ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …
Read More »ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!
ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು
ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು. ತಂದೆ …
Read More »ಆಟೋ ಚಾಲಕನ ಎಡವಟ್ಟಿನಿಂದ ನಡೀತು ಭೀಕರ ಸರಣಿ ಅಪಘಾತ
ಬೆಂಗಳೂರು: ಬೆಂಗಳೂರು: ಆಟೋ ಚಾಲಕ ಮಾಡಿದ ಎಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, , ಆಟೋ, ಫ್ಯಾಸಿನೋ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಮೂರು ವಾಹನ ನುಜ್ಜುಗುಜ್ಜಾಗಿವೆ. ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಅಂತ ತಿಳಿದು ಬಂದಿದೆ. https://www.facebook.com/105350550949710/posts/255497042601726/
Read More »ನಾಳೆಯಿಂದ ವಿಧಾನಮಂಡಲ ಅಧಿವೇಶನ; ಈ ಬಾರಿ 11 ವಿಧೇಯಕ ಮಂಡನೆ; ಸ್ಪೀಕರ್ ಕಾಗೇರಿ
ಬೆಂಗಳೂರು (ಜ. 27): ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಅಂದರೆ ಜ. 28ರಿಂದ ಪ್ರಾರಂಭವಾಗಲಿದೆ. ಫೆ. 5ರವರೆಗೆ ಏಳು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಈ ಬಾರಿ 11 ವಿಧೇಯಕಗಳು ಮಂಡನೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅಧಿವೇಶನ ಹಿನ್ನಲೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನಕ್ಕೆ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ರಾಜ್ಯಪಾಲರರಾದ ವಾಜೂಭಾಯಿ ಅವರನ್ನು …
Read More »ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಿ …
Read More »ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು
ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ. ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ …
Read More »ಬೆಳಗಾವಿ ಜಿ.ಪಂನಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ: ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸಲಹೆ, ಸೂಚನೆ
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಚಿವ ರಮೇಶ ಜಾರಕಿಹೊಳಿ ನೇತೃತ್ವ ವಹಿಸಿದ್ದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ …
Read More »ಕರ್ನಾಟಕ-ಮಹಾರಾಷ್ಟ್ರ ಗಡಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ: ಠಾಕ್ರೆ
ಮುಂಬೈ ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ‘ನಿರ್ಧಿಷ್ಟ ಚೌಕಟ್ಟಿನ’ ಅಡಿಯಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸುವಂತೆ ಪುನರುಚ್ಚರಿಸಿದ್ದಾರೆ. ‘ಈವರೆಗೆ ಏನಾಗಿದೆಯೋ ಅದೆಲ್ಲ ಆಗಿಹೋಯಿತು. ಈಗ ನಾವು ಗೆಲ್ಲಲು ಹೋರಾಡಬೇಕಿದೆ. ದೀರ್ಘ ಕಾಲದಿಂದಲೂ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಿಷ್ಟ ಸಮಯದಲ್ಲಿ ಪರಿಹರಿಸಿಕೊಳ್ಳುವತ್ತ ನಾವು …
Read More »ಸಚಿವರು ಜವಾಬ್ದಾರಿಯುತ ಹೇಳಿಕೆ ನೀಡಲಿ: ಸತೀಶ ಜಾರಕಿಹೊಳಿ ಟಾಂಗ್
ಗೋಕಾಕ: “ರೈತರ ಪ್ರತಿಭಟನೆಯ ಕುರಿತು ಸಚಿವರು ಹಾದಿ-ಬೀದಿಯಲ್ಲಿ ಹೋಗುವವರ ರೀತಿ ಮಾತನಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯುತ ಹೇಳಿಕೆ ನೀಡಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆಗೆ ಟಾಂಗ್ ನೀಡಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರು ಹಕ್ಕು. ಆದರೆ, ಹಿಂಸಾತ್ಮಕ ಹೋರಾಟ ನಡೆಸುವುದು ತಪ್ಪು. ರೈತರ ಪ್ರತಿಭಟನೆ ಪಕ್ಷಾತೀತವಾಗಿದ್ದು, ಈ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದರು” ಎಂದರು. …
Read More »
Laxmi News 24×7