Breaking News

ಜಿಲ್ಲೆ

ಸಂಸದರ ಮಾನ ಹರಾಜು ಹಾಕಿದ ವಾಟಾಳ್..

ಬೆಂಗಳೂರು,ಮಾ.6- ಮಹದಾಯಿ, ಮೇಕೆದಾಟು ಯೋಜನೆ ಆರಂಭಕ್ಕೆ ಒತ್ತಾಯಿಸಿ ಹಾಗೂ ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆ ಕಾಮಗಾರಿ ಕೈಗೆತ್ತಿಕೊಂಡರೂ ಮೌನ ವಹಿಸಿರುವ ಸರ್ಕಾರದ ಕ್ರಮ ವಿರೋಸಿ ಕನ್ನಡ ಒಕ್ಕೂಟ ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಅನ್ಯಾಯದ ವಿರುದ್ದ ಲೋಕಸಭಾ ಸದಸ್ಯರು ಧ್ವನಿ ಎತ್ತದಿರುವುದು ತೀವ್ರ ಖಂಡನೀಯ ಎಂದರು. ತಮಿಳುನಾಡಿನಲ್ಲಿ ಕಾವೇರಿ ನದಿಜೋಡಣೆಗೆ ಸಂಬಂಸಿದಂತೆ 118 ಕಿ.ಮೀ ಉದ್ದದ …

Read More »

ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್‍ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.

ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ …

Read More »

ಜೈಲು ಪಾಲಾದ ಸಿಡಿಪಿಓಗಳು!

ವಿಜಯಪುರ : ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದಂತೆ ಒಟ್ಟು ಮೂವರು ಸಿಡಿಪಿಓ ಗಳನ್ನು ಪೊಲೀಸರು ಜೈಲಿಗಟ್ಟಿರುವ ಘಟನೆ ನಡೆದಿದೆ. ಜಮಖಂಡಿಯ ಗೋಪಾಲ್ ತೇಲಿ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಗಿರೀಶ್ ತೇಲಿ, ಮಹಾದೇವ ತೇಲಿ ಎಂಬ ಅಧಿಕಾರಿಗಳು ಅಂಗನವಾಡಿ ಮಕ್ಕಳಿಗೆ ಸೇರಬೇಕಿದ್ದ ಕೆಎಂಎಫ್ ಹಾಲಿನ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಜಮಖಂಡಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದಿದ್ದರು. …

Read More »

‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಸುಧಾಕರ್ ಅವರದೂ ಸಿಡಿ ಇದೆಯಾ? ಎಂದ ಸಿದ್ದರಾಮಯ್ಯ

ಬೆಂಗಳೂರು: ‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಮಾಧ್ಯಮಗಳು ಯಾವುದೇ ರೀತಿಯ ಸುದ್ದಿ ಪ್ರಸಾರ ಮಾಡದಂತೆ ಕೆಲ ಸಚಿವರುಗಳು ಮುಂಜಾಗ್ರತೆಯಾಗಿ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಿಡಿ ಇದೆ ಎಂದು ಗೊತ್ತಿದ್ದರೆ ಮಾತ್ರ ಅದನ್ನು ರಾಜಕೀಯ ಷಡ್ಯಂತ್ರ ಎಂದು ಹೇಳಿಕೊಳ್ಳುತ್ತಾರೆ. ಹಾಗಾದರೆ ಸಚಿವ ಸುಧಾಕರ್ ಅವರದು …

Read More »

“ಕುಂಬಳಕಾಯಿ ಕಳ್ಳ ಎಂದರೆ 6 ಸಚಿವರಿಗೇಕೆ ಭಯ?”: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಮಾರ್ಚ್.06: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಹೊರ ಬರುತ್ತಿದ್ದಂತೆ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಾಂಬೆ ಫ್ರೆಂಡ್ಸ್ ಎಂತಲೇ ಕರೆಸಿಕೊಳ್ಳುವ ಸಚಿವರ ನಡೆಯನ್ನು ಕಾಂಗ್ರೆಸ್ ಟೀಕಿಸಿದೆ. “ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕದ ಬಿಜೆಪಿ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ?. ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ?.” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ …

Read More »

ಸಂಪುಟದ 6 ಸಚಿವರು ಕೋರ್ಟ್ ಮೊರೆ ಹೋಗಿದ್ದೇಕೆ?: ಬಿ ಸಿ ಪಾಟೀಲ್ ಸ್ಪಷ್ಟನೆ

ಹಾವೇರಿ, ಮಾರ್ಚ್.06: ತಮ್ಮ ವಿರುದ್ಧ ಯಾವುದೇ ರೀತಿ ಅವಹೇಳನಕಾರಿ ಮತ್ತು ಮಾನಹಾನಿಗೆ ಸಂಬಂಧಿಸಿದಂತೆ ಯಾವುದೇ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. “ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದು ಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ …

Read More »

ಮತ್ತೆ ಶುರು ‘ಕನ್ನಡದ ಕೋಟ್ಯಧಿಪತಿ’ ಹವಾ.!

ಬೆಂಗಳೂರು: ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಜೂನ್ 22ರಂದು ಮೊದಲ ಸಂಚಿಕೆ ಪ್ರಸಾರವಾಗಲಿದ್ದು, ಪ್ರತಿ ಶನಿವಾರ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ರಾತ್ರಿ 8 ಗಂಟೆಗೆ ನಿಗದಿಯಾಗಿರೋ ಈ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಿರೂಪಣೆ ಮಾಡಲಿದ್ದಾರೆ. ಇನ್ನು ಈ ಸೀಸನ್ ನ ಕನ್ನಡದ ಕೋಟ್ಯಧಿಪತಿ ಯಾರಾಗಲಿದ್ದಾರೆ …

Read More »

ನನಗೆ ಯುವತಿ ಪರಿಚಯವೇ ಇಲ್ಲ, ಯಾವುದೇ ಸಂಪರ್ಕವೂ ಇಲ್ಲ – ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ

ಬೆಂಗಳೂರು : ನನಗೆ ಯುವತಿ ಪರಿಚಯವೇ ಇಲ್ಲ, ಯಾವುದೇ ಸಂಪರ್ಕವೂ ಇಲ್ಲ. ನನಗೆ ಸಂತ್ರಸ್ತ ಯುವತಿಯ ಕುಟುಂಬದ ಸದಸ್ಯರೊಬ್ಬರು ಪರಿಚಯ. ಅವರೇ ನನಗೆ ಸಿಡಿ ಕೊಟ್ಟಿದ್ದಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ತಿಳಿಸಿದ್ದಾರೆ.   ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಸಂಬಂಧ ಇಂದು ವಿಚಾರಣೆಗೆ ದೂರುದಾರ ದಿನೇಶ್ ಕಲ್ಲಳ್ಳಿ ಹಾಜರಾದರು. ಇಂತಹ ಅವರನ್ನು ಡಿಸಿಪಿ ಅನುಚೇತ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಸತತ 4 ಗಂಟೆಗಳ …

Read More »

ಸಾರಿಗೆ ಸಂಸ್ಥೆಗೆ 4 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ನಷ್ಟ: ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, 4 ಸಾವಿರ ಕೋಟಿ ರೂ ಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಪರಿಷತ್ ನಲ್ಲಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಕೆ.ಟಿ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 4 ಸಾರಿಗೆ ನಿಗಮಗಳಿಗೆ 4 ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ. ಈ ಪೈಕಿ 2,980 ಕೋಟಿ ರೂ. ನಿವ್ವಳ ಆದಾಯವೇ …

Read More »

ಸ್ಯಾಟಲೈಟ್ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ :ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು : ರಾಜ್ಯದ ಬಸ್ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಗೃಹ ನಿರ್ಮಾಣ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ವಿಧಾನಪರಿಷತ್​​ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಶ್ರೀಕಂಠೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 165 ಬಸ್ ನಿಲ್ದಾಣಗಳ ಪೈಕಿ 66 ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ ಇಲ್ಲ. ಅಲ್ಲಿ ಆದಷ್ಟು ಬೇಗ ವಿಶ್ರಾಂತಿ ಗೃಹ ನಿರ್ಮಿಸಲಾಗುತ್ತದೆ ಎಂದರು. …

Read More »