Breaking News
Home / ಜಿಲ್ಲೆ (page 748)

ಜಿಲ್ಲೆ

ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ …

Read More »

ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ

ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾದ್ರೂ.. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ …

Read More »

ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವ ಮೊದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್‌ ಆರ್ ನಗರ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಬಹಿರಂಗ

ಮೈಸೂರು: ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವ ಮೊದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್‌ ಆರ್ ನಗರ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸಿದ್ದಾರೆ. ಇಂದು (ಮಂಗಳವಾರ) ಮೈಸೂರಿನಲ್ಲಿ ಮಾತನಾಡಿದ ಅವರು, ಆರ್‌ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಂದು ಹೇಳಿದ ಸಿದ್ದರಾಮಯ್ಯಾವರು, ಇಂದು (ಮಂಗಳವಾರ) ಸಂಜೆ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ಕೆಪಿಸಿಸಿ ಇಂದ ಒಂದೇ ಹೆಸರನ್ನ ಶಿಫಾರಸ್ಸು ಮಾಡಲಾಗಿತ್ತು. ಅವರು ಹೆಸರು ಅಂತಿಮವಾಗಿ ಸಂಜೆ …

Read More »

B.J.P.ಕುತಂತ್ರಕ್ಕೆ ಹೆದರುವ ಮಗ ನಾನಲ್ಲ – DK ಶಿವಕುಮಾರ್ ಘರ್ಜನೆ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ಹೊರಬಂದ ಶಿವಕುಮಾರ್​ ರೇಡ್​ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸಿದಿಂದ ಹೊರಬಂದ ಶಿವಕುಮಾರ್ ರೇಡ್​ ಬಗ್ಗೆ ಪ್ರತಿಕ್ರಿಯಿಸಿದರು. ನಿಮ್ಮ ಅಭಿಮಾನ, ಪ್ರೀತಿ ಮರೆಯಲು ಸಾಧ್ಯವಿಲ್ಲ. ಇಡೀ ದೇಶದ ಜನರು ನೋಡುತ್ತಿದ್ದಾರೆ. ಬೆಳಗ್ಗೆಯಿಂದ ಮನೆ ಮುಂದೆ ಅಥವಾ ರಸ್ತೆ ಇರಬಹುದು, ರಾಜ್ಯದಲ್ಲಿ, ಹೊರಗಡೆ ನನಗಾಗಿ ಮತ್ತು ಪಕ್ಷಕ್ಕೆ ಪ್ರೀತಿ ಅಭಿಮಾನ ತೋರಿಸಿದ ನಿಮ್ಮ ಋಣ …

Read More »

ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದ ಪ್ರಹ್ಲಾದ್ ಜೋಶಿ

ಬೆಳಗಾವಿ  – ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮೊದಲಿನಿಂದಲೂ ಕಮಿಶನ್ ಏಜಂಟ್ ರೀತಿಯಲ್ಲಿ ಪಕ್ಷ ಕೆಲಸ ಮಾಡಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ. 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಸದಾ ರೈತ ವಿರೋಧಿಯಾಗಿಯೇ ನಡೆದುಕೊಂಡು ಬಂದಿದೆ. ಎಲ್ಲದಕ್ಕೂ ದಲ್ಲಾಳಿ ವ್ಯವಹಾರ ಮಾಡಿಕೊಂಡು ಬಂದಿದೆ. ಚುನಾವಣೆಯಲ್ಲಿ ನೀಡಿದ ಯಾವ ಆಶ್ವಾಸನೆಯನ್ನೂ ಈಡೇರಿಸುವುದು ಗೊತ್ತಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲಿನ ದಾಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ. …

Read More »

ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …

Read More »

ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ

ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ …

Read More »

ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. K ಕಲ್ಯಾಣ್

ಬೆಳಗಾವಿ: K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ಚಿತ್ರಸಾಹಿತಿಯೇ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. ನಾನು, ನನ್ನ ಪತ್ನಿ ಇಬ್ಬರೂ ಚೆನ್ನಾಗಿ ಇದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಮ್ಮ ಕುಟುಂಬದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ನಮಗೆ ಮದುವೆಯಾಗಿ 14 ವರ್ಷ ಪೂರ್ತಿಯಾಗಿದೆ.ನಮ್ಮ ಕುಟುಂಬದಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇವೆ. ನಮ್ಮ ಮನೆಗೆ ಗಂಗಾ ಕುಲಕರ್ಣಿ ಎಂಬ …

Read More »

ವಿಷ್ಣು ಅಭಿಮಾನಿ ಮೃತದೇಹ ಸಾಗಿಸುವುದಕ್ಕೂ ಲಂಚ ಕೇಳಿದ ಆಸ್ಪತ್ರೆಯ ಸಿಬ್ಬಂದಿ’

ದಾವಣಗೆರೆ: ಕೋವಿಡ್ ಹಾಗೂ ನಾನ್ ಕೋವಿಡ್ ವ್ಯಕ್ತಿಗಳು ಆಸ್ಪತ್ರೆಯಲ್ಲಿ ಮೃತರಾದರೆ, ಅವರ ಮೃತದೇಹವನ್ನು ನೀಡಲು ಸಂಬಂಧಿಕರಿಂದ ಹಣದ ಬೇಡಿಕೆ ಇಟ್ಟಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತದೇಹವನ್ನು ನೀಡಲು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆಲವು ಖಾಸಗಿ ವ್ಯಕ್ತಿಗಳು, ಕುಟುಂಬಸ್ಥರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಮೃತರಾದರೆ ಅಥವಾ ಮನೆಯಲ್ಲಿ ಮೃತರಾದರೆ ಅವರ ಮೃತದೇಹವನ್ನು ಮನೆಯಿಂದ ಆಸ್ಪತ್ರೆಯ ಶವಾಗಾರಕ್ಕೆ ಹಾಗೂ ಶವಗಾರದಿಂದ …

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ವಿಚಾರವನ್ನು ಸಚುವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, …

Read More »