ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್ ಹಾಗೂ ಕಾಲ್ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ 9 ತಿಂಗಳಿಂದ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆಸ್ಪತ್ರೆ ಮುಖ್ಯಸ್ಥ ರಾಕೇಶ್ ಜಯಪ್ರಕಾಶ್ ಸಂತ್ರಸ್ತೆಯನ್ನ ನೋಡಿ, ಅವರೊಂದಿಗೆ ಅನುಚಿತವಾಗಿ ಮಾತಾಡಿದ್ದಾರೆ. ಅಲ್ಲದೇ ಮಿಸ್ ಯು ಅಂತ ಅನುಚಿತವಾಗಿ ಮೆಸೇಜ್ …
Read More »ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು
ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ದುರ್ಘಟನೆ ನಡೆದಿದೆ. ಮನೆಯಲ್ಲಿ ಜೋಕಾಲಿ ಆಡುವಾಗ ಸೀರೆ ಉರುಳಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Read More »ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್ ರಾಜೀನಾಮೆ
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು. ಒಂದು ವೇಳೆ …
Read More »ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು
ಕೋಲಾರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಅರಹಳ್ಳಿ ಕೆರೆಯಲ್ಲಿ ನಡೆದಿದೆ. ಮೃತರನ್ನು ಕೋಲಾರ ನಗರದ ನಿಸಾರ್ ನಗರದ ಮೊಹಮದಿ (25) ಹಾಗೂ ಬೆಂಗಳೂರಿನ ಸಲ್ಮಾ (26) ಎಂದು ಗುರುತಿಸಲಾಗಿದೆ. ಮಕ್ಕಳೊಂದಿಗೆ ಕೆರೆಗೆ ಬಟ್ಟೆ ತೊಳೆಯಲು ಮಹಿಳೆಯರು ಬಂದಿದ್ದರು. ಈ ವೇಳೆ ಆಟವಾಡುತ್ತಾ ಮಕ್ಕಳು ನೀರಿನಲ್ಲಿ ಮುಳುಗುವ ಹಂತದಲ್ಲಿದ್ದರು. ತಕ್ಷಣ ನೀರಿಗಿಳಿದ ಮೊಹಮದಿ ಮಕ್ಕಳನ್ನು ರಕ್ಷಿಸಿದ್ದಾಳೆ. ಮಕ್ಕಳನ್ನು ರಕ್ಷಿಸಿದ ಬಳಿಕ ಆಕೆ …
Read More »ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ
ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ …
Read More »ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ
ಬಾಗಲಕೋಟೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಕೇಸ್‌ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಮಹಿಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ವಿಡಿಯೋ ಹೇಳಿಕೆಯೊಂದನ್ನು ರಿಲೀಸ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಇದೀಗ ಈ ಸಂಬಂಧ ಸಂತ್ರಸ್ತ ಮಹಿಳೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಾನು ಶ್ರೀಗಳ ವಿರುದ್ಧ ದೂರು ನೀಡಿಲ್ಲ. ನನ್ನ ಮತ್ತು ಸ್ವಾಮೀಜಿ ಮೇಲಿರುವ ಆರೋಪಗಳೆಲ್ಲವೂ ಸುಳ್ಳು. ನನ್ನ ಹೆಸರಿನಲ್ಲಿ ಯಾರೋ …
Read More »ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ
ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು …
Read More »SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (525 ಅಂಕ ನೀಡುವ ನಿಯಮ ಬದಲಾವಣೆ ಮಾಡಿರುವ ವಿಚಾರದಲ್ಲಿ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 7 ದಿನ ಅವಕಾಶ ನೀಡಲಾಗಿದ್ದು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಅಧಿಸೂಚನೆಯಲ್ಲಿ 525 ಅಂಕಗಳ ಅನುಷ್ಠಾನ ಹೇಗೆ ನಡೆಯಲಿದೆ ಎಂಬುದನ್ನು ತಿಳಿಸಲಾಗಿದೆ. ಅದರಂತೆ ತೃತೀಯ ಭಾಷೆ ವಿಷಯದಲ್ಲಿ ಅಂಕಗಳ ಬದಲಾಗಿ ಗ್ರೇಡ್ ಸಿಸ್ಟಮ್ ವಿವರಿಸಲಾಗಿದೆ. ಈ ಮೊದಲು 625 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ …
Read More »ಧಾರವಾಡದ ಅಣ್ಣಿಗೇರಿ ಬಸಾಪುರದಲ್ಲಿ ಮನೆ ಕಳ್ಳತನ ಪ್ರಕರಣ, ವಾರದಲ್ಲಿ ಇಬ್ಬರು ಆರೋಪಿಗಳ ಬಂಧನ
ಧಾರವಾಡ- ಕಳೆದ ಏಪ್ರಿಲ್ 2ರಂದು ಧಾರವಾಡ ಜಿಲ್ಲೆ ಅಣ್ಣಿಗೇರಿ ತಾ. ಬಸಾಪುರ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಅಣ್ಣಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಣ್ಣಿಗೇರಿ ತಾಲ್ಲೂಕಿನ ನಿವಾಸಿಗಳಾದ ಉಮೇಶ ಹರಣಶಿಕಾರಿ(30), ಈರಪ್ಪ ಹರಣಶಿಕಾರಿ (25) ಇಬ್ಬರು ಬಂಧಿತ ಮನೆಗಳ್ಳರಾಗಿದ್ದಾರೆ. ಏಪ್ರಿಲ್ 2ರಂದು ಬಸಾಪುರ ಗ್ರಾಮದಲ್ಲಿ ಮನೆಯ ಡೋರ್ ಲಾಕ್ ಮುರಿದು ಮನೆ ಕಳ್ಳತನ ಮಾಡಲಾಗಿತ್ತು. ಈ ಕುರಿತು ಮನೆಯ ಮಾಲೀಕರು ಅಣ್ಣಿಗೇರಿ ಪೊಲೀಸ …
Read More »ಧಾರವಾಡ: ಇಸ್ಮಾಯಿಲ್ ತಮಟಗಾರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂ ಸಂಘಟನೆಗಳು
ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ವಿರುದ್ಧ ಇದೀಗ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಧಾರವಾಡದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಿ: ಕಳೆದ ಏಪ್ರಿಲ್ 7 ರಂದು ಧಾರವಾಡದ ಸುಭಾಷ್ ರಸ್ತೆಯಲ್ಲಿ ಲವ್ ಜಿಹಾದ್ ವಿರುದ್ಧ ‘ಜನಾಕ್ರೋಶ ಪ್ರತಿಭಟನೆ’ …
Read More »
Laxmi News 24×7