Breaking News
Home / ಜಿಲ್ಲೆ (page 762)

ಜಿಲ್ಲೆ

ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರು ಇಂಡಿಯಾ ಗೇಟ್​​ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್​ಗೆ ಬೆಂಕಿ ಹಚ್ಚಿದ್ದಾರೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ ಗುಂಪಾಗಿ ಬಂದು ಟ್ರಾಕ್ಟ್​​​ರ್​ಗೆ ಬೆಂಕಿಯಿಟ್ಟಿದ್ದಾರೆ. ಸದ್ಯ ಹೊತ್ತಿಯುರಿಯುತ್ತಿದ್ದ ಬೆಂಕಿಯನ್ನು ಆರಿಸಲಾಗಿದ್ದು, ನಡುರಸ್ತೆಯಿಂದ ಟ್ರ್ಯಾಕ್ಟರ್​ ತೆಗೆಯಲಾಗಿದೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ …

Read More »

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಹತ್ಯೆ

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಮೂರು ವರ್ಷದ ಬಾಲಕಿಯನ್ನು ಪೂಜಾರಿ ಕೋಲಿನಿಂದ ಹೊಡೆದು ಸಾಯಿಸಿದ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಪ್ರವೀಣ್‌ ಹಾಗೂ ಶಾಮಲಾ ದಂಪತಿಯ ಪುತ್ರಿ ಪೂರ್ವಿಕಾ ಮೃತ ಬಾಲಕಿ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶ್‌ (19) ಎಂಬಾತನನ್ನು ಚಿಕ್ಕಜಾಜೂರು ಪೊಲೀಸರು ಬಂಧಿಸಿದ್ದಾರೆ. ಮೌಢ್ಯ ನಿಷೇದ ಕಾಯ್ದೆ-2017ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘ಪೂರ್ವಿಕಾ ಮೂರು ದಿನಗಳಿಂದ ಸರಿಯಾಗಿ ಊಟ ಮಾಡುತ್ತಿರಲಿಲ್ಲ. ಬಾಲಕಿಗೆ ದೆವ್ವ ಹಿಡಿದಿದೆ ಎಂದಿದ್ದ …

Read More »

ಖಾಸಗಿ ಬಸ್ ಗಳ ಆರ್ಥಿಕ ಸಂಕಷ್ಟ

ಶಿವಮೊಗ್ಗ: ಲಾಕ್‌ಡೌನ್ ತೆರವು ಬಳಿಕ ಸರ್ಕಾರಿ ಕಚೇರಿ ಆರಂಭಗೊಂಡಿರುವುದರ ಜೊತೆಗೆ ಎಲ್ಲ ರೀತಿಯ ವ್ಯಾಪಾರ-ವಹಿವಾಟುಗಳು ನಡೆಯುತ್ತಿವೆ. ಮಾರುಕಟ್ಟೆ, ಮದುವೆ ಸಮಾರಂಭಗಳಲ್ಲೂ ಜನಸಂದಣಿ ಕಾಣುತ್ತಿದ್ದೇವೆ. ಆದರೆ, ಬಸ್‌ಗಳು ಮಾತ್ರ ‘ಪ್ರಯಾಣಿಕರ ಬರ’ ಎದುರಿಸುತ್ತಿವೆ. ಅದರಲ್ಲೂ ಖಾಸಗಿ ಬಸ್‌ಗಳತ್ತ ಜನ ಸುಳಿಯುತ್ತಿಲ್ಲ. ನಗರ ಪ್ರದೇಶಗಳನ್ನು ಹೊರತುಪಡಿಸಿದರೆ ಜಿಲ್ಲೆಯ ಬಹುತೇಕ ಗ್ರಾಮೀಣ ಜನರ ಸಂಚಾರಕ್ಕೆ ಖಾಸಗಿ ಬಸ್‌ಗಳೇ ಆಧಾರ. ಕೊರೊನಾ ಲಾಕ್‌ಡೌನ್‌ನಿಂದ ಸಂಚಾರ ಸ್ಥಗಿತಗೊಳಿಸಿದ್ದ ಖಾಸಗಿ ಬಸ್‌ ಉದ್ಯಮ ಇಂದಿಗೂ ಚೇತರಿಕೆ ಕಂಡಿಲ್ಲ. ನಷ್ಟದಲ್ಲೇ ತೆವಳುತ್ತಿದೆ. …

Read More »

ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಹೆಚ್.ಕೆ. ಪಾಟೀಲ್, ನಾನು ಕೊರೊನಾ ತಪಾಸಣೆಗೆ ಒಳಗಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ತಾವು ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.ರೋಗದ ಯಾವುದೇ …

Read More »

ಬೆಳಗಾವಿ : ಬಂದ್ ಗೆ ಹಲವು ಸಂಘಟನೆಗಳು ಬೆಂಬಲ

ಬೆಳಗಾವಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಹಾಗೂ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ಆರೋಪಿಸಿ ರೈತ, ದಲಿತ ಮತ್ತು ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೆ. 28ರ ರಾಜ್ಯ ಬಂದ್‌ಗೆ ಇಲ್ಲಿನ ಕನ್ನಡ, ದಲಿತ ಮತ್ತು ರೈತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಪದಾಧಿಕಾರಿಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಭಾಗವಹಿಸುವುದಾಗಿ ತಿಳಿಸಿದರು. …

Read More »

ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು ರೈತ ಪರ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು: ಈರಣ್ಣ ಕಡಾಡಿ

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಕೃಷಿಗೆ ಸಂಬಂಧಿಸಿದ ನೀತಿಗಳು ಕೃಷಿಕರ ಪರವಾಗಿವೆ. ಆದರೆ, ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರನ್ನು ಎತ್ತಿ ಕಟ್ಟುತ್ತಿವೆ’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು. ರೈತ ಪರ …

Read More »

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.

Read More »

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು. ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು. ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು. ‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. …

Read More »

ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್‌ :ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಕಾಯ್ದೆಗಳ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್‌ ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ರಾಜ್ಯ ರೈತ ಸಂಘದ ವಿವಿಧ ಬಣಗಳು, ಕೇಂದ್ರಿಯ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ( ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್), ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯ ವೇದಿಕೆ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿ …

Read More »

ಬಾಗಿಲು ತೆರೆದು ಅಂಗಡಿ ಮುಂದೆ ಸಾಷ್ಟಾಂಗ ನಮಸ್ಕಾರ

ಚಾಮರಾಜನಗರ: ಬಂದ್ ಗೆ ಕರೆ ನೀಡಿದ್ದರೂ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಅಂಗಡಿ ಮುಂದೆ ಕನ್ನಡ ಪರ ಹೋರಾಟಗಾರ ನಿಜಧ್ವನಿ ಗೋವಿಂದ ರಾಜು ಸಾಷ್ಟಾಂಗ ನಮಸ್ಕಾರ ಹಾಕಿ ಬಾಗಿಲು ಮುಚ್ಚಲು ಮನವಿ ಮಾಡಿದರು. ಪ್ರತಿಭಟನಾಕಾರರ ಕೋರಿಕೆ ಮೇರೆಗೆ ಅಂಗಡಿ ಬಾಗಿಲು ಹಾಕಲಾಯಿತು. ನಗರದಲ್ಲಿ ಬೈಕ್‌ ರ್ಯಾಲಿ ನಡೆಸುತ್ತಿರುವ ರೈತರು ತೆರೆದಿದ್ದ ಅಂಗಡಿಗಳ ಮುಚ್ಚಿಸುತ್ತಿದ್ದಾರೆ‌. ನಗರದ ಸಂತೇಮರಳ್ಳಿ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಅನ್ನು ಮುಚ್ಚಲು ಕೈ ಮುಗಿದು …

Read More »