ಬೆಂಗಳೂರು : 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆಯ ಸ್ವರೂಪದ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹ ಗೊಂದಲಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪದ ಗೊಂದಲಕ್ಕೆ ತೆರೆ ಎಳೆದಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರು ಮಾಹಿತಿ …
Read More »ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು.: ಜಗದೀಶ್ ಕುಮಾರ್
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಪರ ವಾದಿಸುತ್ತಿರುವ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರು ‘ತಮಗೆ ಬಿಜೆಪಿ ಮುಖಂಡ ಮತ್ತು ಪೊಲೀಸರು ಕೊಟ್ಟ ಕಾಟದಿಂದ ಕುಟುಂಬದಿಂದ ದೂರಾದೆ’ ಎಂದು ಆರೋಪಿಸಿದ್ದಾರೆ. ‘ಕೊಡಿಗೇಹಳ್ಳಿ ಲೋಕ ಕಲ್ಯಾಣ ಟ್ರಸ್ಟ್ ಜಮೀನು ಪರಭಾರೆ ಮಾಡಿದ್ದ ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು. 13 ಕೇಸ್ ಹಾಕಿದರು. ಅವರು ಕೊಟ್ಟ ಹಿಂಸೆಯಿಂದ ನನ್ನ ಹೆಂಡತಿ ದೂರಾದಳು. ನನ್ನ ಬೆಳೆದ ಮಗ, …
Read More »ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ
ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು. ಸತೀಶ ಹಾಗೂ ಲಕ್ಷ್ಮಿ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ವಾಧ್ಯಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ ಅವರ ಪರ ಜೈಘೋಷಗಳನ್ನು ಕೂಗಿದರು. ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, “ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ …
Read More »ಮಹಾರಾಷ್ಟ್ರ ಮೂಲದ ಕಾರಿನಲ್ಲಿ ಹಣ ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ 42.71 ಲಕ್ಷ ನಗದು ವಶ
ಬೆಳಗಾವಿ: ಸಮರ್ಪಕ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 42.71 ಲಕ್ಷ ರೂಪಾಯಿ ನಗದು ಹಣವನ್ನು ಘಟಪ್ರಭಾ ಬಳಿಯ ಚೆಕ್ ಪೋಸ್ಟ್ ನಲ್ಲಿ ಬುಧವಾರ(ಮಾ.31) ವಶಪಡಿಸಿಕೊಳ್ಳಲಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಘಟಪ್ರಭಾ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕಾರ್ಯನಿರತ ಎಸ್.ಎಸ್.ಟಿ. ತಂಡವು ಮಹಾರಾಷ್ಟ್ರ ಮೂಲದ ಕಾರು ತಪಾಸಣೆ ನಡೆಸಿದಾಗ ನಗದು ಹಣ ಪತ್ತೆಯಾಗಿದೆ. ಮಂಗಸೂಳಿ ಮಾರ್ಗವಾಗಿ ಯರಗಟ್ಟಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಸೂಕ್ತ ದಾಖಲಾತಿಗಳು ಇಲ್ಲದಿರುವುದರಿಂದ …
Read More »HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್
ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …
Read More »ಸತೀಶ ಜಾರಕಿಹೊಳಿ ಆಸ್ತಿ ಮಂಗಲಾ ಅಂಗಡಿ ಆಸ್ತಿ ಎಷ್ಟು?
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಶಾಸಕ ಸತೀಶ ಜಾರಕಿಹೊಳಿ ಅವರ ಆಸ್ತಿಯು ಕಳೆದ 3 ವರ್ಷಗಳಲ್ಲಿ ಶೇ. 250ರಷ್ಟು ಹೆಚ್ಚಳವಾಗಿದೆ ಎಂದು ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿದು ಬಂದಿದೆ. ಅಫಿಡವಿಟ್ ಪ್ರಕಾರ, ಸತೀಶ ಜಾರಕಿಹೊಳಿ ಮತ್ತು ಅವರ ಕುಟುಂಬದವರು ₹ 148 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರೇ ಘೋಷಿಸಿದಂತೆ ಅವರ ಆಸ್ತಿ …
Read More »ಫೇವರೇಟ್ ಫುಡ್ ಬ್ಲಾಗರ್ ಜೊತೆ ಅಪ್ಪು!
ಬೆಂಗಳೂರು: ಬೆಂಗಳೂರು ಮೂಲದ ಖ್ಯಾತ ಫುಡ್ ಬ್ಲಾಗರ್ ಕೃಪಾಲ್ ಅಮನ್ನ ಅವರ ಜೊತೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಊಟ ಸವಿದಿದ್ದಾರೆ. ಅಂದ ಹಾಗೆ, ಲಾಕ್‌ಡೌನ್ ಸಂದರ್ಭದಲ್ಲಿ ಪುನೀತ್ ಅವರು ಕೃಪಾಲ್ ಅಮನ್ನ ಅವರ ಯೂಟ್ಯೂಬ್ ವಿಡಿಯೊಗಳನ್ನು ಹೆಚ್ಚು ನೋಡುತ್ತಿದ್ದರು. ಈ ಕುರಿತು ಇತ್ತೀಚೆಗಷ್ಟೇ ನಡೆದ ಯುವರತ್ನ ಸಿನಿಮಾ ಸುದ್ದಿಗೋಷ್ಠಿ ಸಂದರ್ಭದಲ್ಲಿ ಪುನೀತ್ ಹೇಳಿಕೊಂಡಿದ್ದರು. ‘ಲಾಕ್‌ಡೌನ್‌ನಲ್ಲಿ ಟಿವಿ, ಇಂಟರ್‌ನೆಟ್‌ನಲ್ಲೇ ಅರ್ಧ ಸಮಯ ಹೋಯಿತು. ಜೊತೆಗೆ ಹೊಸ ಅಡುಗೆಯ ಪ್ರಯೋಗ. ಪಕ್ಕಾ …
Read More »ಸಿದ್ದುಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ
ಬೆಳಗಾವಿ: ನಿಜವಾಗಿ ಸೈಡ್ ಆಯಕ್ಟರ್ ಯಾರು ಎಂಬುದು ಸಿದ್ದರಾಮಯ್ಯಗೆ ಚೆನ್ನಾಗಿ ಗೊತ್ತಿದೆ. ಅವರಿಗೆ 60 ವರ್ಷ ಮೇಲ್ಪಟ್ಟಾಗಿದ್ದರೂ ಈಗಲೂ ರಾಹುಲ್ ಗಾಂಧಿ ಮುಂದೆ ಕೈ ಕಟ್ಟಿ ನಿಲ್ಲುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಎಂತಹ ವ್ಯವಸ್ಥೆ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ. ಅವರು ಈಗಲೂ ತಮಗಿಂತ ಕಿರಿಯರಾದ, ಏನೂ …
Read More »ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್ಪೋರ್ಟ್ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ಪೋರ್ಟ್ನ ಟ್ಯಾಕ್ಸಿ …
Read More »ಮಹಾರಾಷ್ಟ್ರದ ಕೋಲ್ಹಾಪುರ ಮಹಾಲಕ್ಷ್ಮೀ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿ: ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೆಂಪಲ್ ರನ್ ಶುರು ಮಾಡಿದ್ದು, ಮಹಾರಾಷ್ಟ್ರದ ಕೋಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಸಂತ್ರಸ್ತ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ಇದರಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದು, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ. …
Read More »
Laxmi News 24×7