362, ಕಾಂಗ್ರೆಸ್ 153479 ಮತ ಪಡೆದಿದೆ.
Read More »ಬೆಳಗಾವಿ ಲೋಕಸಭೆ ಫಲಿತಾಂಶ,ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.
ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ 12441 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 142686, ಕಾಂಗ್ರೆಸ್ 130245 ಮತ ಪಡೆದಿದೆ.
Read More »ಬೆಳಗಾವಿ ಲೋಕಸಭಾ update
ಬೆಳಗಾವಿ ಲೋಕಸಭಾ ಚುನಾವಣೆ ಮಂಗಳಾ ಅಂಗಡಿ ಯವರಿಗೆ 1,41,099 ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ 1,28,778ಮತ ಗಳು ಸದ್ಯಕ್ಕೆ ಬಿಜೆಪಿ ಮುನ್ನಡೆ ಇದೆ
Read More »ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್
ಬೆಳಗಾವಿ – ಬೆಳಗಾವಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 12 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಭಾನುವಾರ ನಡೆಯಲಿರುವ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಎಂದು ನಿಯಮ ಮಾಡಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ಕೊರೋನಾ ಟೆಸ್ಟ್ ಮಾಡಲಾಯಿತು. ಒಟ್ಟೂ 70 ಪತ್ರಕರ್ತರು ಟೆಸ್ಟ್ ಗೆ ಒಳಗಾಗಿದ್ದರು. ಅವರಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ಅವರ ಪೈಕಿ 11 ಜನರಿಗೆ ಕೊರೋನಾದ ಯಾವುದೇ ಲಕ್ಷಣಗಳಿಲ್ಲ. ಈ ಎಲ್ಲ …
Read More »ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಕಾರ್ಯ ಕೂಡ ಆರಂಭವಾಗಿದೆ.
ಬೆಳಗಾವಿ – ದೇಶಾದ್ಯಂತ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಅಧಿಕೃತವಾಗಿ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂ ತೆರೆಯಲಾಗುತ್ತದೆ. ಈ ಬಾರಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕಿರುವುದರಿಂದ ಪ್ರತಿಬಾರಿಯಷ್ಟು ವೇಗವಾಗಿ ಫಲಿತಾಂಶ ಸಿಗುವುದು ಕಷ್ಟ. ಪಶ್ಚಿಮ ಬಂಗಾಳ ಫಲಿತಾಂಶ ಎಲ್ಲಕ್ಕಿಂತ ಹೆಚ್ಚು ಕುತೂಹಲ ಮೂಡಿಸಿದ್ದು, ತಮಿಳುನಾಡು, ಕೇರಳ, ಆಸ್ಸಾಂ, ಪುದುಚೆರಿ ವಿಧಾನಸಭೆ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟವಾಗಲಿದೆ. …
Read More »ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ …
Read More »ಮುಂದಿನ 24 ಘಂಟೆಯಲ್ಲಿ ಜಿಲ್ಲೆಯ ಸಂಪೂರ್ಣ ಕೋವಿಡ್ ವಿವರ ಮೊಬೈಲ್ ನಲ್ಲಿ – ಡಿಸಿ
ಬೆಳಗಾವಿ – ಬೆಳಗಾವಿ ಜಿಲ್ಲೆಯ ಕೊರೋನಾ ಸಂಬಂಧಿತ ಸಮಗ್ರ ಮಾಹಿತಿ ಈಗ ಒಂದೇ ಕಡೆ ಲಭ್ಯ. ಈವರೆಗೆ ಬೆಡ್ ಮಾಹಿತಿ ಸೇರಿದಂತೆ ಎಲ್ಲದಕ್ಕೂ ತಡಕಾಡಬೇಕಿತ್ತು. ಆದರೆ ಈಗ ನಿಮ್ಮ ಬೆರಳ ತುದಿಯಲ್ಲಿ ಎಲ್ಲ ಮಾಹಿತಿಗಳೂ ಲಭ್ಯವಾಗುವಂತೆ ಮಾಡಿದ್ದಾರೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್. ಹರೀಶ್ ಕುಮಾರ ನಿನ್ನೆಯಷ್ಟೆ ಮಾಹಿತಿ ನೀಡಿದ್ದರು, 24 ಗಂಟೆಯಲ್ಲಿ ಎಲ್ಲ ಮಾಹಿತಿ ನಿಮ್ಮ ಮೊಬೈಲ್ ನಲ್ಲಿ ಸಿಗುವಂತೆ ಮಾಡಲಾಗುವುದು ಎಂದು ಟೆಸ್ಟಿಂಗ್ ಇನ್ಫಾರ್ಮೇಶನ್, ಆಸ್ಪತ್ರೆ ಮತ್ತು ಬೆಡ್ …
Read More »ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಒಂದು ವೇಳೆ ನಿಯಂತ್ರಣಕ್ಕೆ ಬರದಿದ್ದರೆ ಕಠಿಣಕ್ರಮ
ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಸೋಂಕು ಕಡಿಮೆಯಾಗದಿದ್ದರೆ ಜನತಾ ಕರ್ಫ್ಯೂ ಮುಂದುವರೆಯಲಿದೆ. ಟಫ್ ರೂಲ್ಸ್ ವಿಸ್ತರಣೆ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ 14 ದಿನ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕೆ ಬರಬೇಕು. ಒಂದು ವೇಳೆ ನಿಯಂತ್ರಣಕ್ಕೆ ಬರದಿದ್ದರೆ ಕಠಿಣಕ್ರಮ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ಜನತಾ ಕರ್ಫ್ಯೂ ಮುಂದುವರೆಸುವ ಸುಳಿವು …
Read More »
Laxmi News 24×7