Breaking News
Home / ಜಿಲ್ಲೆ (page 831)

ಜಿಲ್ಲೆ

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್‍ಗೆ ಮತ್ತೆ ಸಂಕಷ್ಟ

ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿದೆ. ಆರೋಪಿಗಳಾದ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೋಹಂತಿ ಮತ್ತು ಎ.ಎಂ ಪ್ರಸಾದ್ ವಿಚಾರಣೆಗೆ ನೊಟೀಸ್ ನೀಡಿದೆ. ಪ್ರಕರಣದಲ್ಲಿ ಕೆ.ಜೆ.ಜಾರ್ಜ್, ಪ್ರಣಬ್ ಮೋಹಂತಿ, ಎ.ಎಂ.ಪ್ರಸಾದ್ ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ ಎಂದು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನ ಪ್ರಶ್ನಿಸಿ ಮೃತ ಗಣಪತಿ …

Read More »

A.D.G.P.ಅಮರಕುಮಾರ್ ಪಾಂಡೆ ಅವರ ಸಂಧಾನಸಭೆ ಸಕ್ಸಸ್

ಬೆಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ವಿವಾದ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಎಡಿಜಿಪಿ ಅಮರಕುಮಾರ್ ಪಾಂಡೆ ಅವರು ನಡೆಸಿದ, ಸಂಧಾನಸಭೆ ಸಕ್ಸಸ್ ಆಗಿದೆ ಎಡಿಜಿಪಿ ಅಮರಕುಮಾರ ಪಾಂಡೆ ಅವರು ನಡೆಸಿದ ಕನ್ನಡಿಗರ – ಮರಾಠಿಗ ಭಾಷಿಕ ಮುಖಂಡರ ಜೊತೆ ನಡೆದ ಸಭೆ ಸಫಲವಾಗಿದೆ.         ಪೀರನವಾಡಿಯ ಲಕ್ಷ್ಮೀ ಮಹಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ನಾಯಕರ ಸಭೆಯಲ್ಲಿ ಸೌಹಾರ್ದಯುತ ಸಲಹೆಗಳು …

Read More »

ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಸಂಘಟನೆಗಳ 20 ಮಂದಿ ಕಾರ್ಯಕರ್ತರ ಮೇಲೆ ಕ್ರಿಮಿನಲ್‌ ಕೇಸ್‌

.   ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಸಂಘಟನೆಗಳ 20 ಮಂದಿ ಕಾರ್ಯಕರ್ತರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕಲಾಗಿದೆ. ದೊಂಬಿ, ಅತಿಕ್ರಮ ಪ್ರವೇಶ, ಮಾರಕಾಸ್ತ್ರಗಳೊಂದಿಗೆ ಗಲಭೆ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಅಡಿ ಆರೋಪ ಸಾಬೀತಾದರೆ ಕನಿಷ್ಠ 3 ತಿಂಗಳಿಂದ 3 ವರ್ಷದವರೆಗೆ ಜೈಲು ಶಿಕ್ಷೆ ಆಗುವ ಸಾಧ್ಯತೆಯಿದೆ. ಆದರೆ ಕನ್ನಡ ಕನ್ನಡ ಧ್ವಜಕ್ಕೆ ಚಪ್ಪಲಿ ಎಸೆದವರೊಂದಿಗೆ ಸಂಧಾನ ಮಾಡಲು ಸರ್ಕಾರ ಮುಂದಾಗಿದ್ದು ಟೀಕೆಗೆ …

Read More »

ಕಣ್ವ ಹಗರಣ: ನಂಜುಂಡಯ್ಯ 7 ದಿನ ಇ.ಡಿ ವಶಕ್ಕೆ

ಬೆಂಗಳೂರು: ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌.ನಂಜುಂಡಯ್ಯ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ) ವಶಕ್ಕೆ ಪಡೆದಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ತನಿಖೆ ಆರಂಭಿಸಿ ನಂಜುಂಡಯ್ಯ ಅವರನ್ನು ವಶಕ್ಕೆ ಪಡೆದಿತ್ತು. ‘₹180 ಕೋಟಿ ವಂಚಿಸಿರುವ ಪ್ರಕರಣದಲ್ಲಿ ನಂಜುಂಡಯ್ಯ ಅವರೇ ಪ್ರಮುಖ ಆರೋಪಿ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಇ.ಡಿ ಹೇಳಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …

Read More »

ರಾಯಣ್ಣ ಪ್ರತಿಮೆ‌ ಸ್ಥಾಪನೆಯ ಹೋರಾಟಗಾರರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ – ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಪೀರನವಾಡಿಯಲ್ಲಿನ ಘಟನೆ ಸಂಬಂಧ ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ,ಜಲ,ಭಾಷೆ …

Read More »

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ

ಪೀರನವಾಡಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿವಾದ ‌ವಿಚಾರ ಲಾಠಿ ಚಾರ್ಜ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ ಘಟನೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇಲ್ಲ ಈ ಬಗ್ಗೆ ಡಿಸಿ, ಎಸ್ ಪಿ ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೆವೆ ಕಾನೂನು ರೀತಿ ಕ್ರಮ ಕೈ ಗೊಳ್ಳಲು ಸೂಚನೆ ನೀಡುತ್ತೆನೆ ರಾಯಣ್ಣ ಅಭಿಮಾನಿಗಳ ಮೇಲೆ …

Read More »

ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ

ಬೆಂಗಳೂರು,ಆ.28-ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ …

Read More »

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ:B.S.Y.

ಬೆಂಗಳೂರು: ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಪೀರನವಾಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೆನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  ಬೆಳಗಾವಿ ತಾಲ್ಲೂಕಿನ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಪ್ರತಿಕ್ರಿಯಿಸಿದ ಸಿಎಂ ಅವರು, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಎಂದು ಡಿಸಿಗೆ …

Read More »

ಪೀರನವಾಡಿ ವಿವಾದ ಜಿಲ್ಲಾಡಳಿತವೇ ಬಗೆ ಹರಿಸಬೇಕು: ಸತೀಶ್ ಜಾರಕಿಹೊಳಿ

ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು. ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ …

Read More »

ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯಕೊಲೆ

ಬೆಳಗಾವಿ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯನ್ನು ಕೊಲೆಗೈದಿರುವ ಘಟನೆ  ಕಾಕತಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಲ್ಲಾವುದ್ದಿನ್ ನಜೀರಸಾಬ ಪಕಾಲಿ (32)  ಕೊಲೆಯಾದ ವ್ಯಕ್ತಿ.  ಅಮರ ಶ್ಯಾಮ ಮೇತ್ರಿ, ಅಖೀಲ ಶಿವಪ್ಪಾ ಮೇತ್ರಿ ಎಂಬ ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂಬೇಡ್ಕರ್ ಗಲ್ಲಿಯ ಯುವಕರು ಬೇರೊಂದು ಯುವಕರ ಗುಂಪಿನೊಂದಿಗೆ ಗಲಾಟೆ ನಡೆದಿತ್ತು. ಆ ಸಂದರ್ಭದಲ್ಲಿ ಸಲ್ಲಾವುದ್ದಿನ್ ಜಗಳ ಬಿಡಿಸಲು ಹೋಗಿದ್ದನು. ಆ ಸಂದರ್ಭದಲ್ಲಿ  ಅಮರ …

Read More »