Breaking News

ಜಿಲ್ಲೆ

ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು – ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಹಸನದ ನಂತರ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಶುರುವಾಗಿದೆ. ಪ್ರಮುಖ ಖಾತೆಗಳಿಗೆ ಪ್ರಭಾವಿ ಸಚಿವರಿಂದ ಲಾಬಿ ನಡೆಯುತ್ತಿದ್ದು, ಕೆಲವರ ಖಾತೆಯೂ ಅದಲು ಬದಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ನಾಳೆ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಖಾತೆ ಹಂಚಿಕೆ ಜೊತೆಗೆ ಸಣ್ಣ ಪ್ರಮಾಣದಲ್ಲಿ ಸಂಪುಟ ಪುನಾರಚನೆಯು ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕೆಲ ಸಚಿವರು ಪ್ರಮುಖ ಖಾತೆಗೆ ಪಟ್ಟು …

Read More »

ಸ್ಮಾಟ್‍ಫೋನ್ ಅಥವಾ ಕಂಪ್ಯೂಟರ್ ನೋಡುವುದರಿಂದ ಕಣ್ಣುಗಳನ್ನು ಕಳಕೋತಿರಾ ಹುಷಾರ್ !

ಮಾನವನ ಕಣ್ಣಿನ ಸ್ವಾಭಾವಿಕ ನೋಡುವ ವಿಧಾನವೆಂದರೆ, ಯಾವುದಾದರೂ ವಸ್ತುವಿನ ಮೇಲೆ ಬೆಳಕಿನ ಕಿರಣಗಳು ಬಿದ್ದಾಗ ಅವುಗಳನ್ನು ಆ ವಸ್ತುವು ಹೀರುವುದರಿಂದ ಹಾಗೂ ಅದರ ಪ್ರತಿಫಲನದಿಂದ ಉಂಟಾಗುವ ಕಿರಣಗಳು ನಮ್ಮ ಕಣ್ಣಿನ ಮೇಲೆ ಬೀಳುವುದರಿಂದ. ಈ ಪ್ರಕ್ರಿಯೆಯಲ್ಲಿ ನಮ್ಮ ಅಕ್ಷಿಪಟಲದ ಮೇಲೆ ಬೀಳುವ ಬೆಳಕಿನ ಶಕ್ತಿಯು ಅಲ್ಪ ಪ್ರಮಾಣದ್ದಾಗಿರುತ್ತದೆ. ಆದರೆ ವಿದ್ಯುನ್ಮಾನ ಪರದೆಗಳನ್ನು ವೀಕ್ಷಿಸುವಾಗ ಈ ಕಿರಣಗಳು ನೇರವಾಗಿ ಅಕ್ಷಿಪಟಲದ ಮೇಲೆ ಬೀಳುವುದರಿಂದ ಹೆಚ್ಚು ಪ್ರಮಾಣದ ಶಕ್ತಿಪಾತ ಕಣ್ಣಿನ ಮೇಲಾಗುತ್ತದೆ. ಫೋನಿನಲ್ಲಿ …

Read More »

ಬೆಂಗಳೂರಿನ ರಸ್ತೆಗುಂಡಿಗಳ ಚಿತ್ರವನ್ನು ವಾಟ್ಯಾಪ್ಪ್ ಮೂಲಕ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಿದರೆ ಚಿತ್ರಗಳು ಹೈಕೋರ್ಟ್ ತಲುಪಲಿವೆ.

ಬೆಂಗಳೂರು: ಬೆಂಗಳೂರಿನ ರಸ್ತೆಗುಂಡಿಗಳ ಚಿತ್ರವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಿದರೆ ಚಿತ್ರಗಳು ಹೈಕೋರ್ಟ್ ತಲುಪಲಿವೆ. ಸಾರ್ವಜನಿಕರಿಂದಲೇ ನಗರದ ರಸ್ತೆಗುಂಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಾಧಿಕಾರ ಮುಂದಾಗಿದೆ. ಬಿಬಿಎಂಪಿ ನಡೆಸಿರುವ ರಸ್ತೆಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಸಾಲ್ವ್ ನಿಂಜಾ ಎಂಬ ಸ್ವಯಂ ಸೇವಕ ಸಂಸ್ಥೆಯ ಸಹಕಾರದೊಂದಿಗೆ ರಸ್ತೆಗುಂಡಿಗಳ ಬಗ್ಗೆ ಸಾರ್ವಜನಿಕರಿಂದಲೇ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಒದಗಿಸಲಾಗುತ್ತದೆ. ಅದಕ್ಕಾಗಿ ವಾಟ್ಸಾಪ್‌ ಸಂಖ್ಯೆಯನ್ನು …

Read More »

ಆಸ್ತಿ ವಿವಾದ : ಬೆಳಗಾವಿಯಲ್ಲಿ 4 ವರ್ಷದ ಬಾಲಕನ ಕೊಲೆಗೈದ ಪಾಪಿ

    ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ. ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ‌ ನಡೆಸಿದ್ದಾರೆ.

Read More »

ಪೊಲೀಸರು ತಡೆದರೆ ರಸ್ತೆ ಬಂದ್ ಮಾಡಿ: ಕಾಂಗ್ರೆಸ್ ಕಾರ್ಯಕರ್ತರು, ರೈತರಿಗೆ ಡಿಕೆಶಿ ಕರೆ

ಬೆಂಗಳೂರು: ‘ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ …

Read More »

ಸಚಿವರಾಗಿ 20 ತಿಂಗಳು ಪೂರೈಸಿದವರನ್ನು ಕೈ ಬಿಡಿ. 32 ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಿ

ಬೆಂಗಳೂರು: ಹೊಸ ಸಚಿವರಿಗೆ ಖಾತೆ ಹಂಚಿಕೆ ಕಸರತ್ತಿನ ಹೊತ್ತಲ್ಲೇ ಇಡೀ ಸಂಪುಟವನ್ನೇ ವಿಸರ್ಜಿಸಿ, ಹೊಸದಾಗಿ ಸಂಪುಟ ರಚಿಸಿ ಅನ್ನೋ ಕೂಗು ಎದ್ದಿದೆ. ಸಂಪುಟ ಪುನಾರಚನೆ ಮಾಡುವುದು ಒಳ್ಳೆಯದು. ಹಳಬರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಆಗ ಮುಂದೆ 150 ಸೀಟು ಬರೋಕೆ ಸಾಧ್ಯ. ಉತ್ತಮ ಆಡಳಿತ ಕೊಡೋಕೆ ಸಾಧ್ಯ ಅಂತ ಶಾಸಕ ತಿಪ್ಪಾರೆಡ್ಡಿ ಆಗ್ರಹಿಸಿದ್ದಾರೆ.ಸಚಿವರಾಗಿ 20 ತಿಂಗಳು ಪೂರೈಸಿದವರನ್ನು ಕೈ ಬಿಡಿ. 32 ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಿ ಅಂತ …

Read More »

ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ.

ಬೆಂಗಳೂರು: ಆಬಾಲ ವೃದ್ಧರಾದಿಯಾಗಿ ಎಲ್ಲರನ್ನೂ ಹಿಂಡಿ ಹಿಪ್ಪೆ ಮಾಡಿರೋ ‘ಚೀನಿ ವೈರಸ್’ ಕೊರೊನಾಗೆ ಇಷ್ಟು ದಿನ ವ್ಯಾಕ್ಸಿನ್ ಬಂದ್ರೆ ಸಾಕಪ್ಪಾ ಅಂತ ಜನ ಕಾಯುತ್ತಿದ್ದರು. ಆದ್ರೆ ಕೊವಿಶೀಲ್ಡ್ ವ್ಯಾಕ್ಸಿನ್ ವಿತರಣೆಯ ಮಹಾಯಜ್ಞಕ್ಕೆ ಚಾಲನೆ ಸಿಕ್ಕು ನಾಲ್ಕನೇ ದಿನ ಆದರೂ ಟಾರ್ಗೆಟ್ ರೀಚ್ ಆಗೋಕೆ ಒದ್ದಾಡುವಂತಾಗಿದೆ. ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ. ರಾಜ್ಯವೂ ಸೇರಿದಂತೆ ದೇಶಾದ್ಯಂತ ಮೊದಲ ಹಂತದ ಕೊರೋನಾ ವಾರಿಯರ್ಸ್ ವ್ಯಾಕ್ಸಿನೇಷನ್‍ಗೆ ನಿರೀಕ್ಷಿತ …

Read More »

ಗಡಿ ಉಸ್ತುವಾರಿ ಸಚಿವರನ್ನು ನೇಮಿಸುವಂತೆ ಕನ್ನಡಪರ ಹೋರಾಟಗಾರರ ಒತ್ತಾಯ

ಬೆಳಗಾವಿ,ಜ.19- ರಾಜ್ಯ ಸರಕಾರಕ್ಕೆ ನಾಚಿಕೆ, ಮಾನ ಮರ್ಯಾದೆ ಇದ್ದರೆ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಿ. ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ನಲ್ಲಿರುವ ಗಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಗಡಿ ಸಂರಕ್ಷಣಾ ಆಯೋಗ ಬೆಳ ಗಾವಿಯ ಸುವರ್ಣ ಸೌಧಕ್ಕೆ ಕೊಡ ಬೇಕು ಎಂದು ಹಿರಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಭಾಗದ ಬಗ್ಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೆ …

Read More »

GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

ಶಿವಮೊಗ್ಗ: ಜಿಎಸ್ ಟಿ ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಭದ್ರಾವತಿಯ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಮಂಗಳವಾರ ನಡೆದಿದೆ. ವೇಣು (36) ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್. ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್ಟಿ ನೋಂದಣಿ ಮಾಡಲು ವೇಣು ಲಂಚ ಕೇಳಿದ್ದು, ಇಂದು 2500 ರೂ. ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. …

Read More »

ದೆಹಲಿಯತ್ತ ಹೊರಟ ಅಸಮಾಧಾನಿತ B.J.P.ಶಾಸಕರು,

ಬೆಂಗಳೂರು,ಜ.19- ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲ ಬಿಕ್ಕಟ್ಟು ನಿವಾರಣೆಯಾಗಿದೆ ಎನ್ನುವಷ್ಟರಲ್ಲೇ ಸಂಪುಟದಲ್ಲಿ ಸ್ಥಾನಮಾನ ಸಿಗದ ಅಸಮಾಧಾನಿತ ಶಾಸಕರು ದೆಹಲಿ ತೆರಳಿರುವುದು ಕಮಲ ಪಾಳೆಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಪ್ತ ಹಾಗೂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತು ಶಾಸಕ ಅರವಿಂದ್ ಬೆಲ್ಲದ್ ದಿಢೀರನೆ ರಾಷ್ಟ್ರೀಯ ನಾಯಕರ ಭೇಟಿಗೆ ತೆರಳಿರುವುದು ಕಮಲ ಪಾಳೆಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾಬೀತು ಮಾಡಿದೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಇಂದು ಮುಂಜಾನೆ ದಿಢೀರನೆ …

Read More »