Breaking News

ಜಿಲ್ಲೆ

ಎಸ್ ಐ ಟಿ ತನಿಖೆಯಿಂದ ಸಿಡಿ ಸತ್ಯಾಂಶ ಬಯಲು : ಸತೀಶ ಜಾರಕಿಹೊಳಿ

ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ನಡೆಸುತ್ತಿದೆ. ತನಿಖೆಯ ಬಳಿಕ ಸತ್ಯಾಂಶ ಬಯಲಾಗಲಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಮೌಢ್ಯ ನಿವಾರಣೆಗಾಗಿ ಜಿಲ್ಲೆಯ ಜುಮನಾಳ ಗ್ರಾಮದಲ್ಲಿ ಭಾನುವಾರ ಸ್ಮಶಾನ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದರಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೈವಾಡ ಕೇಳಿಬರುತ್ತಿದೆ, ಅವರನ್ನು …

Read More »

ಮನೆ, ಕಟ್ಟಡ ನಿರ್ಮಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ನಗರ ಪ್ರದೇಶದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕವನ್ನು ನಗರಾಭಿವೃದ್ಧಿ ಇಲಾಖೆ ಇಳಿಕೆ ಮಾಡಲು ನಿರ್ಧರಿಸಿದ್ದು ಈ ಸಂಬಂಧ ಮಾರ್ಚ್ 10 ರಂದು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ದರ ನಿಗದಿಗೆ ಈ ಹಿಂದಿನ ಪದ್ಧತಿಯನ್ನು ಕೈಬಿಡಲು ನಗರಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಆಯಾ ಯೋಜನಾ ಪ್ರದೇಶಗಳಲ್ಲಿನ ಜನಸಂಖ್ಯೆ ಆಧರಿಸಿ ಪರಿಷ್ಕೃತ ದರ ನಿಗದಿ ಮಾಡಲಾಗಿದೆ. ಕಟ್ಟಡದ ಮಾರ್ಗಸೂಚಿ ದರದ ಒಟ್ಟು ಮೌಲ್ಯದ ಶೇಕಡಾ 0.1 ರಿಂದ ಶೇಕಡ 0.5 ರವರೆಗೆ …

Read More »

ಸಿ.ಡಿ.ಪ್ರಕರಣ: ಫೇಸ್‌ಬುಕ್ ಖಾತೆ ಅಳಿಸಿ ನಾಪತ್ತೆ; ಲಕ್ಷಗಟ್ಟಲೆ ಹಣ ವರ್ಗಾವಣೆ

ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾದ ಯುವಕ, ತನ್ನ ಫೇಸ್‌ಬುಕ್‌ ಖಾತೆಯನ್ನು ಅಳಿಸಿ ನಾಪತ್ತೆಯಾಗಿದ್ದಾನೆ. ಆತ ಹಾಗೂ ಆತನ ಪರಿಚಯಸ್ಥರ ಖಾತೆಗೆ ಲಕ್ಷಗಟ್ಟಲೆ ಹಣ ವರ್ಗಾವಣೆ ಆಗಿದೆ. ಆತನ ಪತ್ನಿ ಹೆಸರಿನಲ್ಲಿ ಫಾರ್ಚ್ಯೂನರ್‌ ಕಾರು ಸಹ ಬುಕ್ ಆಗಿರುವುದು ಎಸ್‌ಐಟಿ ವಿಚಾರಣೆಯಿಂದ ಗೊತ್ತಾಗಿದೆ. ಸುದ್ದಿವಾಹಿನಿಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದ ಆತ, ಕಳೆದ ವರ್ಷ ಕೆಲಸ ಬಿಟ್ಟಿದ್ದ. ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತನಾಗಿ ಗುರುತಿಸಿಕೊಂಡಿದ್ದ. ಇದೀಗ ಆತನಿಗಾಗಿ ಎಸ್‌ಐಟಿ ಅಧಿಕಾರಿಗಳು …

Read More »

ಶಾಕಿಂಗ್‌ ನ್ಯೂಸ್‌ : ಬೆಳಗಾವಿಯಲ್ಲಿ ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು.!

ಬೆಳಗಾವಿ : ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು ಕಂಡು ಬಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ, ರಾಯಭಾಗ ತಾಲೂಕಿನ ಸೌಂದತ್ತಿ ಗ್ರಾಮದ ಒಂದೇ ಕುಟುಂಬದ 19 ಮಂದಿಗೆ ಕರೋನ ಸೊಂಕು ಈಡಾಗಿದ್ದಾರೆ ಎನ್ನಲಾಗಿದ್ದು, ಮಹಾರಾಷ್ಟ್ರದಲ್ಲಿ ನಡೆದ ಸಂಬಂಧರಿಕರ ಕಾರ್ಯಕ್ರಮವೊಂದರಲ್ಲಿ ಈ ಕುಟಂಬ ಭಾಗವಹಿಸಿ ವಾಪಸ್ಸು ತಮ್ಮೂರಿಗೆ ಬಂದಿತ್ತು, ಈ ವೇಳೆ ಅವರಿಗೆ ಕರೋನ ಟೆಸ್ಟ್‌ ಮಾಡಿಸಲಾಗಿದೆ. ನಿನ್ನೆ ಕುಟಂಬದ ಐವರಿಗೆ ಕರೋನ ಸೊಂಕು ಇರೋದು ದೃಡಪಟ್ಟಿದ್ದು, ಇಂದು …

Read More »

ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ ಸುಪೀರಿಯರ್ ಕನ್ನಡ ಭಾಷೆ ಇದೆ.: ಪ್ರಕರಣ ಪಕ್ಕಾ ಪ್ಲಾನ್ ಯತ್ನಾಳ್

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆದಿದೆ. ಸಿಡಿ ಪ್ರಕರಣದ ಮೂಲಕ ಅವರನ್ನು ಹಣಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಉನ್ನತ ನಾಯಕರಿದ್ದಾರೆ. ಈ ಇಬ್ಬರು ನಾಯಕರಿಂದಲೇ ಸಿಡಿ ಷಡ್ಯಂತ್ರ ನಡೆದಿದೆ. ಇನ್ನು ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ …

Read More »

ಸೆಕ್ಸ್ ಸಿಡಿ ಪ್ರಕರಣ: ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್..!

ವಿಜಯಪುರ: ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನು ಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಅಂಟಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಮನೆಗೆ …

Read More »

ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ರೆ ಸಾಲದು; ಸತೀಶ್ ಜಾರಕಿಹೊಳಿ

ಬೆಳಗಾವಿ : ಆ ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದರೆ ಸಾಲದು, ಅಧಿಕೃತವಾಗಿ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಡಿ ಪ್ರಕರಣದ ಕುರಿತು ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಗೆ ಮುಂದೆ ಬಂದು ಹೇಳಿದ್ದಾರೋ ಹಾಗೆಯೇ ಆ ಯುವತಿ ಕೂಡ ಮುಂದೆ ಬಂದು ತನಗಾದ ಅನ್ಯಾಯದ ಬಗ್ಗೆ ಹೇಳಿಕೊಳ್ಳಬೇಕು ಆಗ ಮಾತ್ರ …

Read More »

ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು.

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿಯ ಸಿ.ಡಿ ಕೇಸ್​ ಕ್ಷಣಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ. ಇದಾಗಲೇ ಕೆಲವರನ್ನು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಇನ್ನು ಕೆಲವರಿಗಾಗಿ ಜಾಲ ಬೀಸಿದ್ದಾರೆ. ಈ ನಡುವೆಯೇ ಸಿ.ಡಿಯಲ್ಲಿ ಇರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಗೂ ತನಿಖಾಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಘಟನೆಯ ನಂತರದ ಬೆಳವಣಿಗೆಗಳ ಬಳಿಕ ಕಾಣೆಯಾಗಿದ್ದ ಯುವತಿ, ಕೊನೆಗೂ ಸಿಕ್ಕಿದ್ದು, ಆಕೆಯನ್ನು ವಿಚಾರಣೆ ಮಾಡುವ ಸಲುವಾಗಿ ನೋಟಿಸ್​ ಜಾರಿಗೊಳಿಸಲಾಗಿದೆ. …

Read More »

ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸುದ್ದಿಗಳು ಹೊರಬರುತ್ತಲೇ ಇದೆ. ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ. ಸಿಡಿ ಪ್ರಕರಣದ ಕಿಂಗ್ ಪಿನ್ ಪತ್ರಕರ್ತ, ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸಲು ಯೋಜನೆ ರೂಪಿಸಿದ್ದ. ಡೀಲ್ ದುಡ್ಡಲ್ಲಿ ಜಾತ್ರೆ ನಡೆಸಲು ಕೂಡ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.   ಮಹಿಂದ್ರಾ ಕಂಪನಿಯ ಎರಡು ಕಾರ್ ಖರೀದಿಸಲು ಮುಂದಾಗಿದ್ದ ಆತ …

Read More »

ಸಾಹುಕಾರ್ ಸಿಡಿ ಕೇಸ್ – ಯುವತಿಗೆ ನೋಟಿಸ್ ಜಾರಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ನಿನ್ನೆ ದೂರು ದಾಖಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು. …

Read More »