ಬೆಳಗಾವಿ, ಏಪ್ರಿಲ್ 17: ಬೆಳಗಾವಿ ಲೋಕಸಭೆ ಉಪಚುನಾವಣೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಮತದಾನ ಮಾಡಿದ ಪ್ರಮುಖರಲ್ಲಿ ಮೊದಲಿಗರಾಗಿದ್ದು ವಿಶೇಷ. ವಿಶ್ವೇಶ್ವರಯ್ಯ ನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ ಎರಡರಲ್ಲಿ ಬೆಳಗ್ಗೆ 7 ಗಂಟೆಗೆ ಆಗಮಿಸಿದ ಮಂಗಲ ಅವರು ಮತದಾನ ಮಾಡಿದರು. ಮತಗಟ್ಟೆ ಆಗಮಿಸುತ್ತಿದ್ದಂತೆ ಮೊದಲಿಗೆ ಮತದಾರರ ಕಾಲು ಮುಗಿದು ಆಶೀರ್ವಾದ ಪಡೆದ ಮಂಗಲ ಅವರು ನಂತರ ಸರತಿ ಸಾಲಿನಲ್ಲಿ ನಿಂತರು. …
Read More »ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರಂತೆ ರಾಜ್ಯದಲ್ಲಿ ನಡೆಸುವ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳಿಗೆ ಹೆಚ್ಚಿನ ಮಿತಿಯನ್ನು ಹೇರಲಾಗಿದೆ. ಈ ಹೊಸ ಮಾರ್ಗಸೂಚಿಯು ಏಪ್ರಿಲ್ 30 ರ ವರೆಗೆ ಜಾರಿಯಲ್ಲಿರಲಿದೆ. ಮಾರ್ಗಸೂಚಿಗಳು : – ತೆರೆದ ಪ್ರದೇಶದಲ್ಲಿ ನಡೆಸುವ ಮದುವೆ ಕಾರ್ಯಕ್ರಮಗಳಲ್ಲಿ 200 ಮಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಹಾಗೂ ಕಲ್ಯಾಣ …
Read More »ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!
ಬೆಂಗಳೂರು : ಏಪ್ರಿಲ್ 18 ರಂದು ಸಿಎಂ ಯಡಿಯೂರಪ್ಪ ಕರೆದಿದ್ದ ಸರ್ವ ಪಕ್ಷ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ಏಪ್ರಿಲ್ 18 ಸಂಜೆ 4 ಗಂಟೆಗೆ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಕೋವಿಡ್ ನಿಯಂತ್ರಣ ಸಂಬಂಧ ಎಲ್ಲಾ ಪಕ್ಷದ ಮುಖಂಡರ ಜೊತೆ ಸಲಹೆ ಪಡೆಯುವ ಉದ್ದೇಶದಿಂದ ಸಿಎಂ ಸಭೆ ಕರೆದಿದ್ದರು. ಸಭೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಸಭೆಯನ್ನು ದಿಢೀರ್ ಮುಂದೂಡಿಕೆ …
Read More »ನೌಕರರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗ್ತಿದ್ದಾರೆ, ಮೊಂಡುತನ ಒಳ್ಳೆಯದಲ್ಲ- ಕೋಡಿಹಳ್ಳಿ
ಬೆಂಗಳೂರು: 6ನೇ ವೇತನ ಆರೋಗ ಶಿಫಾರಸುಗಳನ್ನು ಜಾರಿ ಮಾಡುವಂತೆ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ 11ನೇ ದಿನದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಈಗ ಇಲಾಖೆ ಅವರು ಸಾರಿಗೆ ನೌಕರರಿಗೆ ಸಂಬಳ ಕೊಟ್ಟಿಲ್ಲ ಅಂತ ಹೇಳಿದರೆ ನಮ್ಮ ದೂರನ್ನ ಪರಿಗಣಿಸಿ ಸಂಬಳ ಕೊಡಿಸುವ ಕೆಲಸ ಮಾಡಬೇಕಿತ್ತು. ಆದರೆ ಕಾರ್ಮಿಕರ …
Read More »ರಸ್ತೆ ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ- KSRTC ಕಚೇರಿ ವಸ್ತುಗಳು ಜಪ್ತಿ
ಗದಗ: ಅಪಘಾತದಿಂದ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಕ್ಕೆ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿ ಇರುವ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯಲ್ಲಿನ ಕಂಪ್ಯೂಟರ್, ಮಾನಿಟರ್, ಸಿಪಿಯು ಸೇರಿದಂತೆ ಹಲವಾರು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಪಾಟೀಲ್ ಅವರ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಏನಿದು ಪ್ರಕರಣ? 2009ರಲ್ಲಿ …
Read More »ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ನಿನ್ನೆ ಮಧ್ಯಾಹ್ನದಿಂದ ಹರಿದಾಡುತ್ತಲೇ ಇತ್ತು. ಇದೀಗ ಇದೇ ವಿಚಾರವಾಗಿ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ಆದರೆ ವೈದ್ಯರು ಇನ್ನೂ ಕೆಲವು ದಿನಗಳ ಕಾಲ ಸಂಪೂರ್ಣ ರೆಸ್ಟ್ ಮಾಡಬೇಕೆಂದು ಹೇಳಿದ್ದಾರೆ. ಹೀಗಾಗಿ …
Read More »ಮದುವೆ ಸಮಾರಂಭಗಳಲ್ಲಿ ನೂರು ಜನ ಮೀರಬಾರದು: ಸಚಿವ ಸುಧಾಕರ್
ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಅತಿ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಒಳಾಂಗಣ ಮದುವೆ ಸಮಾರಂಭಕ್ಕೆ ನೂರು ಜನ ಮತ್ತು ಹೊರಾಂಗಣ ಮದುವೆ ಸಮಾರಂಭಕ್ಕೆ ಇನ್ನೂರು ಜನರಿಗಿಂತ ಹೆಚ್ಚು ಮಂದಿ ಸೇರಬಾರದು ಎಂದು ಸಚಿವ ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೈಕ್ರೋ ಕಂಟೋನ್ಮೆಂಟ್ ಹೆಚ್ಚಳ ಮಾಡುತ್ತೇವೆ ಎಂದರು. ಎರಡನೇ ಅಲೆಯಲ್ಲಿ ಶೇ.95 ರಷ್ಟು ಜನರಿಗೆ ಆಸ್ಪತ್ರೆ ಚಿಕಿತ್ಸೆ ಬೇಕಿಲ್ಲ. ಕೇವಲ ಶೇ.5ರಷ್ಟು ಜನರಿಗೆ ಮಾತ್ರ …
Read More »ಕಾಂಗ್ರೆಸ್ ಶಾಸಕಿ ʼಲಕ್ಷ್ಮಿ ಹೆಬ್ಬಾಳ್ಕರ್ʼ ಮತ್ತವರ ಕುಟುಂಬದ 8 ಸದಸ್ಯರಿಗೆ ʼಕೊರೊನಾ ಪಾಸಿಟಿವ್ʼ
ರಾಜ್ಯದಲ್ಲಿ ಕೊರೊನಾದ 2ನೇ ಅಲೆ ಉಲ್ಭಣವಾಗ್ತಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವ್ರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಆತಂಕಕಾರಿ ಅಂಶವೆಂದ್ರೆ ಶಾಸಕಿ ಮತ್ತವ್ರ ಕುಟುಂಬದ 8 ಮಂದಿಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ ಎಂದು ಹೇಳಲಾಗ್ತಿದೆ. ಬೆಳಗಾವಿ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಕುಟುಂಬದ 8 ಜನರಿಗೆ ಸೋಂಕು ದೃಢಪಟ್ಟಿದ್ದು, ಅವ್ರ ಕಾರು ಚಾಲಕ ಮತ್ತು ಮನೆಯ ಅಡುಗೆ ಭಟ್ಟರಿಗೂ ಸೋಂಕು ತಗುಲಿದೆ ಎನ್ನುವ …
Read More »ಪೊಲೀಸರೇ ಈ ರೀತಿ ಮಾಡಿದರೆ ಕನ್ನಡ ಪರ ಸಂಘಟನೆಗಳು ಕನ್ನಡ ಉಳಿಸೋದು ಹೇಗೆ?’ ಕಪಾಳಮೋಕ್ಷ ಮಾಡಿದ ಪೊಲೀಸ್ಗೆ ಕರವೇ ಪ್ರಶ್ನೆ
ಬೆಂಗಳೂರು: ಚೀಟಿಂಗ್ ಪ್ರಕರಣವೊಂದರ ಆರೋಪಿಗಳಾಗಿದ್ದ ರಂಗಸ್ವಾಮಿ ಹಾಗೂ ಲೋಕೇಶ್ ಎಂಬ ಪೊಲೀಸರ ವಶದಲ್ಲಿದ್ದ ವ್ಯಕ್ತಿಗಳನ್ನು ಮಾತನಾಡಿಸಿದ ಆರೋಪದಡಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಉಪಾಧ್ಯಕ್ಷ ಉಮೇಶ್ಗೌಡಗೆ ನೆಲಮಂಗಲ ಟೌನ್ ಠಾಣೆಯ ಎಸ್ಐ ಸುರೇಶ್ ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷಮಾಡಿರುವುದನ್ನು ಖಂಡಿಸಿ ನೆಲಮಂಗಲ ಟೌನ್ ಪೊಲೀಸ್ ಠಾಣೆ ಎದುರು ಕರವೇ ಕಾರ್ಯಕರ್ತರು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪಿಎಸ್ಐ ಸುರೇಶ್ರನ್ನು ಅಮಾನತು ಮಾಡುವಂತೆ …
Read More »ಉಪ ಚುನಾವಣೆ ಮತದಾನಕ್ಕೆ ನೌಕರರಿಗೆ ವೇತನ ಸಹಿತ ರಜೆ ಘೋಷಣೆ
ಬೆಂಗಳೂರು: ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಏಪ್ರಿಲ್ 17 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ ಕಾಲೇಜು, ಅನುದಾನ ರಹಿತ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು, ಸಹಕಾರ ಸಂಘ ಸಂಸ್ಥೆಗಳು ಖಾಸಗಿ ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾಯಂ ಹಾಗೂ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುರ್ತು ಸೇವೆಯಲ್ಲಿರುವ …
Read More »
Laxmi News 24×7