Breaking News

ಜಿಲ್ಲೆ

ಗೋಕಾಕದಲ್ಲಿ ಟ್ರಾಫಿಕ್ ಸ್ಟೇಷನ್ ಚಾಲನೆಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ನೀಡಿದರು

ಗೋಕಾಕ:  ಗೋಕಾಕ ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಅವಶ್ಯಕತೆ ಇದೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕನಲ್ಲಿ ಟ್ರಾಫಿಕ್ ಠಾಣೆಗೆ ಬೇಡಿಕೆ ಇಟ್ಟಿದ್ದೇವೆ. ಸರ್ಕಾರದಿಂದ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಈ ಎರಡು ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಠಾಣೆ ಆರಂಭಿಸಲಾಗತ್ತೆ ಎಂದು ಹೇಳಿದರು.

Read More »

ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಭೂಷಣ ಅವರಿಗೆ ಪತ್ರ ಬರೆದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಿಸಾನ್ ಸಂಸದ್ ಸಭೆಗೆ ವೈದ್ಯಕೀಯ ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಹಾಜರಾಗದಿದ್ದರೂ ನಾನು ರೈತರ ಪರವಾಗಿದ್ದೇನೆಂದು ಹೇಳಿದ್ದಾರೆ. ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ರೈತರ ಮತ್ತು ಸ್ನೇಹಿತರ …

Read More »

ಭಾನುವಾರ ರಾಜ್ಯಾದ್ಯಂತ ನಡೆಯಬೇಕಿದ್ದ F.D..A.ಪರೀಕ್ಷೆ ಮುಂದೂಡಿಕೆ

ಬೆಂಗಳೂರು – ರಾಜ್ಯಾದ್ಯಂತ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಹಠಾತ್ ಮಂದೂಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ನಡೆಸಬೇಕಿತ್ತು. ರಾಜ್ಯದಲ್ಲಿ 1100 ಪೋಸ್ಟ್ ಗಳಿಗಾಗಿ ಸುಮಾರು 3.74 ಲಕ್ಷ ಜನರು ಪರೀಕ್ಷೆ ಬರೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಹಠಾತ್ ಮುಂದೂಡಲಾಗಿದೆ. ಬೆಂಗಳೂರು ಪೊಲೀಸರು 6 ಜನರನ್ನು ಬಂಧಿಸಿದ್ದು, ಸುಮಾರು 6 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ …

Read More »

ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. …

Read More »

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »

ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಶಾಸಕ ಸತೀಶ ಜಾರಕಿಹೊಳಿಗೆ ಸನ್ಮಾನ

ಗೋಕಾಕ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹುಕ್ಕೇರಿ ತಾಲೂಕು ನೂತನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶಾಸಕರನ್ನು ಭೇಟಿ ಮಾಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಿಕ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಅಂಗಡಿ, ಪ್ರಧಾನ ಕಾರ್ಯದರ್ಶಿ ಆರ್. ಎನ್ ಸಿಂಗಾಡಿ, ಖಜಾಂಚಿ ರಾಜು ತಳವಾರ …

Read More »

ರಮೇಶ್ ಕಾಂಗ್ರೆಸ್ ಗೆ ಬಂದ್ರೆ ಹೇಗೆ ಮಾಜಿ ಆಗ್ತೇನಿ : ಸಚಿವ ರಮೇಶಗೆ ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ಬೆಳಗಾವಿ ಉಪಚುನಾವಣೆ ಬಿಜೆಪಿ V/S ಕಾಂಗ್ರೆಸ್

ಬೆಳಗಾವಿ : ಯಮಕನಮರಡಿ ಶಾಸಕರು 2023ರಲ್ಲಿ ಎಲ್ಲದರಲ್ಲೂ ಮಾಜಿ ಆಗುತ್ತಾರೇ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ತಿರುಗೇಟು ನೀಡಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮತ್ತೆ ಕಾಂಗ್ರೆಸ್ ಬರುತ್ತಾರೇ ಎನ್ನುವ ನೀವು. ಅವರ ಕಾಂಗ್ರೆಸ್ ಗೆ ಬಂದ್ರೆ ನಾನು ಹೇಗೆ ಮಾಜಿ ಆಗುತ್ತೇನೆ. ಹೇಳುವುದು ಸುಲಭ, ಆದ್ರೆ ಕಾರ್ಯ ರೂಪಕ್ಕೆ …

Read More »

ಖಾಸಗಿ ಶಾಲಾ ಶುಲ್ಕ ಭರಿಸಲು 3 ಹಂತದ ಸೂತ್ರ ಶಿಫಾರಸು:ಸುರೇಶ್ ಕುಮಾರ್

ಬಾಗಲಕೋಟೆ (ಜ.23): ಸದ್ಯಕ್ಕೆ 8, 9 ತರಗತಿ ಆರಂಭಿಸಬೇಕೆಂದು ಬೇಡಿಕೆ ಬಂದಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬೇಡಿಕೆ ಬಂದಿದ್ದು, 8,9 ಹಾಗೂ ಪ್ರಥಮ ಪಿಯುಸಿ ತರಗತಿ ಆರಂಭಿಸಲು ಬೇಡಿಕೆ ಬಂದಿದೆ. ಈ ಬಗ್ಗೆ ಚರ್ಚೆ ಮಾಡಿ, ಆರಂಭಿಸಿದ ಬಳಿಕ 1ರಿಂದ 5ನೇ ತರಗತಿ ಆರಂಭಿಸುವ ಯೋಚಿಸಲಾಗುವುದು. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚೆ ಮಾಡಿ, ಅದರೊಂದಿಗೆ ರೆಗ್ಯುಲರ್ ಕ್ಲಾಸ್ ಆರಂಭಿಸುವುದಕ್ಕೆ ನಿರ್ಧಾರ ಮಾಡಲಾಗುವುದು ಎಂದು ಜಮಖಂಡಿಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ …

Read More »

ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’

ಬೆಂಗಳೂರು,ಜ.23- ಜಾಮಿನಿನ ಮೇಲೆ ಹೊರಬಂದಿದ್ದ ನಟಿ ರಾಗಿಣಿ ದ್ವಿವೇದಿ, ಷರತ್ತು ಪೂರೈಸದ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಕಾಲ ಜೈಲಿನಲ್ಲೇ ಮುಂದುವರೆಬೇಕಿದೆ. ರಾಗಿಣಿಗೆ ಎರಡು ಲಕ್ಷ ರೂ. ಬಾಂಡ್‍ನೊಂದಿಗೆ ಜಾಮೀನು ನೀಡಲಾಗಿತ್ತು. ಆದರೆ ಇದನ್ನು ಸಕಾಲಕ್ಕೆ ಪೂರೈಸದ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಇರುವ ಕಾರಣ ಇನ್ನು ಎರಡು ದಿನ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರು ಮತ್ತು ಶ್ಯೂರಿಟಿ ಹಣ ಕಟ್ಟಲು ಸಾಧ್ಯವಿಲ್ಲ. ಅಂತರ್ಜಾಲದ ಮೂಲಕವೇ …

Read More »

ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣ: ಮೂವರು ವಶಕ್ಕೆ, ಬಾಂಬ್ ನಿಷ್ಕ್ರಿಯ ದಳ ಭೇಟಿ

ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್‌ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ. ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …

Read More »