Breaking News
Home / ಜಿಲ್ಲೆ (page 848)

ಜಿಲ್ಲೆ

12 ವಿದ್ಯಾರ್ಥಿಗಳಿಗೆ ಶ್ರೀ ಸಾಯಿ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

ನೆಲಮಂಗಲ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಕ್ಷೇತ್ರದ ಗೌರವ ಹೆಚ್ಚಿಸಿರುವ 12 ವಿದ್ಯಾರ್ಥಿಗಳಿಗೆ ಶ್ರೀ ಸಾಯಿ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಮಾತನಾಡಿದ ಟಿ.ದಾಸರಹಳ್ಳಿಯ ಮಾಜಿ ಶಾಸಕ ಮುನಿರಾಜು, ಗುರುಗಳಿಂದ ಕಲಿತ ವಿದ್ಯೆಯಿಂದ ಜ್ಞಾನ ಸಂಪಾದನೆ ಮಾಡಿಕೊಂಡು ಭವಿಷ್ಯದಲ್ಲಿ ಹೆತ್ತ ತಂದೆ-ತಾಯಿ ಹಾಗೂ ನಾಡಿಗೆ ಕೀರ್ತಿ ತರಬೇಕು ಎಂದರು. ಶೆಟ್ಟಿಹಳ್ಳಿಯ ಬಿ. ಸುರೇಶ್ ಅವರು ಶ್ರೀ ಸಾಯಿ …

Read More »

ದಕ್ಷ ಅಧಿಕಾರಿಯನ್ನು ಏಜೆಂಟ್ ಎಂದಿರೋದನ್ನ ಖಂಡಿಸ್ತೀನಿ :ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ಡಿ.ಕೆ ಶಿವಕುಮಾರ್ ಅವರು ಏಜೆಂಟ್ ಎಂದಿರುವುದನ್ನು ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಬಲವಾಗಿ ಖಂಡಿಸುತ್ತೇನೆ.ದೇವರಾಜ್ ಅರಸರ ಜನ್ಮದಿನದಂದೇ `ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಧ್ವನಿ’ ಹೆಸರಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ. ಈ ವೇಳೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿದ ಡಿಕೆಶಿ, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ …

Read More »

ನಾಳೆಯಿಂದ ನಾವು ಕೆಲಸಕ್ಕೆ ಬರುವುದಿಲ್ಲ ಎಂದು ಮೈಸೂರು ಆರೋಗ್ಯ ಇಲಾಖೆ ವೈದ್ಯರು ಸುಧಾಕರ್‌ಗೆ ಎಚ್ಚರಿಕೆ

ಮೈಸೂರು: ಆತ್ಮಹತ್ಯೆ ಮಾಡಿಕೊಂಡ ನಂಜನಗೂಡಿನ ಟಿಹೆಚ್‍ಒ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಮಹಿಳಾ ವೈದ್ಯೆಯೊಬ್ಬರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಆರೋಗ್ಯಾಧಿಕಾರಿ ನಾಗೇಂದ್ರ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ ಅವರು ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಗೇಂದ್ರ ಅವರ ಅಂತಿಮ ದರ್ಶನ …

Read More »

ಮಳೆ ಕಡಿಮೆ ಆಗಿದ್ರೂ ಉತ್ತರ ಕರ್ನಾಟಕವನ್ನು ಪ್ರವಾಹ ಬಿಟ್ಟುಬಿಡದಂತೆ ಕಾಡುತ್ತಿದೆ.

ಬೆಂಗಳೂರು: ಮಹಾ ಮಳೆ ಕಡಿಮೆ ಆಗಿದ್ರೂ ಉತ್ತರ ಕರ್ನಾಟಕವನ್ನು ಪ್ರವಾಹ ಬಿಟ್ಟುಬಿಡದಂತೆ ಕಾಡುತ್ತಿದೆ. ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಗದಗ, ಧಾರವಾಡ, ಕೊಪ್ಪಳ ಸೇರಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ ಆಗ್ತಿದೆ. ಸರ್ಕಾರ ಈ ಕಡೆ ಕಿಂಚಿತ್ತೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಬೇರೆಯದ್ದೇ ರಾಜಕಾರಣದಲ್ಲಿ ಮುಳುಗಿಬಿಟ್ಟಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಆರು ಹಳ್ಳಿಗಳು ಜಲಾವೃತವಾಗಿವೆ. 20ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಆತಂಕ ಶುರುವಾಗಿದೆ. ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. …

Read More »

ಡಿಜೆ ಹಳ್ಳಿ ಗಲಭೆಗೆ ಪ್ರಚೋದನೆ ಕೊಟ್ಟಿದ್ದ ಎಸ್‍ಡಿಪಿಐ ಕಾರ್ಯಕರ್ತ ಖಾಲಿದ್ ಅರೆಸ್ಟ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ, ಎಸ್‍ಡಿಪಿಐ ಕಾರ್ಯಕರ್ತ ಖಾಲಿದ್‍ನನ್ನು ಪೊಲೀಸರು ಬಂಧಿಸಿದ್ದಾರೆ.ಡಿಜೆ ಹಳ್ಳಿಯ ರೋಷನ್ ನಗರ ನಿವಾಸಿಯಾಗಿದ್ದ ಖಾಲಿದ್ ಇತರೇ ಆರೋಪಿಗಳಾಗಿದ್ದ ಮುಜಾಮಿಲ್, ಅಯಾಜ್, ಆಫ್ನಾನ್ ಜೊತೆಗೂಡಿ ಕೃತ್ಯದಲ್ಲಿ ಭಾಗಿಯಾಗಿದ್ದ. ಖಾಲಿದ್ ಎಸ್‍ಡಿಪಿಐ ಕಾರ್ಯಕರ್ತರನ್ನು ಒಗ್ಗೂಡಿಸಿ ಗಲಭೆ ಮಾಡಿಸಿದ್ದ ಎಂಬ ಮಾಹಿತಿ ಲಭಿಸಿದೆ. ತಡರಾತ್ರಿ ಪೊಲೀಸರು ಆರೋಪಿ ಖಾಲಿದ್‍ನನ್ನು ವಶಕ್ಕೆ ಪಡೆದು ಕರೆತಂದು ವಿಚಾರಣೆ ನಡೆಸಿದ್ದಾರೆ.   ಖಾಲಿದ್ ಜೊತೆ ಹಲವು ಪ್ರಮುಖ …

Read More »

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಮೂವರು ಮಹಿಳೆಯರ ಶವ ಪತ್ತೆಯಾಗಿದ್ದು, 6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆ.17 ದಿನಸಿ ತರಲು ರಾಯಚೂರು ಜಿಲ್ಲೆಯ  ಕುರ್ವಕುಲಾ ಗ್ರಾಮದಿಂದ ತೆಲಂಗಾಣದ ಪಂಚದೇವಪಾಡಕ್ಕೆ ಹೋಗಿದ್ದ ನಾಲ್ವರು ಮರಳಿ  ಬರುವಾಗ ತೆಪ್ಪ ಮುಗುಚಿ ನೀರು ಪಾಲಾಗಿದ್ದರು. ನಿನ್ನೆ ಇಬ್ಬರ ಮಹಿಳೆಯರ ಶವ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಮತ್ತೊಬ್ಬ ಮಹಿಳೆ ಮೃತದೇಹ ತೊರೆತಿದೆ.  ಜುರುಲಾ ಜಲಾಶಯದ ಬಳಿ …

Read More »

ಸೆ.21ರಿಂದ 30ರವರೆಗೆ ವಿಧಾನಮಂಡಲ ಅಧಿವೇಶನ..!

ಬೆಂಗಳೂರು,ಆ.20-ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ವಿಧಾನಮಂಡಲದ ಮಳೆಗಾಲದ ಅವೇಶನ ಸೆಪ್ಟೆಂಬರ್ 21ರಿಂದ ಹತ್ತು ದಿನಗಳ ಕಾಲ ಬೆಂಗಳೂರುನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸೆಪ್ಟೆಂಬರ್ 21ರಿಂದ 30ರವರೆಗೆ ಕಾಲ ಅವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಜೂನ್ ತಿಂಗಳಿನಲ್ಲಿ ಮಳೆಗಾಲದ ಅವೇಶನ ನಡೆಸಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ವಿಧಾನಸೌಧ ಹೊರತುಪಡಿಸಿ ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ಸಭೆ ನಡೆಸಲು ಸ್ಥಳ …

Read More »

ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ

ದಾವಣಗೆರೆ, ಆ.20- ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ ಕೂಲಿನಾಲಿ ಮಾಡಿ ತಮ್ಮನನ್ನು ಸಾಕಿ ಸಲಹುತ್ತಿದ್ದರೂ ನೆತ್ತಿಯ ಮೇಲೊಂದು ಸೂರಿಲ್ಲದೆ ಪರಿತಪಿಸುತ್ತಿದ್ದಾರೆ. ಜಗಳೂರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗ್ರಾಮವೊಂದರ ಮಳೆ ಸೋರುವ ಹಾಳು ಮನೆಯಲ್ಲಿ ವಾಸಿಸುತ್ತಿರುವ ಮೇಘನಾ ಭವಿಷ್ಯದಲ್ಲಿ ಸಾಧನೆ ಮಾಡುವ ಹಂಬಲ ಹೊಂದಿದ್ದಾಳೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಮೇಘನಾ ಭವಿಷ್ಯದಲ್ಲಿ ಬ್ಯಾಂಕ್ ಅಕಾರಿಯಾಗುವ ಕನಸು ಕಂಡಿದ್ದಾಳೆ. ತನ್ನ ಓದಿನ ಜತೆಗೆ ಕೂಲಿನಾಲಿ ಮಾಡಿ ಜೀವನ …

Read More »

ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಬೆಳಗಾವಿ:  ಕೋವಿಡ್ ನಿರ್ವಹಣೆಯಲ್ಲಿ ವಿಫಲ   ಸೇರಿದಂತೆ ರೈತರಿಗೆ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗಿರುವ ಭೂ ಸುಧಾರಣಾ, ಎಪಿಎಂಸಿ,  ಕಾರ್ಮಿಕ  ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಗುರುವಾರ  ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ …

Read More »

ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿರುವ ತನಿಖಾಧಿಕಾರಿಗಳು

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್​ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಸುಮಾರು 2,063 ಪುಟಗಳ ದೋಷಾರೋಪ ಪಟ್ಟಿಯನ್ನು ಬೆಳಗಾವಿ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಚಲನಚಿತ್ರ ನಿರ್ದೇಶಕ ಆನಂದ ಅಪ್ಪುಗೋಳ್ ನೇತೃತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ 35 ಶಾಖೆಗಳನ್ನು ಹೊಂದಿದ್ದು, 26 ಸಾವಿರ ಗ್ರಾಹಕರಿಂದ ₹281.14 …

Read More »