Breaking News

ಜಿಲ್ಲೆ

ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ : ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಹರ್ಷಾ ಶುಗರ್ಸ್ ಕೆಪಿಎಲ್ -2026 ಕ್ರಿಕೆಟ್ ಪಂದ್ಯಾವಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭರ್ಜರಿ ಚಾಲನೆ ನೀಡಿದರು. ಕೆಕೆ ಕೊಪ್ಪ ಗ್ರಾಮದಲ್ಲಿನ ಕ್ರೀಡಾಭಿಮಾನಿಗಳು, ಯುವಕರು ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಮಟ್ಟದಲ್ಲಿ ಕ್ರೀಡಾಕಾರ್ಯಕ್ರಮಗಳನ್ನು ಆಯೋಜಿಸುವುದು ಯುವಕರಲ್ಲಿ ಶಿಸ್ತು, ತಂಡಭಾವನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು …

Read More »

ಮಾದಕ ವಸ್ತು ಮುಕ್ತ ಕರ್ನಾಟಕ ಜಾಗೃತಿಗಾಗಿ ಬೆಳಗಾವಿ ಪೊಲೀಸ್ ಇಲಾಖೆಯಿಂದ ಮ್ಯಾರಾಥಾನ್

ಬೆಳಗಾವಿ : ಜಿಲ್ಲಾ ಹಾಗೂ ನಗರ ಪೊಲೀಸ್ ಕಮೀಷ್ನರೇಟ್ ವತಿಯಿಂದ ‘ಮಾದಕ ವಸ್ತು ಮುಕ್ತ ಕರ್ನಾಟಕ’ ಜಾಗೃತಿಗಾಗಿ ನಗರದಲ್ಲಿ ಭಾನುವಾರು 5 ಮತ್ತು 10 ಕಿಮೀ ವಿಭಾಗದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ಮೈದಾನದಿಂದ ಬೆಳಗ್ಗೆ ಆರಂಭಗೊಂಡ 5ಕಿಮೀ ಓಟವು ಆರ್‌ಟಿಒ ವೃತ್ತ, ಅಶೋಕ ಸ್ಥಂಭ ವೃತ್ತ, ಕನಕದಾಸ ವೃತ್ತ, ಶ್ರೀನಗರ ಗಾರ್ಡನ್, ಧರ್ಮನಾಥ ವೃತ್ತದ ಮೂಲಕ ಸಂಚರಿಸಿ ಪುನಃ ಮೈದಾನದಲ್ಲಿ ಮುಕ್ತಾಯವಾಯಿತು. 10ಕಿಮೀ ಓಟ ಕೃಷ್ಣದೇವರಾಯ ವೃತ್ತ, ಸದಾಶಿವ ನಗರ, …

Read More »

ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ

ಚಿಕ್ಕೋಡಿ : ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ತಾಲೂಕಿನ ಬಂಬಲವಾಡ ಗ್ರಾಮದ ಭೂಮಿಕಾ ಕರೆಪ್ಪ ಮಾಳಂಗಿ(೧೭) ಹೃದಯಾಘಾತದಿಂದ ನಿಧನ ಹೋಂದಿರುವ ಘಟನೆ ಶನಿವಾರ ನಡೆದಿದೆ. ಮೃತ ಭೂಮಿಕಾ ಮಾಳಂಗಿ ಬೆಳಗ್ಗೆ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದಳು, ಸ್ನಾನದ ನಂತರ ವಿದ್ಯಾರ್ಥಿನಿ ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಸ್ಥಳಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿಯೇ ಭೂಮಿಕಾ ಮೃತಳಾಗಿದ್ದಾಳೆ. ವಿದ್ಯಾರ್ಥಿನಿಯ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಪರೀಕ್ಷೆಯ ಭಯದಿಂದ ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕೋಡಿ …

Read More »

ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ವಿರುದ್ಧ ಜನ ಚಳುವಳಿ

ಬೆಳಗಾವಿ : ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಜನ ಚಳುವಳಿ ತೀವ್ರಗೊಳಿಸಬೇಕಾಗುತ್ತದೆ ಎಂದು ಡಾ.ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಯಲ್ಲಪ್ಪ ಹಿಮ್ಮಡಿ ಎಚ್ಚರಿಸಿದರು. ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ವಿರೋಧಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ಭಾನುವಾರ ಏರ್ಪಡಿಸಿದ್ದ ಪೋಷಕರ ಸಮಾವೇಶದಲ್ಲಿ ಮಾತನಾಡಿದ ಅವರು,  ಸರ್ಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಣದ ಉಳಿವಿದೆ. ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆಯವರ ಪರಿಶ್ರಮದಿಂದ ಬಂದಿರುವ …

Read More »

ವೈಮಾನಿಕ ನಿರ್ಬಂಧ ಬೆಳಗಾವಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಬೆಳಗಾವಿ: ​​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು  ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಬೆಳಗಾವಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ  0831-2407290,ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ  080-22340676, …

Read More »

ಬೀದರ್: ಶೀಲ ಶಂಕಿಸಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

ಬೀದರ್: ಅನೈತಿಕ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಕಿಶನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ಇಡೀ ರಾತ್ರಿ ಕಿಶನ್ ತನ್ನ ಪತ್ನಿ ಅಶ್ವಿನಿಯೊಂದಿಗೆ ಶೀಲ ಶಂಕೆಯ ವಿಚಾರವಾಗಿ ಜಗಳವಾಡಿದ್ದನು. ಪತ್ನಿ ಇನ್ನೊಬ್ಬ …

Read More »

ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್​

ಗದಗ: ಕರೆಯಲ್ಲಿ ಈಜಲು ತೆರಳಿ 9ನೇ ತರಗತಿಯ ಮೂವರ ಪೈಕಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಡಾ. ಅಂಬೇಡ್ಕರ ಮೆಟ್ರಿಕ್ ಪೂರ್ವ ವಸತಿ ನಿಲಯದ ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತ ವಿದ್ಯಾರ್ಥಿಗಳು. ಓರ್ವ ವಿದ್ಯಾರ್ಥಿ ಬಚಾವ್ ಆಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ ಮತ್ತು …

Read More »

ಮಾರ್ಚ್ 3 ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!

ಬೆಂಗಳೂರು: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಬದಲಾದ ವೇಳಾಪಟ್ಟಿ ಪ್ರಕಟಿಸಲಾಗಿದೆ. ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಜಾತ್ರಾ ಮಹೋತ್ಸವದ ದಿನವೇ ಚಂದ್ರಗ್ರಹಣ ಇರುವುದರಿಂದ ದೇವಸ್ಥಾನದ ಮಹಾದ್ವಾರ ಮಧ್ಯಾಹ್ನ 1ರಿಂದ ರಾತ್ರಿ 8:30ರವರೆಗೆ ಬಂದ್ ಆಗಲಿದೆ. ಬೆಳಿಗ್ಗೆ 7:30ರಿಂದ 10:30ರೊಳಗೆ ಪೂಜೆ ನೆರವೇರಿಸಲು ಸೂಚನೆ ನೀಡಲಾಗಿದೆ. ಮಾರ್ಚ್ 3ರ ಬೆಳಗಿನ ಜಾವ 4 …

Read More »

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮರ್ಪಣೆ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದರು. ಶಿಕ್ಷಕರು ದೇಶದ ಭವಿಷ್ಯ ರೂಪಿಸುವವರು. ಒಂದು ಕಾಲದಲ್ಲಿ ಶಿಕ್ಷಣ 12-15% ಮಾತ್ರ ದೇಶದಲ್ಲಿ ಇತ್ತು. 74% ಇವತ್ತು ಸಾಕ್ಷರತೆ ಇದೆ. ಗುಣಮಟ್ಟದ ಶಿಕ್ಷಣ …

Read More »

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ  ರವಾನೆ ಮಾಡಲಾಗಿದೆ. ಮೃತರನ್ನ ಪತಿ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಹಾವೇರಿ ನಗರದ ನಿವಾಸಿಗಳಾಗಿದ್ದು, ನಿನ್ನೆ …

Read More »