Breaking News

ಜಿಲ್ಲೆ

ವಿಜಯಪುರ : ಚಿಂದಿ ಆಯುವ ವಿವಾಹಿತೆ ಮೇಲೆ ಮೂವರಿಂದ ಅತ್ಯಾಚಾರಕ್ಕೆ ಯತ್ನ

ವಿಜಯಪುರ : ಚಿಂದಿ ಹಾಗೂ ಹಂದಿ ಗೊಬ್ಬರ ಸಂಗ್ರಹಿಸಿ ಜೀವನ ನಡರಸುತ್ತಿದ್ದ 23 ವರ್ಷದ ಗೃಹಿಣಿ ಮೇಲೆ ಮೂವರು ಕಾಮಾಂಧರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ವರದಿಯಾಗಿದೆ. ಮುದ್ದೇಬಿಹಾಳ ಪಟ್ಟಣದಲ್ಲಿ ಚಿಂದಿ, ಹಂದಿ ಗೊಬ್ಬರ ಆಯ್ದು ಜೀವನ‌ನಡೆಸುತ್ತಿರುವ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರನ್ನು ಗುರುತಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಅತ್ಯಾಚಾರಕ್ಕೆ ಯತ್ನಿಸಿದವರನ್ನು ಅಕ್ಬರ್ ಮಕಾನದಾರ, ಸಲೀಮ ನದಾಫ, ಸೋಯೆಲ್ ಹಡಗಲಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. …

Read More »

ಸಂಸತ್ ಚುನಾವಣೆವರೆಗೂ ಹೋರಾಟ ಎಂದ ರೈತ ನಾಯಕ

ಇಂದು ನಡೆಯುತ್ತಿರುವ ರೈತರ ಹೋರಾಟ ಕೇವಲ ಕೇಂದ್ರ ಸರ್ಕಾರದ ವಿರುದ್ಧವಲ್ಲ, ಸರ್ಕಾರವನ್ನು ಪರೋಕ್ಷವಾಗಿ ನಡೆಸುತ್ತಿರುವ ಅದಾನಿ, ಅಂಬಾನಿಯಂತಹ ವ್ಯಕ್ತಿಗಳ ವಿರುದ್ಧವೂ ಆಗಿದೆ. ಹೌದು. ಬೇಡಿಕೆ ಈಡೇರದಿದ್ದರೆ ಮುಂದಿನ ಲೋಕಸಭಾ ಚುನಾವಣೆಯವರೆಗೂ ಸಾಗಲು ಸಿದ್ಧರಿದ್ದೇವೆ. ಈಗಷ್ಟೆ ಹೋರಾಟದ ಬೀಜ ಬಿತ್ತಿದ್ದೇವೆ. 10 ವರ್ಷವಾದರೂ ಗೊಬ್ಬರ ಹಾಕುತ್ತಲೇ ಇರುತ್ತೇವೆ’-ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ನಾಯಕತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಲ್ಲಿ ಪ್ರಮುಖರಾದ ರಾಕೇಶ್ ಟಿಕಾಯತ್‌ …

Read More »

ಮಠ, ಮಂದಿರಗಳಿಗೆ ₹ 80 ಕೋಟಿ: ಪ್ರಭಾವಿ ಮಠಗಳು, ಸಮುದಾಯಗಳಿಗೆ ಮಣೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ಅನುದಾನದ ಮೊತ್ತವನ್ನು ಕೋವಿಡ್‌ ಕಾರಣದಿಂದ ಕಡಿತಗೊಳಿಸಿದ್ದ ರಾಜ್ಯ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೂ ತಡೆ ವಿಧಿಸಿತ್ತು. ಆದರೆ, ಆರ್ಥಿಕ ವರ್ಷದ ಕೊನೆಯಲ್ಲಿ ವಿವಿಧ ಮಠ, ಮಂದಿರಗಳು ಮತ್ತು ಜಾತಿವಾರು ಸಂಘ ಸಂಸ್ಥೆಗಳಿಗೆ ಒಂದೇ ಕಂತಿನಲ್ಲಿ ₹ 80.25 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಮಾರ್ಚ್‌ 19ರಂದು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಾದ್ಯಂತ …

Read More »

ಹೊಟ್ಟೆಯ ಕೊಬ್ಬನ್ನು ಕರಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್, ‘ಡೊಂಟ್‌ ಮಿಸ್’‌

ಹೊಟ್ಟೆಯ ಕೊಬ್ಬು ಹಠಮಾರಿ. ಉತ್ತಮ ಪ್ರಯತ್ನಗಳ ಹೊರತಾಗಿಯೂ ಅದು ಕಡಿಮೆಯಾಗಲು ನಿರಾಕರಿಸುತ್ತದೆ. ಯಾವುದೇ ಪ್ರಮಾಣದ ಆಹಾರ ಪದ್ಧತಿ ಸಹಾಯ ಮಾಡುವುದಿಲ್ಲ ಮತ್ತು ವ್ಯಾಯಾಮ ಕೂಡ ಹೊಟ್ಟೆ ಕರಗಿಸಲು ನೆರವಾಗುವುದಿಲ್ಲ. ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಅಸಾಧ್ಯವಾದ ಕೆಲಸವೆಂದು ತೋರುತ್ತದೆ ಇದಕ್ಕೆ ಕಾರಣ ತಪ್ಪು ಜೀವನಕ್ರಮ. ಹೊಟ್ಟೆಕೊಬ್ಬು ವೇಗವಾಗಿ ಕರಗಲು ಬಯಸಿದ್ದರೆ ಅದಕ್ಕಾಗಿ ನಿಖರವಾಗಿ ಏನು ಮಾಡಬೇಕೆಂದು ತಿಳಿದುಕೊಳ್ಳಬೇಕು. ಹೊಟ್ಟೆಯ ಕೊಬ್ಬನ್ನು ವೇಗವಾಗಿ ಕಳೆದುಕೊಳ್ಳಲು ಸಹಾಯ ಮಾಡುವ ಕೆಲವು ಅತ್ಯುತ್ತಮ ವರ್ಕ್ ಔಟ್ …

Read More »

ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ವಿಜಯನಗರ ಜಿಲ್ಲೆಯನ್ನು ರಚಿಸಲಾಗಿದ್ದು, ಇದರೊಂದಿಗೆ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಶೀಘ್ರವೇ ರಾಜ್ಯದಲ್ಲಿ 3 -4 ಹೊಸ ಜಿಲ್ಲೆಗಳನ್ನು ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಯ ಶಿರಸಿ, ಬೀದರ್ ಜಿಲ್ಲೆಯ ಬಸವಕಲ್ಯಾಣ, ತುಮಕೂರು ಜಿಲ್ಲೆಯ ತಿಪಟೂರು ಅಥವಾ ಮಧುಗಿರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ಸಾರ್ವಜನಿಕರಿಗೆ …

Read More »

ಸಿ.ಟಿ.ರವಿ, ನಟ ಶಿವಣ್ಣ ಹಾಗೂ ಲಲಿತಾ ನಾಯಕ್ ಹತ್ಯೆ ಮಾಡುವುದಾಗಿ ಬೆದರಿಕೆ ಪತ್ರ..!

ಬೆಂಗಳೂರು,ಮಾ.21- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹಾಗೂ ನನ್ನನ್ನೂ ಸೇರಿದಂತೆ ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ. ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‍ನಲ್ಲಿ ಮಾಜಿ ಸಚಿವ ರೇವಣ್ಣ ಅವರು ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇ 1ರಂದು ಪ್ರಮುಖರನ್ನು ಕೊಲೆ ಮಾಡುವ ಪತ್ರ ಬಂದಿದೆ. …

Read More »

ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? : ನಳಿನ್‌ ಕುಮಾರ್ ಕಟೀಲ್‌

ಬೆಂಗಳೂರು, ಮಾ.21. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಭವಿಷ್ಯ ನುಡಿದರು. ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್‌ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ …

Read More »

ಬೆಳಗಾವಿಯಲ್ಲಿ CRPF ಯೋಧನ ಸಾವು

ಬೆಳಗಾವಿ: ಕೋಬ್ರಾ ಬಟಾಲಿಯನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಆರ್​ಪಿಎಫ್​ನ ವೀರ ಯೋಧ ಮೌಲಾಹುಸೇನ್​ ಕಲೇಬಾಯಿ(40) ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ. ಮೂಲತಃ ಗದಗ ತಾಲೂಕಿನ ಹೊಂಬಳ ಗ್ರಾಮದವರಾದ ಯೋಧ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ನಿನ್ನೆ ಸೇನಾ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ತಾಯಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವನ್ನ ಅಗಲಿದ್ದಾರೆ. ಇಂದೇ ಹೊಂಬಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.

Read More »

ಪ್ರತಿಭಾನ್ವಿತ ಕ್ರೀಡಾಪಟುಗಳಾಗಿದ್ದವರಿಗೆ ಇನ್ಮುಂದೆ ಪೊಲೀಸ್ ನೇಮಕಾತಿಯಲ್ಲಿ ಕೋಟಾ.!

ಬೆಂಗಳೂರು:ಹೌದು ರಾಜ್ಯ ಸರಕಾರವು ಕರ್ನಾಟಕದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೊಲೀಸ್ ಪಡೆ ನೇಮಕಾತಿಯಲ್ಲಿ ಶೇಕಡಾ ಎರಡು ಕೋಟಾ ನೀಡಲಾಗುವುದು ಎಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ವಿಶೇಷ ನಿಯಮಗಳನ್ನು ಕಳೆದ ವರ್ಷ ರೂಪಿಸಲಾಯಿತು ಮತ್ತು ಅಂತಿಮವಾಗಿ ಮಾರ್ಚ್ 3 ರಂದು ರಾಜ್ಯ ಗೆಜೆಟ್‌ನಲ್ಲಿ ತಿಳಿಸಲಾಯಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕೆಎಸ್‌ಆರ್‌ಪಿ) ಅಲೋಕ್ ಕುಮಾರ್ ಅವರು, ‘ಪೊಲೀಸ್ …

Read More »

ಸಿಎಂಗೆ ಜಲ ಸಂಪನ್ಮೂಲ ಇಲಾಖೆ ತಮಗೇ ಬೇಕಿತ್ತು, ಹೀಗಾಗಿ ಜಾರಕಿಹೊಳಿಯನ್ನು ಸಿಲುಕಿಸಲಾಗಿದೆ: ಯತ್ನಾಳ್

ವಿಜಯಪುರ (ಮಾರ್ಚ್​ 21)- ರಾಜ್ಯದಲ್ಲಿ ನಡೆದಿರುವ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ ಅವರು, “ಸಿಎಂ ಗೆ ಜಲ ಸಂಪನ್ಮೂಲ, ಹಣಕಾಸು, ಇಂಧನ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ತಮ್ಮಲ್ಲಿಯೇ ಉಳಿಯಬೇಕಾಗಿದೆ. ಮಾರ್ಚ್ ಕೊನೆಯಲ್ಲಿ ಈ ಇಲಾಖೆಗಳಿಗೆ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆಯಾಗುತ್ತದೆ. ಆ ಹಣ ಹೇಗೆ ತೆಗೆದುಕೊಳ್ಳಬೇಕು? ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಇದೇ …

Read More »