ಬೆಂಗಳೂರು: ರೈತರ ಪ್ರತಿಭಟನೆಗೆ ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ನಟ-ನಟಿಯರು ಬೆಂಬಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರೈತರ ಪರವಾಗಿ ಬೆಂಬಲ ನೀಡುವಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು. ನಾವೆಲ್ಲರೂ ರೈತರು ಬೆಳೆದ …
Read More »ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ
ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ ಬೆಳಗಾವಿ : ಅಷ್ಟೇ ಗ್ರಾಮದಲ್ಲಿನ ಮಟಕಾ ಅಡ್ಡೆ ಮೇಲೆ ಮಾರಿಹಾಳ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟೇ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ನಾಯಕ್, ರಾಜು ಕಾಕತಿ, ರಮೇಶ ಗುರುನಾಥ ದೊಡಮನಿ, ಸುಧಾಕರ ನಂದಗಡಕರ ಬಂಧಿತರು. ಮಾರಿಹಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಆದಾರದ ಮೇಲೆ ಡಿಸಿಪಿ ವಿಕ್ರಂ ಆಮಟೆ ನೇತೃತ್ವದ ತಂಡ ದಾಳಿ …
Read More »ರೈಲಿಗೆ ತಲೆ ಕೊಟ್ಟು ಬೆಳಗಾವಿಯಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ..ಪತಿ ಸಾವು..ಪತ್ನಿಗೆ ಗಾಯ
ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಘಟನೆಯಲ್ಲಿ ಪತಿ ಸಾವನ್ನಪ್ಪಿ, ಪತ್ನಿಗೆ ಗಾಯವಾಗಿರುವ ಘಟನೆ ಬೆಳಗಾವಿ ನಗರದ ಒಂದನೇ ರೇಲ್ವೆ ಗೇಟ್ ಬಳಿ ನಡೆದಿದೆ.ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಈ ದಂಪತಿ ಯತ್ನಿಸಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »ಪೊಲೀಸರ ಎದುರೇ ವಿದ್ಯಾರ್ಥಿ ತಾಯಿಗೆ ಕಪಾಳಮೋಕ್ಷ
ರಾಯಚೂರು: ವಿದ್ಯಾರ್ಥಿಗೆ 80,000 ರೂ ಪೀಸ್ ಡಿಮ್ಯಾಂಡ್ ಮಾಡಿ ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿ ತಾಯಿಗೆ ಪೊಲೀಸರ ಎದುರೇ ಕಪಾಳಮೋಕ್ಷ ಮಾಡಿದ ಮೊಂಟೆಸರಿ ಶಾಲೆ ಮುಖ್ಯಸ್ಥ ಸತೀಶ್ ಕುಮಾರ್ ಹಾಗೂ ಆತನ ಪತ್ನಿ ಇಬ್ಬರನ್ನು ಬಂಧಿಸಲಾಗಿದೆ. 10ನೇ ತರಗತಿ ವಿದ್ಯಾರ್ಥಿ ಸಂಪತ್ ಗೆ ತಾವು ಹೇಳಿದಷ್ಟು ಹಣವನ್ನು ಕಟ್ಟಬೇಕು ಎಂದು ಶಾಲೆಯ ಮುಖ್ಯಸ್ಥರು ಪ್ರತಿದಿನ ಕಿರುಕುಳ ನೀಡಿತ್ತಿದ್ದರು. ಇದರಿಂದ ಬೇಸತ್ತ ಸಂಪತ್ ಪೋಷಕರು ಟಿಸಿ ಕೊಡುವಂತೆ ಕೇಳಿಕೊಂಡಿದ್ದರು. ಟಿಸಿ ಕೊಡಲು …
Read More »ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ವರದಿ ಸಲ್ಲಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಈ ನಿರ್ದೇಶನ ನೀಡಿದೆ. ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಸುರಕ್ಷತಾ ನಿಯಮಾವಳಿ ಪಾಲಿಸ ಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸ ಬೇಕು. ಒಂದೊಮ್ಮೆ …
Read More »ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದಲ್ಲಿ ನಾಲ್ಕು ಸೈನಿಕ ವಸತಿ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯ ಅರವಿಂದ ಕುಮಾರ್ ಅರಳಿ ಪ್ರಶ್ನೆಗೆ ಉತ್ತರಿಸಿ, ವಿಜಯಪುರ ಹಾಗೂ ಮಡಿಕೇರಿಯಲ್ಲಿರುವ ಸೈನಿಕ ಶಾಲೆಗಳ ಮಾದರಿಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದೊಂದು ಸೈನಿಕ ವಸತಿ ಶಾಲೆ …
Read More »ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !
ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ. ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …
Read More »ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕಣ್ಮರೆಯಾಗಿದೆ ಕನ್ನಡ : H.D.K.
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ …
Read More »ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …
Read More »ವಾಹನ ಮತ್ತು ರೂ. 2 ಲಕ್ಷ ಹಣ ಲಪಟಾಯಿಸುತ್ತಿದ್ದ ಖದೀಮನ ಬಂಧನ
ಗೋಕಾಕ: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಲಾಭದ ಆಮಿಷ ತೋರಿಸಿ ವಾಹನ ಹಾಗೂ ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗುತ್ತಿದ ಖದೀಮನನ್ನು ಗೋಕಾಕ ಪೊಲೀಸರು ಸೆರೆಹಿಡಿದಿದ್ದಾರೆ. ನಂಬಿಕೆ ದ್ರೋಹ ಮಾಡಿ ಬುಲೆರೋ ವಾಹನ ಹಾಗೂ 2 ಲಕ್ಷ ರೂಪಾಯಿ ಪಡೆದುಕೊಂಡು ಪರಾರಿಯಾಗುತ್ತಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ತಾಂಡಾದ ಶಿವಾನಂದ (ರಾಜು) ಪ್ರೇಮಸಿಂಗ ಚವ್ಹಾಣ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಡಿಎಸ್ಪಿ ಜಾವೀದ್ ಇನಾಮದಾರ …
Read More »
Laxmi News 24×7