Breaking News

ಜಿಲ್ಲೆ

ಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪ

ಬೆಂಗಳೂರು, ಏಪ್ರಿಲ್ 13; “ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ” ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಬಸವಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, “ಮೇ 2ರ ತನಕ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ” ಎಂದರು. ತಾಂತ್ರಿಕ ಸಹಲಾ ಸಮಿತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ …

Read More »

ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ- ಸಿಎಂ ಬಿಎಸ್ ವೈ

ಬೆಂಗಳೂರು : ಇಂದು ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನರಿಗೆ ಸಿಎಂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಬಳಿಕ ನೌಕರರ ಮುಷ್ಕರದ ಬಗ್ಗೆ ಬಸವ ಕಲ್ಯಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಬ್ಬಹರಿದಿನಗಳಲ್ಲಿ ಈ ರೀತಿ ಮಾಡೋದು ಸರಿಯಿಲ್ಲ. ಹಠವನ್ನು ಬಿಟ್ಟು ಕೆಲಸಕ್ಕೆ ಹಾಜರಾಗಬೇಕು. ಕೆಲಸಕ್ಕೆ ಹಾಜರಾಗದವರಿಗೆ ಸಂಬಳ ಕೊಡಲ್ಲ ಎಂದು ಹೇಳಿದ್ದಾರೆ. ಸದ್ಯಕ್ಕೆ ಲಾಕ್ ಡೌನ್ ಇಲ್ಲ. ಏ.18, 19ಕ್ಕೆ ಸರ್ವಪಕ್ಷದ ಸಭೆ …

Read More »

7 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದುಉ 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಸಾರಿಗೆ ನೌಕರರು ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕು ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ಕುರಿತು ಮಾತನಾಡಿರುವ …

Read More »

ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

ನವದೆಹಲಿ : ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ. ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದು, ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು, ಮುಂಬರುವ ವರ್ಷ ಅದ್ಭುತಬವಾಗಲಿ, ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ, ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ ಎಂದು ಶುಭಕೋರಿದ್ದಾರೆ. ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ. ಕೊರೊನಾ ನಡುವೆಯೂ ನಿಯಮಗಳನ್ನು ಪಾಲಿಸುವ ಮೂಲಕ …

Read More »

ಮಸ್ಕಿಯಲ್ಲಿ ಮಾಜಿ ಶಾಸಕ ಎನ್.ಎಸ್.ನಂದೀಶ್ ಹಣ ಹಂಚಿಕೆ

ರಾಯಚೂರು: ಮಸ್ಕಿ ಉಪ ಚುನಾವಣಾ ಸಮರ ದಿನೇ ದಿನೇ ರಂಗೇರುತ್ತಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಮತ ನೀಡುವಂತೆ ಬಿಜೆಪಿ ಮಾಜಿ ಶಾಸಕ ಎನ್.ಎಸ್. ನಂದೀಶ್ ಹಣ ಹಂಚಿಕೆ ಮಾಡಿದ್ದಾರೆ. ಹಣ ಹಂಚಿಕೆ ಮಾಡಿದವರ ಹಾಗೂ ಹಣ ಪಡೆದವರ ವಿರುದ್ಧ ಮಸ್ಕಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಅಮಿತ್, ಚಿಟ್ಟಿಬಾಬು, ಹಣ ಪಡೆದ ವೃದ್ದೆ ತಾಯಮ್ಮ ಮೂವರನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. …

Read More »

ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರ ಮತಬೇಟೆ

ಬೆಳಗಾವಿ: ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಮತಬೇಟೆಗೆ ಅಖಾಡಕ್ಕೆ ಇಳಿದಿದ್ದು, ರಕ್ಷಾ ರಾಮಯ್ಯ ನೇತೃತ್ವದಲ್ಲಿ ಮೊದಗಾ ಗ್ರಾಮದಲ್ಲಿ ಬೈಕ್ ರ್ಯಾಲಿ ಕೈಗೊಳ್ಳುವ ಮುಖೇನ ಸತೀಶ್ ಜಾರಕಿಹೊಳಿ ಪರ ಮತ ಪ್ರಚಾರ ನಡೆಸಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯನವರು ಯುವ ಕಾಂಗ್ರೆಸ್ ಶಕ್ತಿಯಿಂದಾಗಿಯೇ ಭಾರತವು ಇಂದು …

Read More »

ಗೋಕಾಕ ಮತ್ತು ಅರಬಾವಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಬೆಳಗಾವಿಗೆ ಮತ್ತೆ ಸಿಎಂ B.S.Y.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಭಾರತೀಯ ಜನತಾ ಪಾರ್ಟಿ ಈಗ ಗೋಕಾಕ ಮತ್ತು ಅರಬಾವಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದೆ.                       ಗೋಕಾಕ ಮತ್ತು ಅರಬಾವಿ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಮತಗಳು ಹೆಚ್ಚಿದ್ದು, ಆ ಮತಗಳು ಸತೀಶ್ ಜಾರಕಿಹೊಳಿಗೆ ಹೋದಲ್ಲಿ ಬಿಜೆಪಿ ಬೆಳಗಾವಿ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕ ಉಂಟಾಗಿದೆ. ರಮೇಶ …

Read More »

ಕೊರೊನಾ ಕೂಪವಾಯ್ತು ಬೆಂಗಳೂರು : ಇಂದು ಮತ್ತೆ ಕೊರೊನಾ ಬ್ಲಾಸ್ಟ್ Corona

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದೆ. ನಗರದ ಗಲ್ಲಿ ಗಲ್ಲಿಯಲ್ಲೂ ಕೊರೊನಾ ಕೇಸ್ ಗಳು ಪತ್ತೆಯಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಒಂದೇ ದಿನ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಮೆಟ್ರೋ ಮಂದಿಗೆ ಆಘಾತ ನೀಡಿದ್ದರೇ ಇಂದು ಮತ್ತೆ ಕೊರೊನಾ ಬ್ಲಾಸ್ಟ್ ಆಗುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ ಇಂದು 6574 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ಬೆಂಗಳೂರು ದಕ್ಷಿಣ ವಿಭಾಗದಲ್ಲೇ ಅತಿ ಹೆಚ್ಚು …

Read More »

”ಉತ್ತರ ಕರ್ನಾಟಕಕ್ಕೆ ಪ್ರಮುಖ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಕಾನೂನಾತ್ಮಕ ಹೋರಾಟ”

ಬೆಂಗಳೂರು, ಎ. 11: ಉತ್ತರ ಕರ್ನಾಟಕದ ಜನತೆಯ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಪ್ರಮುಖ ಇಲಾಖೆಯ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಬೇಕು. ಈ ಕುರಿತಂತೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ರೈತರ ಅಭಿವೃದ್ದಿ ಸಂಘದ ಅಧ್ಯಕ್ಷ ಯಾಸೀರ್ ಜವಳಿ, ನ್ಯಾಯವಾದಿ ಶೇಖ್ ಸೌದ್ ತಿಳಿಸಿದ್ದಾರೆ. ರವಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿಯೇ ರಾಜ್ಯ ಸರಕಾರ ಗೆಜೆಟ್ ಹೊರಡಿಸಿ ಅನೇಕ ಪ್ರಮುಖ ಇಲಾಖೆ ಕಚೇರಿಗಳನ್ನು …

Read More »

ಬಸವಕಲ್ಯಾಣದಲ್ಲಿ ಸಿಎಂ ಕಾರಿಗೆ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ

ಬೀದರ್ : ಉಪ ಚುನಾವಣೆ ಪ್ರಚಾರ ಹಿನ್ನೆಲೆ ಬಸವಕಲ್ಯಾಣ ನಗರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ಅವರ ಕಾರನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಹಾಗೂ ಕಾರ್ಯಕರ್ತರು ತಡೆದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಈ ವೇಳೆ ಮುತ್ತಿಗೆ ತಡೆಯಲು ಪೊಲೀಸರು ಹರಸಾಹಸ ಪಟ್ಟರು. ನಗರಕ್ಕೆ ಸಿ.ಎಂ ಆಗಮಿಸುತ್ತಿದಂತೆ ಮಲ್ಲಿಕಾರ್ಜುನ ಖೂಬಾ ನಿವಾಸದ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ಸಿ‌ಎಂ ಸಂಚರಿಸುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಸಿ.ಎಂ …

Read More »