Breaking News

ಜಿಲ್ಲೆ

ಚಿಕ್ಕೋಡಿ:ಭೀಕರ ಅಪಘಾತ ಯುವಕ ಸಾವು

ಚಿಕ್ಕೋಡಿ:ಬೇಡಕಿಹಾಳ-ಬೋರಗಾಂವ ರಸ್ತೆಯಲ್ಲಿರುವ ಶಿರದವಾಡ ಗ್ರಾಮದ ವ್ಯಾಪ್ತಿಯಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಿಖಿಲ್ ಸದಾನಂದ ಸಾವಂತ (25 ವಯಸ್ಸು ಸಂಕೇಶ್ವರದ ಬಸವೇಶ್ವರ ಗಲ್ಲಿ ನಿವಾಸಿ). ಬುಧವಾರ ಈ ಅಪಘಾತ ನಡೆದಿದೆ. ಘಟನೆಯನ್ನು ಸದಲಗಾ ಪೊಲೀಸರಿಗೆ ದಾಖಲಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯೆಂದರೆ ನಿಖಿಲ್ ಸಾವಂತ್ ಬೆಡ್ಕಿಹಾಲ್ ಬೋರ್ಗಾಂವ್ ರಸ್ತೆಯಲ್ಲಿ ಬೈಕ್ ಸವಾರ ಮಾಡುತ್ತಿದ್ದರು. ಈ ಮಧ್ಯೆ, ಶಿರದ್ವಾಡ ಗ್ರಾಮದ ವ್ಯಾಪ್ತಿಗೆ ತಲುಪಿದಾಗ, ಬೈಕ್ ನಿಯಂತ್ರಣ ತಪ್ಪಿ …

Read More »

ಲಾರಿಗೆ ಡಿಕ್ಕಿ ಹೊಡೆದ ಕಾರು: ಮೂವರು ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತರನ್ನು ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35) ಮತ್ತು ಲೋಹಿತ್ (40) ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ …

Read More »

ಗಂಡನ ಮನೆಯವರ ಕಿರುಕುಳಕ್ಕೆ ಮಹಿಳೆ ಸಾವು

ಬೆಳಗಾವಿ: ಗಂಡನ ಮನೆಯವರು ಕಿರುಕುಳ ಕೊಟ್ಟು ಊಟ, ನೀರು ಕೊಡದೇ ಮಗಳನ್ನು ಕೊಂದು ಹಾಕಿದ್ದಾರೆಂದು ಮೃತ ಮಹಿಳೆ ಕುಟುಂಬಸ್ಥರು ಕಣ್ಣೀರು ಹಾಕಿರುವ ಘಟನೆ ಬೆಳಗಾವಿ ಬಿಮ್ಸ್ ಆಸ್ಪತ್ರೆ ಎದುರಿಗೆ ನಡೆದಿದೆ. ಇಂದು ಬೆಳಗ್ಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಎದುರಿಗೆ ಎರಡು ಕುಟುಂಬಗಳ ನಡುವೆ ಬೆಳಗಾವಿ ಜಿಲ್ಲಾಸ್ಪತ್ರೆಯ ಓಪಿಡಿಯಲ್ಲೇ ಗಲಾಟೆ ನಡೆದಿದೆ. ಗಂಡನ ಮನೆಯವರ ಕಿರುಕುಳಕ್ಕೆ ನಸ್ತಹೀನ್ ದೇಸಾಯಿ (25) ಎಂಬ ಮಹಿಳೆ ಸಾವನ್ನಪ್ಪಿದ್ದು, ಮಹಾರಾಷ್ಟ್ರ ಚಂದಗಡ ಮೂಲದ ಗಂಡ ರೇಹಾನ್ …

Read More »

ಚಿಕ್ಕೋಡಿ:ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕೋಡಿ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಪಿಯು ಪರೀಕ್ಷೆಯನ್ನು ಬರೆಯುವದನ್ನು ಬಿಟ್ಟು ಜೀವನದ ಪರೀಕ್ಷೆಯನ್ನೆ ವಿದ್ಯಾರ್ಥಿನಿ ಮುಗಿಸಿದ್ದು ಹೃದಯಾಘಾತದಿಂದ ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ(17) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇಂದು PU ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿ ಸ್ನಾನ ಮುಗಿಸಿಕೊಂಡು ಮನೆಯಿಂದ ಹೊರ ಬರುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿದೆ. ಕೂಡಲೇ ಸ್ಥಳೀಯ …

Read More »

ಮಾರಕಾಸ್ತ್ರ ಹಿಡಿದು ಓಡಾಡಿದರೆ ರೌಡಿಶೀಟರ್ ಕೇಸ್

ಬೆಳಗಾವಿ: ನಗರದಲ್ಲಿ ಯಾರೇ ಆಗಲಿ ಶೋಕಿ ಮಾಡಲು ಹಾಗೂ ಬೇರೆಯವರನ್ನು ಹೆದರಿಸುವುದಕ್ಕೆ ಮಾರಕಾಸ್ತ್ರ ಹಿಡಿದು ಓಡಾಡಿದ್ದಲ್ಲಿ ಅಂಥವರ ವಿರುದ್ಧ ರೌಡಿಶೀಟರ್ ಕೇಸ್ ಹಾಕಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಸ್ತ್ರಾಸ್ತ್ರ ಕಾಯ್ದೆಯಡಿ 2025ರಲ್ಲಿ 38 ಪ್ರಕರಣಗಳಲ್ಲಿ 60 ಜನ, ಈ ವರ್ಷ 3 ಪ್ರಕರಣಗಳಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಕೆಲವರ ಮೇಲೆ ರೌಡಿ ಶೀಟ್ ತೆರೆಯಲಾಗುತ್ತಿದ್ದು, ಕೆಲವರಿಂದ …

Read More »

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ  ವೇಳೆ ಮಸೀದಿಯಿಂದ ಕಲ್ಲು ಎಸೆತ  ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಬಂಧಿಸಲು ಮುಂದಾದ ಪೊಲೀಸರನ್ನು ಮಹಿಳೆಯರು ಅಡ್ಡಗಟ್ಟಿ ಪ್ರತಿಭಟಿಸಿದ್ದಾರೆ. ಇಂದು ಪೊಲೀಸರು ಕಿಲ್ಲಾ ಓಣಿಯ ಯುವಕ ಮತ್ತು ಮಾಗಿಯನ್ನು ಬಂಧಿಸಿ ಕಾರಿನಲ್ಲಿ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಓಣಿಯ ಜನರು ಬಂಧಿಸದಂತೆ ತಡೆದಿದ್ದಾರೆ. ಕಲ್ಲೆಸೆತ ಮಾಡಿದ ಕಿಡಿಗೇಡಿಗಳನ್ನು ಬಿಟ್ಟು ಅಮಾಯಕರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಜನರು ಆಕ್ರೋಶ …

Read More »

ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1  ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಅಕ್ರಮ, ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆ ಪೂರ್ವ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ. ಮೊದಲ ದಿನವಾದ ಇಂದು ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ …

Read More »

ಡಿನ್ನರ್ ಗುತ್ತಿಗೆ ನಾವು ಪಡೆದಿಲ್ಲ…ಪದೋನ್ನತಿ ಬಗ್ಗೆ ಕಾಲ ಬಂದಾಗ ನಿರ್ಣಯ; ಸಚಿವ ಸತೀಶ್ ಜಾರಕಿಹೊಳಿ

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎನ್ನುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಶಾಸಕರು ಮತ್ತು ಪರಿಷತ್ ಸದಸ್ಯರು ಮುಖ್ಯಮಂತ್ರಿಗಳಿಗೆ ಸಚಿವ ಸ್ಥಾನಕ್ಕಾಗಿ ಪತ್ರ ಬರೆದಿರುವ ಬಗ್ಗೆ ಕೇಳಿದ …

Read More »

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

ಬೆಂಗಳೂರು: ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಮಹಿಳಾ ಮಾನಸಿಕ ಆರೋಗ್ಯ ಶೃಂಗಸಭೆಯನ್ನು  ಉದ್ಘಾಟಿಸಿ ಮಾತನಾಡಿದ ಸಚಿವರು, ಆರೋಗ್ಯಕರ ಮಹಿಳೆಯರು ಆರೋಗ್ಯಕರ ಕುಟುಂಬಗಳನ್ನು ನಿರ್ಮಿಸುತ್ತಾರೆ ಎಂದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಹತ್ತು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ Mpower ಸಂಸ್ಥೆಗೆ …

Read More »

ಸಾರ್ವಜನಿಕ ಆರೋಗ್ಯ ಸೇವೆಗೆ ಸಂಚಕಾರ?: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ರಾಜ್ಯ ವೈದ್ಯಾಧಿಕಾರಿಗಳ ಸಂಘ!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯಾಧಿಕಾರಿಗಳು, ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಅನಿವಾರ್ಯವಾಗಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಪ್ರತಿಭಟನೆ ನಡೆಸಿ ‌ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು‌. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೀಮಿತವಾದ ತಾಂತ್ರಿಕ ಹುದ್ದೆಗಳಾದ ರಾಜ್ಯದ ಮಹಾನಗರ ಪಾಲಿಕೆಯ ಕೆಲವು ಹುದ್ದೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಕರ್ನಾಟಕ ರಾಜ್ಯ …

Read More »