Breaking News

ಜಿಲ್ಲೆ

ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. :ಸಿದ್ದರಾಮಯ್ಯ

ಬೆಂಗಳೂರು,ಮಾ.21- ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. ನಾಲಿಗೆ ಕೂಡ ಎಂದು ಹೇಳುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್‍ಕಟೀಲ್ ಅವರಿಗೆ ಬಿಸಿ ಮುಟ್ಟಿಸಿದ್ದಾರೆ. ಕಾಂಗ್ರೆಸ್‍ಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರಿಂದ 90 ಜೊತೆ ಬಟ್ಟೆ ಖರೀದಿಯಾಗಿದೆ ಎಂದು ನಳೀನ್‍ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಟ್ವಿಟರ್‍ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕದ ಬಿಜೆಪಿ …

Read More »

ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್

ವಿಜಯಪುರ: ರಾಜ್ಯದಲ್ಲಿ ಸಿಡಿ ತಯಾರಿಸುವ ಎರಡು ಫ್ಯಾಕ್ಟರಿಗಳಿವೆ. ಒಂದು ಬಿಜೆಪಿಯಲ್ಲಿದೆ. ಇನ್ನೊಂದು ಕಾಂಗ್ರೆಸ್ ನಲ್ಲಿದೆ. ರಮೇಶ್ ಜಾರಕಿಹೊಳಿ ಸಿಡಿ ರೀತಿಯೇ ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಡಿ ತಯಾರಿಸುವ ದೊಡ್ಡ ಗ್ಯಾಂಗ್ ಇದೆ. ಗ್ಯಾಂಗ್ ಕಟ್ಟಿಕೊಂಡು ಮೊದಲು ಶಾಸಕರು, ಸಚಿವರ ಜೊತೆ ಸಲುಗೆ ಬೆಳಸಿಕೊಳ್ಳುತ್ತಾರೆ. ಸಲುಗೆ ಬೆಳೆಸಿಕೊಂಡು ಸಿಡಿ ತಯರೈಸಿ ಬಳಿಕ ಬ್ಲ್ಯಾಕ್ ಮೇಲ್ …

Read More »

ಇಂಥವರನ್ನ ನಂಬಿದ್ರೆ ಲೈಫ್​ ಬರ್ಬಾದ್​: ಬಂಧಿತ ಮೂವರು ಸಹೋದರರ ಕರಾಳ ಮುಖವಿದು..!

ಬೆಂಗಳೂರು: ನೂರಾರು ಅಮಾಯಕ ಜನರಿಗೆ ಚೀಟಿ ಹೆಸರಲ್ಲಿ ಯಾಮಾರಿಸಿ ಲಕ್ಷ ಲಕ್ಷ ಹಣ ದೋಚಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಶದಲ್ಲಿರುವ ವೆಂಕಟೇಶ ಬಾಬು, ಲೋಕೇಶ್ ಬಾಬು ಮತ್ತು ನಟರಾಜ ಬಾಬು ಎಂಬ ಐನಾತಿ ಸಹೋದರರು ಅಗರಬತ್ತಿ ಕಂಪನಿ, ನಟರಾಜ ಟ್ರೇಡರ್ಸ್, ಬಾಬು ಚಿಟ್ ಫಂಡ್ ಅಂತ ಬೋರ್ಡ್ ಹಾಕಿಕೊಂಡು ಸಾಕಷ್ಟು ವರ್ಷಗಳಿಂದ ಅಮಾಯಕ ಜನರನ್ನು ನಂಬಿಸಿ …

Read More »

CD’ ಪ್ರಕರಣ : ಯುವತಿಯ ಪತ್ತೆಗಾಗಿ `SIT’ ತಂಡದಿಂದ ಬೆಳಗಾವಿಯಲ್ಲಿ ತೀವ್ರ ಶೋಧ

ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐಟಿ ತಂಡ ವಿಡಿಯೋದಲ್ಲಿರುವ ಯುವತಿಗಾಗಿ ತೀವ್ರ ಶೋಧ ನಡೆಸುತ್ತಿದೆ.   ಯುವತಿ ಅಪಹರಣ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಶನಿವಾರ ಬೆಳಗಾವಿಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಯುವತಿ ಕುಟುಂಬದವರು ವಾಸವಿದ್ದ ಬಾಡಿಗೆ ಮನೆಗೆ ಆಗಮಿಸಿದ್ದ ಎಸ್ ಐಟಿ ಅಧಿಕಾರಿಗಳ ತಂಡ ಮನೆ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಸಿಡಿಯಲ್ಲಿ …

Read More »

ಕಿತ್ತೂರು ಮತ್ತು ಖಾನಾಪುರ ತಾಲೂಕೂಗಳ ಗಡಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬೆಳಗಾವಿ: ಕಿತ್ತೂರು ಮತ್ತು ಖಾನಾಪುರ ತಾಲೂಕೂಗಳ ಗಡಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಾನಾಪುರ ತಾಲೂಕಿನ ಗಾಡಿಕೊಪ್ಪ, ಹಿರೇಹಟ್ಟಿಹೊಳಿ, ಬೆಳಗಾವಿ ತಾಲೂಕಿನ ಕುಕಡೊಳ್ಳಿ, ಕಿತ್ತೂರು ತಾಲೂಕಿನ ಅಮರಾಪುರ, ವೀರಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಎರಡು ಕಾಡು ೋಣಗಳು ಪ್ರತ್ಯಕ್ಷವಾಗಿ ಆತಂಕ ಮೂಡಿಸಿವೆ. ಅರಣ್ಯಪ್ರದೇಶ ದಿಂದ ದೂರವಿರುವ ಮತ್ತು ಬಹುಪಾಲು ಕಬ್ಬು ಮತ್ತು ತರಕಾರಿ ಬೆಳೆಗಳನ್ನು ಹೊಂದಿರುವ ಈ ಭಾಗದಲ್ಲಿ ಕಾಣಿಸಿಕೊಂಡ ಕಾಡುಕೋಣಗಳನ್ನು ಮರಳಿ ಅರಣ್ಯ ಪ್ರದೇಶಕ್ಕೆ ಓಡಿಸುವಂತೆ …

Read More »

ಬಿರುಸುಗೊಂಡ ಉಪ ಚುನಾವಣೆ ಕಣ

ಬೆಂಗಳೂರು: ಬೆಳಗಾವಿ ಲೋಕ ಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭೆ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ 3 ಪಕ್ಷಗಳಲ್ಲಿ ಚಟುವಟಿಕೆಗಳು ತೀವ್ರಗೊಂಡಿವೆ. ಶನಿವಾರ ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದು ಮೂರೂ ಕ್ಷೇತ್ರಗಳಿಗೆ ಸಂಭಾವ್ಯರ ಬಗ್ಗೆ ಚರ್ಚಿಸಿದ್ದು, ಕೇಂದ್ರ ಚುನಾವಣ ಸಮಿತಿಗೆ ಹೆಸರು ಶಿಫಾರಸು ಮಾಡುವ ಅಧಿಕಾರ ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ. ಈ ಮಧ್ಯೆ, ಬಳ್ಳಾರಿ ಜಿಲ್ಲೆಯ ತೋರಣಗಲ್ಲು ವಿಮಾನ ನಿಲ್ದಾಣದಲ್ಲಿ …

Read More »

ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ : ಖಾಲಿ ಇರುವ 1,835 ಹುದ್ದೆಗಳಿಗೆ `ಅತಿಥಿ ಉಪನ್ಯಾಸಕರ’ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಅನುಮೋದನೆ ನೀಡಿದೆ.   ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2021 ನೇ ಸಾಲಿನ ಫೆಬ್ರವರಿ ತಿಂಗಳಿಂದ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ …

Read More »

ರಾಜ್ಯದ ಆಸ್ಪತ್ರೆಗಳಲ್ಲಿ ಗುತ್ತಿಗೆ ನೌಕರರ ಸೇವೆ 6 ತಿಂಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಸಿಬ್ಬಂದಿಯನ್ನು ಮುಂದಿನ 6 ತಿಂಗಳಿಗೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ ವೈದ್ಯರು, ಶುಶ್ರೂಷಕರು, ಪ್ರಯೋಗಾಲಯ ತಜ್ಞರು ಸೇರಿ 45 ಮಂದಿ ನೇಮಕಕ್ಕೆ ಸೂಚಿಸಲಾಗಿತ್ತು. ಒಟ್ಟಾರೆ ರಾಜ್ಯದಲ್ಲಿ 810 ಸಿಬ್ಬಂದಿ ನೇಮಕಗೊಂಡಿದ್ದರು. ಸದ್ಯ ಅವರ ಸೇವಾವಧಿ ಮುಕ್ತವಾಗುತ್ತಿದೆ. ಕೊರೊನಾ …

Read More »

ಸಿಡಿ ಪ್ರಕರಣ: ಯುವತಿ ಕುಟುಂಬಸ್ಥರು ವಾಸವಿದ್ದ ಬಾಡಿಗೆ ಮನೆಗೆ ತೆರಳಿ ಮಾಹಿತಿ ಪಡೆದ ಎಸ್‌ಐಟಿ ತಂಡ

ಬೆಳಗಾವಿ, ಮಾರ್ಚ್ 20: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್‌ಐಟಿ ತಂಡ ಬೆಳಗಾವಿಗೆ ಆಗಮಿಸಿ, ಯುವತಿ ಕುಟುಂಬಸ್ಥರು ವಾಸವಿದ್ದ ಬಾಡಿಗೆ ಮನೆಗೆ ತೆರಳಿ ಮಾಹಿತಿ ಪಡೆದರು. ಬಾಡಿಗೆ ಮನೆ ಮಾಲೀಕರಿಂದ ಯುವತಿ ಕುಟುಂಬದ ಬಗ್ಗೆ ಎಸ್‌ಐಟಿ ಅಧಿಕಾರಿ ಮಾಹಿತಿ ಪಡೆದಿದ್ದು, ಯುವತಿಯ ಕುಟುಂಬದ ಬಗ್ಗೆ ಗೊತ್ತಿರುವ ಮಾಹಿತಿಯನ್ನು ಮನೆ ಮಾಲೀಕರು ಹೇಳಿದ್ದಾರೆ ಎನ್ನಲಾಗಿದೆ. ಮಗಳು ಕಿಡ್ನಾಪ್ ಆಗಿದ್ದಾಳೆಂದು ಯುವತಿಯ ತಂದೆ ದೂರು ನೀಡಿದ್ದರು. ಮಾರ್ಚ್ …

Read More »

ಗ್ರಾಮ ವಾಸ್ತವ್ಯ ವರದಿಗೆ ತೆರಳಿದ ಪತ್ರಕರ್ತರಿಗೆ ಭಿಕ್ಷುಕರ ವಾಹನದಲ್ಲಿ ಪ್ರಯಾಣ!

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಹ್ವಾನಿತ ಪತ್ರಕರ್ತರನ್ನು, ಭಿಕ್ಷುಕರನ್ನು ಹಿಡಿದು ಸಾಗಿಸುವ ವಾಹನದಲ್ಲಿ ಕರೆದೊಯ್ದ ಘಟನೆ ನಡೆದಿದೆ. ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ಗ್ರಾಮ ವಾಸ್ಯವ್ಯ ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಯಲಗೂರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಪತ್ರಕರ್ತರಿಗೆ ವಾರ್ತಾ ಇಲಾಖೆಗೆ ಬಂದಿದ್ದ ಸುಸಜ್ಜಿತ ಹೊಸ ವಾಹನವನ್ನು ಕೆಲ ದಿನಗಳ ಹಿಂದೆ ಗದಗ ಜಿಲ್ಲೆಗೆ ಶಾಶ್ವತವಾಗಿ …

Read More »