Breaking News

ಜಿಲ್ಲೆ

ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್ ಸಿದ್ಧತೆ: ಸ್ಪರ್ಧೆ ಬಗ್ಗೆ ತೀರ್ಮಾನಿಸದ ಜೆಡಿಎಸ್

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ವೇದಿಕೆ ಸಜ್ಜುಪಡಿಸಿಕೊಂಡಿದ್ದು, ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್‌ ತೀರ್ಮಾನ ಇನ್ನಷ್ಟೇ ಹೊರಬೀಳಬೇಕಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚೇ ಇದೆ. ಬಿಜೆಪಿಯಿಂದ ದಿವಂಗತ ಸುರೇಶ್‌ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್‌, ರಮೇಶ ಕತ್ತಿ, ಪ್ರಭಾಕರ ಕೋರೆ, ಮಹಂತೇಶ ಕವಟಗಿಮಠ ಅವರ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ ಕಾಂಗ್ರೆಸ್ಸ್ ಹಾಗೂ ಬಿಜೆಪಿಯಿಂದ ಸ್ಪ್ರದಿಸೋ ಅಭರ್ಥಿ ಗಳು ಯಾರು ಗೊತ್ತಾ..?

ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು. ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ …

Read More »

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೂಂದು ಮಹತ್ವದ ತಿರುವು ಸಿಕ್ಕಿದ್ದು, ಸಿಡಿಯಲ್ಲಿರುವ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ಪಾಲಕರು ಬೆಳಗಾವಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ದ್ದಾರೆ. ಇದರೊಂದಿಗೆ ಪ್ರಕರಣ ಮತ್ತೂಂದು ಮಜಲು ಪಡೆದುಕೊಂಡಿದೆ. ಬೆಳಗಾವಿಯ ಹನುಮಾನ ನಗರದ ನಿವಾಸಿಯಾದ ಯುವತಿಯ ಪಾಲಕರು ತಮ್ಮ ಮಗಳನ್ನು ಮಾ.2ರಂದು ಬೆಂಗಳೂರಿನಲ್ಲಿ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮಗಳನ್ನು …

Read More »

HD Revanna: ‘2023ರಲ್ಲಿ ಹೆಚ್‌ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ’

ಬೆಂಗಳೂರು: ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಹೆಚ್‌.ಡಿ.ಕುಮಾರಸ್ವಾಮಿ ನೇತೃತದ ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌.ಡಿ.ರೇವಣ್ಣ(HD Revanna), ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆಯೋ, ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ. ಕುಮಾರಸ್ವಾಮಿ ಹತ್ತಿರ ಕೆಲವು ಗ್ರಹಗಳು ಇದ್ದವು. ಅವು ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹತ್ತಿರ ಸೇರಿವೆ. ಕುಮಾರಸ್ವಾಮಿ ಕೆಲ …

Read More »

ಹಾದಿಬೀದಿಲಿ ಮಾತನಾಡದೆ ಹೊನ್ನಾಳಿಗೆ ಬನ್ನಿ, ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲು

ಬೆಂಗಳೂರು,ಮಾ.16- ಆಡಳಿತ ಪಕ್ಷದ ಶಾಸಕರಾಗಿ ಹಾದಿಬೀದಿಯಲ್ಲಿ ಮಾತನಾಡುವ ಬದಲು ತಾಕತ್ತಿದ್ದರೆ ನನ್ನ ಮತ ಕ್ಷೇತ್ರ ಹೊನ್ನಾಳಿಗೆ ಬಂದು ಮಾತನಾಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ವಿಧಾನಸೌಧ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚೌಕಟ್ಟು ಅಥವಾ ಶಾಸಕಾಂಗ ಸಭೆಯಲ್ಲಿ ಮಾತನಾಡುವ ಬದಲು ಯತ್ನಾಳ್ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಯತ್ನಾಳ್ ನಮ್ಮ …

Read More »

ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡ SIT

ಬೆಂಗಳೂರು: CD ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಐಒ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ನಾಲ್ಕು ತಿಂಗಳಿಂದ ಬ್ಲಾಕ್ ಮೇಲ್ ಮಾಡಲಾಗ್ತಿತ್ತು. ಹಣ ನೀಡಿ.. ಇಲ್ಲದಿದ್ರೆ ನಿನ್ನನ್ನ ರಾಜಕೀಯವಾಗಿ ಮುಗಿಸ್ತೀವಿ ಅಂತಾ ಆಪ್ತ ನಾಗರಾಜ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿದ್ದರು. ಆದರೆ ನಾನು ಅವರ ಒತ್ತಾಯಕ್ಕೆ ಮಣಿದಿಲ್ಲ ಅಂತಾ …

Read More »

ಇನ್‌ಸ್ಪೆಕ್ಟರ್‌ ವಿಕ್ಟರ್‌ಗೆ ನ್ಯಾಯಾಂಗ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರ್ಚ್‌ 9ರಂದು ವಿಕ್ಟರ್‌ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ …

Read More »

ಕೋವಿಡ್‌ 2ನೇ ಅಲೆ ಮುನ್ಸೂಚನೆ: ರಾತ್ರಿ ಕರ್ಫ್ಯೂ ಬಗ್ಗೆ ಮಾ.17ರ ಬಳಿಕ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ಎರಡನೇ ಅಲೆಯ ಮುನ್ಸೂಚನೆ ಖಚಿತವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸದಿದ್ದರೆ, ದಂಡ ವಿಧಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ತಜ್ಞರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. ಕೋವಿಡ್‌ ಮತ್ತೆ ಹೆಚ್ಚುತ್ತಿರುವುದರಿಂದ ಇದೇ 17 ರಂದು ಪ್ರಧಾನಿ ನರೇಂದ್ರಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ …

Read More »

ಫುಡ್ ಡೆಲಿವರಿ ಗಲಾಟೆ : ಹಿತೇಶಾ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು : ಯುವತಿ ಮೇಲೆ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದಾನೆ ಎನ್ನುವ ಆರೋಪದ ಪ್ರಕರಣದಲ್ಲಿ ಮತ್ತೊಂದು ಹೊಸ ಬೆಳವಣೆಗೆ ನಡೆದಿದೆ. ಇಂದು ( ಮಾರ್ಚ್ 15) ಹಲ್ಲೆಗೊಳಗಾಗಿದ್ದೇನೆ ಎಂದು ಆರೋಪಿಸಿದ ಯುವತಿ ಹಿತೇಶಾ ಚಂದ್ರಾಣಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಡೆಲಿವರಿ ಬಾಯ್ ಕಾಮರಾಜ್ ದೂರಿನ ಮೇರೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ 355 (ಹಲ್ಲೆ),504 ( ಅಪಮಾನ) ಮತ್ತು 506 ( ಕ್ರಿಮಿನಲ್ ಬೆದರಿಕೆ) …

Read More »

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ಕಟ್ಟಲು ಯಾವ ಧರ್ಮ ಹೇಳುತ್ತದೆ? : ಹೈಕೋರ್ಟ್‌

ಬೆಂಗಳೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ನಿರ್ಮಿಸಿ ಎಂದು ಯಾವ ಧರ್ಮ ಹೇಳುತ್ತದೆ ಎಂದು ಪ್ರಶ್ನಿಸಿರುವ ಹೈಕೋರ್ಟ್‌, ದೇವರು-ಧರ್ಮದ ಹೆಸರಲ್ಲಿ ಸಾರ್ವಜನಿಕ ಆಸ್ತಿ ದುರ್ಬಳಕೆ ಮಾಡಿಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಕೋಲಾರದ ಚನ್ನಸಂದ್ರ ಹಾಗೂ ಮಂಗಸಂದ್ರ ಗ್ರಾಮಗಳಲ್ಲಿನ ಸರ್ಕಾರಿ ಗೋಮಾಳಗಳ ಜಮೀನಿನಲ್ಲಿ ಅನಧಿಕೃತವಾಗಿ ದೇವಸ್ಥಾನ, ಚರ್ಚ್‌ ಹಾಗೂ ಮಿನಾರ್‌ ನಿರ್ಮಾಣ ಮಾಡಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಸಿದ್ದನಹಳ್ಳಿಯ ಕಿಶೋರ್‌ ರಾಮಮೂರ್ತಿ ಸಲ್ಲಿಸಿರುವ …

Read More »