Breaking News
Home / ಜಿಲ್ಲೆ (page 821)

ಜಿಲ್ಲೆ

ಅವಧಿ ಮುಗಿದರೂ ಜಾಗ ಖಾಲಿ ಮಾಡದೇ ಜಾಂಡಾ ಹೂಡಿ ಕುಳಿತ ಅಧಿಕಾರಿಗಳು

ಬೆಂಗಳೂರು, ಸೆ.2- ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಅವಧಿ ಮುಗಿದಿದ್ದರೂ ಮಾತೃ ಹುದ್ದೆಗೆ ತೆರಳದೆ ಇನ್ನೂ ಅದೇ ಹುದ್ದೆಗಳಲ್ಲಿ ಮುಂದುವರಿದಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿ ವಿವಿಧ ಇಲಾಖೆಗಳಲ್ಲಿ ಅವಧಿ ಮುಗಿದಿದ್ದರೂ ಐದಾರು ವರ್ಷಗಳಿಂದ ಅದೇ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲವರಂತೂ ರಾಜಕೀಯ ಪ್ರಭಾವ ಬಳಸಿ ಅದೇ ಹುದ್ದೆಯಲ್ಲಿ ಬಲವಾಗಿ ಬೇರೂರಿರುವ ನಿದರ್ಶನಗಳು ಕೂಡ ಇವೆ. 2013ರ ಸೆಕ್ಷನ್-6ರನ್ವಯ ನಿಯೋಜನೆ ಮೇರೆಗೆ …

Read More »

ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತರು ಆತನ ಮೊಬೈಲ್ ತೆಗೆದುಕೊಂಡು ನಾಪತ್ತೆ

ಚಿಕ್ಕಮಗಳೂರು: ಬೆಂಗಳೂರಿನಿಂದ ಬಂದಿದ್ದ ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರು ಪಾಲಾಗಿದ್ದಾನೆ. ಆದರೆ ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತರು ಆತನ ಮೊಬೈಲ್ ತೆಗೆದುಕೊಂಡು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲ್ದೂರಿನ ಗ್ರಾಮದಲ್ಲಿ ನಡೆದಿದೆ.   ಅನ್ವಿತ್ (18) ಮೃತ ಯುವಕ. ತಂದೆಯನ್ನ ಕಳೆದುಕೊಂಡಿದ್ದ ಅನ್ವಿತ್ ಅಮ್ಮ-ಅಕ್ಕನಿಗೆ ಆಸರೆಯಾಗಿದ್ದನು. ಅಕ್ಕನನ್ನು ಈತನೇ ಓದಿಸುತ್ತಿದ್ದು, ಬೆಂಗಳೂರಲ್ಲಿ ಬೇಕರಿ ಕೆಲಸ ಮಾಡಿಕೊಂಡಿದ್ದನು. ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಊರಿಗೆ ಬಂದಿದ್ದ ಅನ್ವಿತ್ ಮತ್ತೆ …

Read More »

ಕೊರೋನಾತಂಕ ನಡುವೆ ಆನ್‌ಲೈನ್‌ಮೂಲಕ ಮನೆ ಬಾಗಿಲಿಗೆ ಮದ್ಯ!

ಬೆಂಗಳೂರು  : ರಾಜ್ಯ ಸರ್ಕಾರ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಮದ್ಯ ತಲುಪಿಸುವ ಬಗ್ಗೆ ಮತ್ತೆ ಗಂಭೀರ ಚಿಂತನೆ ನಡೆಸಿದ್ದು, ಈ ಕುರಿತು ಅಧ್ಯಯನ ನಡೆಸಲು ಹಿರಿಯ ಅಬಕಾರಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಖುದ್ದು ಅಬಕಾರಿ ಸಚಿವ ಎಚ್‌.ನಾಗೇಶ್‌ ಅವರೇ ಈ ವಿಷಯ ತಿಳಿಸಿದ್ದಾರೆ. ಕಳೆದ ವರ್ಷ ನಾಗೇಶ್‌ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹೊಸ್ತಿಲಲ್ಲೇ ಈ ಬಗ್ಗೆ ಹೇಳಿಕೆ ನೀಡಿದ್ದರು. ಅದರ ಬಗ್ಗೆ ಸಾಕಷ್ಟುಟೀಕೆ ಟಿಪ್ಪಣಿ ಕೇಳಿಬಂದಿದ್ದರಿಂದ …

Read More »

ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ

ಬೆಳಗಾವಿ: ಕೊರೊನಾ ಬಗ್ಗೆ ಭಯ ಬೇಡ. ಆದರೆ, ಮುಂಜಾಗ್ರತೆ ವಹಿಸಬೇಕು. ಸೋಂಕು ಬಂತೆಂದರೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. – ಕೋವಿಡ್‌ನಿಂದ ಗುಣಮುಖರಾದ ರಾಮದುರ್ಗ ತಾಲ್ಲೂಕು ಕಟಕೋಳದ ಯುವಕ ಆನಂದ ಸಿದ್ನಾಳ ಅವರ ಸಲಹೆ ಇದು. ಕೋವಿಡ್ ಗೆದ್ದ ಕಥೆಯನ್ನು ಅವರು ‘ಪ್ರಜಾವಾಣಿ’ಯೊಂದಿಗೆ ಹಂಚಿಕೊಂಡರು. ‘ನಾನು ಚಾಲಕ. ಟ್ರಕ್ ಇದೆ. ಲಾಕ್‌ಡೌನ್‌ ಆದ ಸಮಯದಲ್ಲಿ ಕೆಲಸ ಇಲ್ಲದೆ ಜೀವನ ನಡೆಸುವುದು ಕಷ್ಟವಾಗಿತ್ತು. ಲಾಕ್‌ಡೌನ್‌ ತೆರವಾದ ನಂತರ ಕೆಲವು ದಿನ ಊರು ಸುತ್ತಿದೆ. ಹೋದ ಕಡೆಯಲ್ಲಿ …

Read More »

ಯುವ ಬ್ರಿಗೇಡ್ ವತಿಯಿಂದ ಕಟ್ಟಿಸಿದ ‘ನಮ್ಮನೆ’ ಪ್ರವೇಶಿಸಿದ ಮೀರಮ್ಮ

ಹುಕ್ಕೇರಿ: ‘ನಂದು ಮನೆ ಪೂರಾ ಬಿದ್ದು ಹೋಗಿತ್ರಿ. ಮಲಗಾಕ ಬಹಳ ತೊಂದರೆ ಇತ್ತು. ಚಕ್ರವರ್ತಿ ಸೂಲಿಬೆಲೆ ಹಾಗೂ ಯುವ ಬ್ರಿಗೇಡ್ ಸದಸ್ಯರು ಹೊಸ ಮನೆ ಕಟ್ಟಿ ಕೊಟ್ಟಾರು. ನಾನು ಬಡುವಿ ಅದಿನಿ ಅಂತ. ವಾಸ್ತು ಅವ್ರ ಮಾಡ್ಯಾರು. ನಾನು ಆರಾಮ ಅದನ್ರಿ. ನನಗ ಎಲ್ಲ ವ್ಯವಸ್ಥ ಮಾಡ್ಯಾರು. ದೇವರು ಅವರನ್ನು ತಂಪಾಗಿ ಇಟ್ಟಿರಲಿ’ ಎಂದು ಮನ ಮಿಡಿಯುವ ಮಾತುಗಳು ಕೇಳಿ ಬಂದಿದ್ದು, ತಾಲ್ಲೂಕಿನ ಹೊಸೂರ ಗ್ರಾಮದ ಮೀರಮ್ಮ ಬಾಗವಾನ್ ಅವರಿಂದ. ಇದು …

Read More »

ಯುವಕರಿಗೆ ಪುಸ್ತಕ ಕೊಡಿಸಿದ ಪಿಎಸ್‌ಐ

ಕೌಜಲಗಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಎಸ್‌ಐ ಎಚ್.ಕೆ. ನೇರಳೆ ಅವರು ಗ್ರಾಮದ ಯುವಕರಿಗೆ ವೈಯಕ್ತಿಕವಾಗಿ ₹ 10ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡಿಸಿ ನೆರವಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳನ್ನು ಅವರು ನೀಡಿ ಗಮನಸೆಳೆದಿದ್ದಾರೆ. ಗ್ರಾಮದಲ್ಲಿ ಎಸ್‌ಡಿಎ, ಎಫ್‌ಡಿಎ, ಪಿಎಸ್‌ಐ, ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಿದ್ದಾರೆ. ಈ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಯುವಕರು ತಿಳಿಸಿದರು.  

Read More »

KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ವಿದ್ಯಾರ್ಥಿಗಳಿಗೆ ಹಳೇ ‘ಬಸ್ ಪಾಸ್’ ಬಳಸಿ ಪರೀಕ್ಷೆಗೆ ಹಾಜರಾಗಲು ಅನುಮತಿ

ಬೆಂಗಳೂರು : ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿಲ್ಲ. ಆದ್ರೇ ಕೊರೋನಾ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪರೀಕ್ಷೆಗಳೂ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಆದ್ರೆ ಕೆ ಎಸ್ ಆರ್ ಟಿ ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿತ್ತು. ಹೀಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿ ಬಸ್ ಪಾಸ್ ಬಳಸಿಕೊಂಡು ಒಡಾಟಕ್ಕೆ ಅನುಮತಿ …

Read More »

ಸುದೀಪ್ ಹುಟ್ಟುಹಬ್ಬ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಕಿಚ್ಚ ಸುದೀಪ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಕೊರೊನಾ ಹಿನ್ನೆಲೆ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಿಗೆ ಮನೆಯ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಅವರ ಮನೆಯ ಬಳಿ ಗುಂಪು ಸೇರಿದ್ದರು.ಮಂಗಳವಾರ ಮಧ್ಯರಾತ್ರಿ ಅಭಿಮಾನಿಗಳು ಕಿಚ್ಚನ ಪುಟ್ಟೇನಹಳ್ಳಿ ನಿವಾಸ ಬಳಿ ಗುಂಪು ಸೇರಿದ್ದರು. ಹೀಗಾಗಿ …

Read More »

ವೈಜನಾಥ ಪಾಟೀಲ ಸಂಸ್ಮರಣ ಗ್ರಂಥ ಪ್ರಕಟಿಸಲು ನಿರ್ಧಾರ

ಕಲಬುರ್ಗಿ: ‘371 (ಜೆ) ತಿದ್ದುಪಡಿ ಹೋರಾಟದ ರೂವಾರಿ, ಮಾಜಿ ಸಚಿವ ವೈಜನಾಥ ಪಾಟೀಲ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಸಂಸ್ಮರಣ ಗ್ರಂಥ ಹೊರತರಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಂಪಾದಕೀಯ ಸಮಿತಿ ರಚನೆ ಮಾಡಲಾಗಿದೆ’ ಎಂದು ವೈಜನಾಥ ಪಾಟೀಲರ ಸಂಸ್ಮರಣಾ ಸಂಚಿಕೆ ಸಮಿತಿ ಸಂಚಾಲಕ ಎಂ.ಬಿ.ಅಂಬಲಗಿ ಮತ್ತು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ಪಾಟೀಲ ತಿಳಿಸಿದರು. ನಗರದಲ್ಲಿ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ವೈಜನಾಥ …

Read More »

ರಾಯಚೂರು ಮಾರುಕಟ್ಟೆಗೆ ದಾಖಲೆ ಪ್ರಮಾಣದಲ್ಲಿ ಬಂದ ಈರುಳ್ಳಿ; ದರ ಕುಸಿತಕ್ಕೆ ಕಂಗಾಲಾದ ರೈತ

ರಾಯಚೂರು : ರೈತನಿಗೆ ಒಂದಿಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ, ಕಳೆದ ಬಾರಿ ದುಬಾರಿ ದರದಲ್ಲಿ ಮಾರಾಟವಾಗಿದ್ದ ಈರುಳ್ಳಿ ಈ ಬಾರಿ ಆರಂಭದಲ್ಲಿಯೇ ಪಾತಾಳಕ್ಕಿಳಿದಿದೆ. ಈರುಳ್ಳಿ ಬೆಳೆದ ರೈತ ಈಗ ದರ ಇಲ್ಲದೆ ಕಂಗಾಲಾಗಿದ್ದಾನೆ. ಒಂದು ಕಡೆ ಈರುಳ್ಳಿ ಇಟ್ಟುಕೊಳ್ಳಲು ಆಗದೆ ಮಾರಾಟ ಮಾಡಲು ಆಗದೆ ದಿಕ್ಕು ತೋಚದಂತಾಗಿದ್ದಾನೆ. ಒಂದು ಕೊರೋನಾದಿಂದ ಉದ್ಯೋಗವಿಲ್ಲದೇ ಕೃಷಿಯತ್ತ ಮುಖ ಮಾಡಿದ ರೈತರ, ಕಷ್ಟ ಪಟ್ಟು ಈರುಳ್ಳಿಯನ್ನು ಬೆಳೆದು ಮಾರುಕಟ್ಟೆಗೆ ತಂದರೆ ಈರುಳ್ಳಿ ದರ ಪಾತಾಳಕ್ಕಿಳಿದಿದೆ. …

Read More »