Breaking News
Home / ಜಿಲ್ಲೆ (page 80)

ಜಿಲ್ಲೆ

ಸರ್ಕಾರಿ ನೌಕರರಿಗೆ ಬಿಜೆಪಿ ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಿಲ್ಲ: ಈಶ್ವರಪ್ಪ

ಮೈಸೂರು: ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎಂದು ಹೇಳುವುದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್‌ ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಕಾಂಗ್ರೆಸ್‌ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟವಿದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಈ ರೀತಿ ಹೇಳುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ …

Read More »

ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ: B.S.Y.

ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಆ ದಿಕ್ಕಿನಲ್ಲಿ ನಾಳೆಯಿಂದಲೇ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.   ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಕೂಡ ಯಡಿಯೂರಪ್ಪ ಮನೆಯಲ್ಲಿ ಕುಳಿತಿದ್ದಾನೆಂದು ಭಾವಿಸುವುದು ಬೇಡ. ನನ್ನ ಕೈ ಕಾಲು ಗಟ್ಟಿ ಇರುವವರೆಗೂ ಪಕ್ಷ ಬಲಿಪಡಿಸಲು ನನ್ನ ಕೈಲಾದ ಕೆಲಸ ಮಾಡುತ್ತೇನೆ. …

Read More »

ಚಿಕ್ಕೋಡಿ: ಆಲಿಸಿದ ಪಾಠ ಅರಿತು ಬಾಳಿರಿ

ಚಿಕ್ಕೋಡಿ: ‘ಸುಮಂಗಲಮ್ ಪಂಚಮಹಾಭೂತ ಲೋಕೋತ್ಸವ ಕೇವಲ ಉತ್ಸವವಾಗದೇ, ಇಲ್ಲಿ ಆಲಿಸಿದ, ವೀಕ್ಷಿಸಿದ ಎಲ್ಲ ಪಾಠವನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಿಸರ ಸಮತೋಲನ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಉಳಿಸಬೇಕು’ ಎಂದು ಕೊಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.   ಮಠದಲ್ಲಿ ಭಾನುವಾರ ಉತ್ಸವದ ಸಮಾರೋಪದ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಮನುಷ್ಯನಿಗಿಂತ ಮರೆಗುಳಿತನ ಹೊಂದಿರುವ ಜೀವಿ ಇನ್ನೊಂದಿಲ್ಲ. ವಿನಾಶ ಕಾಲ ಸಮೀಪಿಸುತ್ತಿದೆ ಎಂಬುದು ಮನುಕುಲ …

Read More »

ಬೆಳಗಾವಿಗರ ಪ್ರೀತಿ ಬಡ್ಡಿ ಸಮೇತ ವಾಪಸ್‌ : ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿ: ‘ಬೆಳಗಾವಿ ಜನ ತೋರಿದ ಪ್ರೀತಿ, ಮಾಡಿದ ಆಶೀರ್ವಾದ ನನಗೆ ಸ್ಫೂರ್ತಿ ನೀಡಿದೆ. ಬೆಳಗಾವಿ ಕುಂದಾ, ಬೆಳಗಾವಿ ಮಂದಿ ಎರಡೂ ಬಹಳ ಸಿಹಿ. ನಿಮ್ಮ ಈ ಪ್ರೀತಿಯನ್ನು ಬಡ್ಡಿ ಸಮೇತ ವಾಪಸ್‌ ಕೊಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.   ನಗರದಲ್ಲಿ ಸೋಮವಾರ ₹2,240 ಕೋಟಿ ವೆಚ್ಚದ ರೈಲ್ವೆ ಕಾಮಗಾರಿ, ಜಲಜೀವನ್ ಮಿಷನ್ ಯೋಜನೆಗಳ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ₹16 ಸಾವಿರ ಕೋಟಿಯನ್ನು …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ.

ಬೆಳಗಾವಿ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ತಮ್ಮ ರಾಜಕೀಯ ವೈರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದಿರುವ ಪರಿಣಾಮ ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ರಮೇಶ್‌ ಈ ಕ್ಷೇತ್ರದ ಅಭ್ಯರ್ಥಿಯಲ್ಲ. ಆದರೆ ಹೆಬ್ಟಾಳ್ಕರ್‌ಅವರನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಕಾರಣ ಚುಣಾವಣ ಕಣ ರಣರಂಗವಾಗಿ ಬದಲಾಗಿದೆ. ಆರೋಪ-ಪ್ರತ್ಯಾರೋಪ ಪರಾಕಾಷ್ಠೆ ಮುಟ್ಟಿದೆ. ಕ್ಷೇತ್ರ ಪುನರ್‌ ವಿಂಗಡಣೆಯಿಂದ 2008ರಲ್ಲಿ ಉದಯವಾದ ಬೆಳಗಾವಿ ಗ್ರಾಮೀಣ ಕ್ಷೇತ್ರ …

Read More »

ಅಸಾಧ್ಯವನ್ನು ಸಾಧ್ಯವಾಗಿಸಿದ ಮೋದಿ: ಸಿಎಂ ಬೊಮ್ಮಾಯಿ

ಬೆಳಗಾವಿ: ಪ್ರಧಾನಿ ಮೋದಿ ದೇಶವನ್ನು ಅಸಾಧ್ಯದಿಂದ ಸಾಧ್ಯದ ಕಡೆಗೆ, ಅನಿಶ್ಚಿತತೆಯಿಂದ ನಿಶ್ಚಿತತೆಯೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಸಂಶಯವನ್ನು ಸಂಕಲ್ಪ ಮಾಡಿದ್ದಾರೆ. ಸಂಕಲ್ಪವನ್ನು ಸಿದ್ಧಿ ಮಾಡಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.   ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಸೋಮವಾರ ನಡೆದ 2,240 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿ, ಮೋದಿ ಆಸೆಯಂತೆ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಾಣಕ್ಕೆ ನಾವು ಸಿದ್ಧರಾಗಿದ್ದೇವೆ. …

Read More »

ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ

ಬೆಂಗಳೂರು: ವೇತನ ಭತ್ಯೆ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರದ ವೇಳೆ ಉಪವಾಸ, ಧರಣಿ ಸತ್ಯಾಗ್ರಹ ಹಾಗೂ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ.   ಮುಷ್ಕರ ಯಶಸ್ವಿಗೊಳಿಸುವ ಸಂಬಂಧ ಸಂಘ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಂತಿಯುತ ಹೋರಾಟಕ್ಕೆ ಸೂಚನೆ ನೀಡಲಾಗಿದೆ. ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ಟೀಕಿಸದಂತೆ ತಾಕೀತು ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುರ್ತು …

Read More »

ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು.: ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿ:ಗೆ ಹೊಸ ಶಕ್ತಿ ನೀಡುವ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು,. ಇದು ಈ ಭಾಗದ ಕ್ಷಿಪ್ರಗತಿಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಬಸವೇಶ್ವರರನ್ನು ಸ್ಮರಿಸಿ ಮಾತನ್ನು ಆರಂಭಿಸಿದ ಪ್ರಧಾನಿ, ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು. ಬೆಳಗಾವಿಯ ಬಂಧುಗಳಿಗೆ ನಮಸ್ಕಾರಗಳು ಎಂದು ಕನ್ನಡದಲ್ಲಿ ಹೇಳಿದರು. ಬೆಳಗಾವಿಯ ಜನರ ಪ್ರೀತಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದೂ ಅವರು …

Read More »

ಧರ್ಮದಲ್ಲಿ ರಾಜಕೀಯ ಸಲ್ಲದು: ಸುಬುಧೇಂದ್ರ ಶ್ರೀ

ರಾಯಚೂರು: ರಾಜಕೀಯ ಕ್ಷೇತ್ರಕ್ಕೆ ಇಂಥವರೇ ಬರಬೇಕು ಎಂಬ ನಿಯಮವಿಲ್ಲ. ರಾಜಕೀಯದಲ್ಲಿ ಜನಪರ ಕಾಳಜಿ ಇರುವ ಧರ್ಮ ಬಂದರೆ ತಪ್ಪಿಲ್ಲ. ಆದರೆ ಧರ್ಮದಲ್ಲಿ ರಾಜಕೀಯ ಬರುವುದು ಸರಿಯಲ್ಲ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ಅಭಿಪ್ರಾಯಪಟ್ಟರು.   ಮಂತ್ರಾಲಯದ ಶ್ರೀಮಠದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯಕ್ಕೆ ಇಂಥವರೇ ಬರಬೇಕು, ಇಂಥವರು ಬರಬಾರದು ಎಂಬುದಿಲ್ಲ. ರಾಜಕೀಯಕ್ಕೆ ಬರುವ ವ್ಯಕ್ತಿಗಳು ಜನರ ಕಾಳಜಿ ಹೊಂದಿರಬೇಕು ಎಂದು ಹೇಳಿದ ರು. ಉತ್ತರ ಪ್ರದೇಶದಂತೆ ರಾಜ್ಯ ದಲ್ಲೂ ಬಿಜೆಪಿಯಿಂದ …

Read More »

ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ: ಮಲೆನಾಡು ಭಾಗದ ಬಹುಕಾಲದ ಕನಸಾದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. 450 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More »