Breaking News

ಜಿಲ್ಲೆ

ಸುಳ್ಳನ್ನು ಹೇಳಿ,   ಶಾಸಕ ಅಭಯ ಪಾಟೀಲ ರವರು ಮಾಡಿರುವ ಕೆಲಸದ  ಕ್ರೆಡಿಟ್‌ ತಗೆದುಕೊಳ್ಳುವುದನ್ನು ನಿಲ್ಲಿಸಬೇಕು.: B.J.P.. ದಕ್ಷಿಣ ಅಧ್ಯಕ್ಷೆ ಗೀತಾ ಸುತಾರ್

ಬೆಳಗಾವಿ – ಬೆಳಗಾವಿ ರಿಂಗ್ ರಸ್ತೆಗೆ ಈ ಬಾರಿಯ ಬಜೆಟ್ ನಲ್ಲಿ 140 ಕೋಟಿ ರೂ. ತೆಗೆದಿರಿಸಿರುವುದು ಶಾಸಕ ಅಭಯ ಪಾಟೀಲ ಅವರ ಪ್ರಸ್ತಾವನೆಯ ಅನ್ವಯ ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಶಾಸಕ ಅಭಯ ಪಾಟೀಲ ಸಚಿವರಿಂದ ವಿಧಾನಸಭೆಯಲ್ಲಿ ಲಿಖಿತ ಉತ್ತರ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಬಿಜೆಪಿ ಬೆಳಗಾವಿ ದಕ್ಷಿಣ ಅಧ್ಯಕ್ಷೆ ಗೀತಾ ಸುತಾರ್,  ಕೆಲವರು ರಿಂಗ್ ರಸ್ತೆಗೆ ತಾವೇ ಹಣ …

Read More »

ಲೋಕಸಭಾ ಉಪ ಚುನಾವಣೆ ವಿವಿಧ ಕಟ್ಟಡಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ನಗರದ ಟಿಳಕವಾಡಿಯ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿರುವ ವಿವಿಧ ಕಟ್ಟಡಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪರಿಶೀಲಿಸಿದರು. ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಕೊಠಡಿಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಯ …

Read More »

ಹೆಚ್ಚಿದ ಕೊರೋನಾ: ಶಾಲಾ-ಕಾಲೇಜುಗಳಿಗೆ ರಜೆ, ಪರೀಕ್ಷೆ ಮುಂದೂಡಿಕೆ

ಅಹಮದಾಬಾದ್: ಗುಜರಾತ್ ನಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಹಮದಾಬಾದ್, ವಡೋದರಾ, ಸೂರತ್, ರಾಜಕೋಟ್ ಸೇರಿದಂತೆ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆನ್ಲೈನ್ ತರಗತಿ ನಡೆಯಲಿದ್ದು, ಶುಕ್ರವಾರದಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಏಪ್ರಿಲ್ ನಲ್ಲಿ ನಡೆಸಲಾಗುವುದು ಎಂದು ಗುಜರಾತ್ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ ರೂಪಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ …

Read More »

ಮುಂದುವರಿದ ಕೋಲಾಹಲ: ವಿಧಾನ ಪರಿಷತ್ ಕಲಾಪ‌ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ಸಭಾಪತಿ‌ ನೇತೃತ್ವದಲ್ಲಿ ನಡೆದ ಸಂಧಾನ‌ ಸಭೆ ಸಫಲವಾಗಿಲ್ಲ. ಸದನ ಸಮಿತಿ ರಚನೆಗೆ ಸರ್ಕಾರ ನಿರಾಕರಿಸಿದ್ದು, ಜೆಡಿಎಸ್ ಧರಣಿಯಿಂದ ಸದನದಲ್ಲಿ ಕೋಲಾಹಲ‌ ಮುಂದುವರಿಯಿತು. ಕಲಾಪವನ್ನು ಮತ್ತೆ ಸೋಮವಾರಕ್ಕೆ ಮುಂದೂಡಲಾಯಿತು. ಸಂಧಾನ ಸಭೆಯ ಬಳಿಕ‌ ಮತ್ತೆ ಕಲಾಪ ಆರಂಭವಾದಾಗ ಸ್ಪಷ್ಟನೆ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ‘ನಮ್ಮ ಅವಧಿಯಲ್ಲಿ ಯಾವುದೇ ಲೋಪ ಆಗಿಲ್ಲ.‌ 2002ರಲ್ಲಿ ಒಂದೇ ಬಾರಿಗೆ 300 ಕಾಲೇಜುಗಳಿಗೆ ಅನುಮತಿ ನೀಡಲಾಗಿತ್ತು. ಆಗ ಯಾರೂ …

Read More »

ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ!

ಬೆಂಗಳೂರು, ಮಾ. 18: ತೀವ್ರ ಕುತೂಹಲ ಮೂಡಿಸಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೊಷಣೆ ಮಾಡಿದೆ. ಚುನಾವಣೆ ಘೊಷಣೆ ಆಗುತ್ತಿದ್ದಂತೆಯೆ ಎಲ್ಲರಿಗಿಂತ ಮೊದಲು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರಕ್ಕೆ ದಿ. ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ರ …

Read More »

‘ರಮೇಶ್ CD ಮಾಹಿತಿ ಕೊಟ್ಟಿದ್ದು ನಾನು; ಮಹಾನಾಯಕ ಯಾರೆಂದು ಗೊತ್ತು’ ?

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀ ಸಿ.ಡಿ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದೇ ನಾನು. ಈ ಪ್ರಕರಣ ಐದು ಕೋಟಿ ರೂ.ಗೆ ಡೀಲ್ ಆಗಿದೆ. ನರೇಶ್ ಗೌಡ ಭಾಗಿಯಾಗಿದ್ದಾನೆ ಎಂದು ಹೆಸರು ಹೇಳಿದ್ದೇ ನಾನು ಎಂದು ಮಾಜಿ ಸಿಎಂ ಹೆಚ್ ‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ(HD Kumaraswamy), ಸಿ.ಡಿ ಪ್ರಕರಣದಲ್ಲಿ ಕೈವಾಡವಿರುವ ಮಹಾನ್ ನಾಯಕ ಯಾರು ಎಂಬುದರ ಬಗ್ಗೆ ನನಗೆ ಮಾಹಿತಿ …

Read More »

ಆರು ಸಚಿವರು ಹೈಕೋರ್ಟ್‌ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್‌ ಮುಂದಾಗಿದೆ.

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣ ಹಾಗೂ ಆರು ಸಚಿವರು ಹೈಕೋರ್ಟ್‌ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್‌ ಮುಂದಾಗಿದೆ. ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ತರುವಾಯ ಈ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ನೀಡಿದ್ದಾರೆ. ರಮೇಶ್‌ ಜಾರಕಿಹೊಳಿ ಅವರ ಲೈಂಗಿಕ ಸಿ.ಡಿ. ಪ್ರಕರಣ ಹಾಗೂ ಇಂಥದ್ದೇ ಭೀತಿಯಿಂದ ಆರು ಮಂದಿ ಸಚಿವರು ಕೋರ್ಟಿಗೆ …

Read More »

ಪತ್ತೆಯಾಗದ ಸೋಂಕಿತರ ಸಂಪರ್ಕಿತರು; ಆರೋಗ್ಯ ಸಿಬ್ಬಂದಿಗೆ ಸವಾಲಾದ ಇಲಾಖೆ ಗುರಿ

ಬೆಂಗಳೂರು: ಪ್ರತಿಯೊಬ್ಬ ಕೋವಿಡ್‌ ಸೋಂಕಿತ ವ್ಯಕ್ತಿಯ ಜತೆ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲು ಸಾಧ್ಯವಾಗದೇ ಆರೋಗ್ಯ ಇಲಾಖೆ ಇಕ್ಕಟ್ಟಿಗೆ ಸಿಲುಕಿದೆ. ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡುವ ಗುರಿಯನ್ನು ನಿಗದಿ ಮಾಡಿತ್ತು. ಆದರೆ, ಆರೋಗ್ಯ ಸಿಬ್ಬಂದಿಗೆ ಸೋಂಕಿತರ ಪ್ರಯಾಣದ ಇತಿಹಾಸ ಹಾಗೂ ಸಂಪರ್ಕದ ಜಾಡನ್ನು ಭೇದಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸದ್ಯ ಪ್ರತಿ ಕೋವಿಡ್ ಪೀಡಿತ …

Read More »

ಕೆಎಸ್‌ಆರ್‌ಟಿಸಿ ಸಿಬ್ಬಂದಿ ತರಬೇತಿ ಅವಧಿ 2 ರಿಂದ ಒಂದು ವರ್ಷಕ್ಕೆ ಇಳಿಕೆ: ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯದಲ್ಲಿ ಕೆಎಸ್‍ಆರ್‍ ಟಿಸಿ ಸಿಬ್ಬಂದಿ ತರಬೇತಿ ಅವಧಿಯನ್ನು ಎರಡರಿಂದ ಒಂದು ವರ್ಷಕ್ಕೆ ಕಡಿಮೆ ಮಾಡಬೇಕು ಎಂಬ ಸಾರಿಗೆ ಸಿಬ್ಬಂದಿಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತರಬೇತಿ ಅವಧಿಯನ್ನು ಎರಡು ವರ್ಷದಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್‍ ಸವದಿ ಅವರು ಗುರುವಾರ ಹೇಳಿದ್ದಾರೆ. ಇದು ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, …

Read More »

ಖಜಾನೆಯಿಂದ ಹೊರಗುಳಿದ ₹ 17,000 ಕೋಟಿ: ಶ್ವೇತಪತ್ರ ಪ್ರಕಟಿಸಲು ಪಾಟೀಲ್‌ ಆಗ್ರಹ

ಬೆಂಗಳೂರು: ಅಧಿಕಾರಿಗಳ ವೈಯಕ್ತಿಕ ಠೇವಣಿ (ಪಿ.ಡಿ) ಖಾತೆಗಳು ಹಾಗೂ ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಿರುವ ಪ್ರತ್ಯೇಕ ಠೇವಣಿಗಳು ಸೇರಿದಂತೆ ₹17,000 ಕೋಟಿ ಮೊತ್ತ ರಾಜ್ಯ ಸರ್ಕಾರದ ಖಜಾನೆಯಿಂದ ಹೊರಗಿದೆ. ಈ ಕುರಿತು ತಕ್ಷಣವೇ ಸರ್ಕಾರ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್‌ನ ಎಚ್‌.ಕೆ. ಪಾಟೀಲ ಗುರುವಾರ ವಿಧಾನಸಭೆಯಲ್ಲಿ ಆಗ್ರಹಿಸಿದರು. ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಾನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಈ ಕುರಿತು ಕೆಲವು ಮಾಹಿತಿ ಲಭಿಸಿತ್ತು. …

Read More »