ಬೆಂಗಳೂರು : ಗಂಡ ಹೆಂಡ್ತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತು ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳೇ ಸಾಕ್ಷಿ. ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಜಟಾಪಟಿ ಎರಡನೇ ದಿನವೂ ಮುಂದುವರೆದಿದ್ದು, ಇವರಿಬ್ಬರ ಮಧ್ಯೆ ಸಿಲುಕಿರುವ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸರ್ಕಾರವೇನೋ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್ಗಳ ಮೊರೆ ಹೋಗಿದೆ. ಆದರೆ, ಸರಿಯಾದ ಸಮಯಕ್ಕೆ ನಿಗದಿತ ಸ್ಥಳಕ್ಕೆ ತಲುಪಲಾಗದೇ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ನಗರ ಸಾರಿಗೆ ಬಸ್‌ಗಳು …
Read More »ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ, ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ
ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ ದುರ್ದೈವದ ವಿಚಾರವಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಸಾರಿಗೆ ನೌಕರರ ವೇತನ …
Read More »ಸಂಚರಿಸದ KSRTC-BMTC ಬಸ್‌ಗಳು: ಪ್ರಯಾಣಿಕರ ಸಂಚಾರಕ್ಕೆ ಅಡಚಣೆ
ಬೆಂಗಳೂರು : ವಿವಿಧ ಬೇಡಿಕೆಗಳು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳ ಸಾರಿಗೆ ನೌಕರರು ಮುಂಜಾನೆಯಿಂದ ಬಸ್‌ಗಳನ್ನು ಡಿಪೋಗಳಿಂದ ಹೊರತೆಗೆಯದೇ ಪ್ರತಿಭಟನೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಅಡಚಣೆ ಉಂಟಾಗಿದೆ. ಸದಾ ಜನಜಂಗುಳಿಯಿಂದ ಜುನುಗುಡುತ್ತಿದ್ದ ಕೆಂಪೇಗೌಡ ಬಸ್ ನಿಲ್ದಾಣದ ಬಸ್‌ಗಳಿಲ್ಲದೇ ಬಣಗುಡುತ್ತಿದೆ. ಮುಂಜಾನೆ 5 ಗಂಟೆಯಿಂದ ಕೆಲ ಖಾಸಗಿ ಬಸ್‌ಗಳು ಮಾತ್ರ ಸಂಚಾರ ಆರಂಭಿಸಿವೆ. ಆದರೆ ಸಮರ್ಪಕ ಸೇವೆ ಸಿಗದೇ ಪ್ರಯಾಣಿಕರು ತೀವ್ರ ಬೇಸರವನ್ನು ಹೊರಹಾಕುತ್ತಿದ್ದಾರೆ. …
Read More »ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ. ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ. ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ …
Read More »ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ
ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ
Read More »ಮನೆಗಳ್ಳನ ಬಂಧನ; ೨೩,೧೫,೦೦೦/- ರೂ. ಮೌಲ್ಯದ ಬಂಗಾರದ ಆಭರಣ, ಹಾಗೂ ೬೦ ಸಾವಿರ ನಗದು ವಶಕ್ಕೆ
ಬೆಳಗಾವಿ – ದಿನಾಂಕ:೦೩-೦೪-೨೦೨೧ ರಂದು ಗೌಸಮೋದಿನ ಮೈನುದ್ದಿನ ತೋರಗಲ್ಲ, ಬೆಳಗಾವಿ ಇವರು ದಿನಾಂಕ: ೦೨-೦೪-೨೦೨೧ ರಂದು ರಾತ್ರಿ ವೇಳೆಯಲ್ಲಿ ಸಂಗಮೇಶ್ವರ ನಗರದಲ್ಲಿರುವ ತಮ್ಮ ಮನೆಯಲ್ಲಿದ್ದ ೪೭೦ ಗ್ರಾಂ ಬಂಗಾರದ ಆಭರಣ ಹಾಗೂ ಒಂದು ಲಕ್ಷ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ನೀಡಿದ ದೂರಿನನ್ವಯ ಎ.ಪಿ.ಎಮ್.ಸಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಮೊಹ್ಮದಸಲ್ಮಾನ ನಸೀರಅಹ್ಮದ ಅನ್ಸಾರಿ ( ವಯಾ: ೨೨ ವರ್ಷ, ಸಾ: ಸಿಕಂದರಪೂರ, …
Read More »ಖಾಸಗಿ ಆಸ್ಪತ್ರೆಗಳ ಅರ್ಧದಷ್ಟು ಬೆಡ್ಗಳು ಕೊರೋನಾ ಸೋಂಕಿತರಿಂದಲೇ ಭರ್ತಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇದರ ಪರಿಣಾಮ ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಅರ್ದಕ್ಕರ್ದದಷ್ಟು ಬೆಡ್ ಗಳು ಕೊರೋನಾದಿಂದ ಫುಲ್ ಆಗುತ್ತಿವೆ. ಇದೇ ವೇಗದಲ್ಲಿ ಕೊರೊನಾ ಕೇಸ್ ಹೆಚ್ಚಾದ್ರೆ ಆಸ್ಪತ್ರೆಗಳಲ್ಲಿ ಬೆಡ್ಗಳೇ ಸಿಗೋದು ಡೌಟು. ರಾಜ್ಯದಲ್ಲಿ 2ನೆ ಅಲೆ ಕೊರೊನಾ ಅತಿ ಹೆಚ್ಚು ಪರಿಣಾಮಕಾರಿಯಾಗಿದೆ. ಕಳೆದ ವರುಷವಂತೂ ಕೊರೊನಾಗೆ ಸಾಕಷ್ಟು ನಲುಗಿದ್ದ ಜನತೆ ಈ ಬಾರಿಯೂ ಎರಡನೇ ಅಲೆಗೆ ತೊಂದರೆ ಎದುರಿಸುತ್ತಿದ್ದಾರೆ. …
Read More »ಕೆಲಸಕ್ಕೆ ಹಾಜರಾಗದಿದ್ದರೆ ಮಾರ್ಚ್ ತಿಂಗಳ ವೇತನ ಕಟ್ :ಬಿಎಂಟಿಸಿ ಎಂಡಿ ಶಿಖಾ
ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಪರಿಣಾಮ 135 ಬಸ್‌ಗಳು ಮಾತ್ರ ಇವತ್ತು ಸಂಚಾರ ಮಾಡುತ್ತಿವೆ. ನಗರದ ಯಶವಂತಪುರ ಬಸ್ ನಿಲ್ದಾಣಕ್ಕೆ ಬಿಎಂಟಿಸಿ ಎಂಡಿ ಶಿಖಾ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಅವರು, ಬೆಂಗಳೂರಿನಲ್ಲಿ ಈವರೆಗೆ 135 ಬಿಎಂಟಿಸಿ ಬಸ್‌ಗಳು ಮಾತ್ರ ಸಂಚರಿಸುತ್ತಿವೆ. ಮಂಗಳವಾರದ ಸಭೆಯಲ್ಲಿನ ತೀರ್ಮಾನದಂತೆ ಪರ್ಯಾಯವಾಗಿ ಖಾಸಗಿ ಬಸ್ಗಳನ್ನ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ …
Read More »ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಯಲಿದೆ : ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಏ.7- ಆರನೆ ವೇತನ ಜಾರಿಯಾಗುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್‍ಗಳಿಂದ ಸರ್ಕಾರಕ್ಕೆ ನಷ್ಟವೇ ಹೊರತು ಲಾಭವಿಲ್ಲ. ಸರ್ಕಾರ ಅವೈಜ್ಞಾನಿಕ ಪ್ರಯತ್ನ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು. ಬಂದ್ ಯಶಸ್ಸಿಗೆ ಸಾರಿಗೆ ನೌಕರರ ನೋವುಗಳೇ ಕಾರಣ. ಹಲವು ದಿನಗಳಿಂದ ಅವರಿಗೆ ಸಾಕಷ್ಟು ಸಮಸ್ಯೆಗಳಿವೆ. ವ್ಯಕ್ತಿ ಪ್ರತಿಷ್ಠೆಗಿಂತ ನೌಕರರ ಸಮಸ್ಯೆ ಬಗೆಹರಿಸುವುದು …
Read More »ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!
ಬೆಂಗಳೂರು: ಆರನೇ ವೇತನ ಆಯೋಗ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದು, ಯಾವುದೇ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಸರ್ಕಾರ, ಅಧಿಕಾರಿಗಳ ಮನವಿಗೆ ನೌಕರರು ಸೊಪ್ಪು ಹಾಕದೆ ಇರುವುದರಿಂದ ನೌಕರರಿಗೆ ಶಾಕ್ ನೀಡಲು ಸರ್ಕಾರ ನಿರ್ಧರಿಸಿದೆ. ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ನೌಕರರ ಮಾರ್ಚ್ ತಿಂಗಳ ವೇತನ ತಡೆಯಲು ಸರ್ಕಾರ ಮುಂದಾಗಿದೆ. ಪ್ರತಿ ತಿಂಗಳು 10ನೇ ತಾರೀಖಿನೊಳಗೆ ನಿಗಮಗಳು ನೌಕರರಿಗೆ ವೇತನ ನೀಡುತ್ತಿದ್ದವು. ಆದರೆ …
Read More »
Laxmi News 24×7