Breaking News

ಜಿಲ್ಲೆ

ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,

ಬೆಂಗಳೂರು,-ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, 2ನೇ ದಿನವಾದ ಇಂದು ಶಾಸಕರ ಕುಂದುಕೊರತೆಗಳನ್ನು ಆಲಿಸುವ ಮೂಲಕ ಸಮಾಲೋಚನಾ ಸಭೆ ನಡೆಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮೈಸೂರು , ಚಾಮರಾಜನಗರ ಜಿಲ್ಲೆಗಳು ಸೇರಿದಂತೆ 20ಕ್ಕೂ ಹೆಚ್ಚು ಶಾಸಕರ ಜೊತೆ ಸಿಎಂ ಸಭೆ ನಡೆಸಿದರು. ಈ ವೇಳೆ ಕೆಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿನ ಅನುದಾನದ ಕೊರತೆ, ಅಭಿವೃದ್ದಿ ಹಿನ್ನಡೆ, ಕುಡಿಯುವ ನೀರು, …

Read More »

ಬಿಎಸ್‍ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್‍ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‍ಐಆರ್‍ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್‍ವೈ …

Read More »

ಸಚಿವ ಭೈರತಿ ಬಸವರಾಜ ಬೆಳಗಾವಿಗೆ

ಬೆಂಗಳೂರು – ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಮಹಾನಗರಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬುಧವಾರ, ಗುರುವಾರ ಮತ್ತು ಶುಕ್ರವಾರ ಅವರು ತುಮಕೂರು, ಹುಬ್ಬಳ್ಳಿ -ಧಾರವಾಡ ಹಾಗೂ ಬೆಳಗಾವಿ ಮಹಾನಗರದ ಸ್ಮಾರ್ಟ್ ಸಿಟಿ ಕಾಮಗಾರಿ, ಮಹಾನಗರ ಪಾಲಿಕೆ ಅಭಿವೃದ್ಧಿ ಯೋಜನೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಪರಿಶೀಲನೆ ನಡೆಸುವರು. ಬುಧವಾರ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ತುಮಕೂರು ನಗರದ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಮಗರಾಭಿವೃದ್ಧಿ …

Read More »

ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢ

ಬೆಳಗಾವಿ: ಶಾಲೆ-ಕಾಲೇಜು ಪುನರಾರಂಭದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ಗ್ರಾಮೀಣ ಭಾಗದ 9, ಬೆಳಗಾವಿ ನಗರ ವಲಯದ 4 , ಕಿತ್ತೂರು 1, ರಾಮದುರ್ಗದಲ್ಲಿ 3 ಶಿಕ್ಷಕರಿಗೆ  ಸೇರಿದಂತೆ ಒಟ್ಟು 18 ಶಿಕ್ಷಕರಿಗೆ ಕೋವೀಡ್ ಸೊಂಕು  ದೃಢವಾಗಿದೆ. ಹುಕ್ಕೇರಿಯ 2 , ರಾಯಬಾಗದ 2 ಶಿಕ್ಷಕರಿಗೆ ಸೊಂಕು ತಗುಲಿದ್ದು ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು …

Read More »

ಯತ್ನಾಳ ಒಂಟಿ ಸಲಗದಂತೆ; ಬಸನಗೌಡ ಪಾಟೀಲ ಪರ ಕೂಡಲ ಸಂಗಮ ಸ್ವಾಮೀಜಿ ಬ್ಯಾಟಿಂಗ್

ವಿಜಯಪುರ (ಜ. 05): ಬಸನಗೌಡ ಪಾಟೀಲ ಯತ್ನಾಳ ಎಂದೂ ಸ್ವಾರ್ಥದ ಬಗ್ಗೆ ಮಾತನಾಡಿದವರಲ್ಲ.  ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಎಷ್ಟೋ ಸಂದರ್ಭದಲ್ಲಿ ದೆಹಲಿ ನಾಯಕರ ಬಗ್ಗೆಯೂ ನೇರವಾಗಿ ಮಾತನಾಡಿರುವ ಉದಾಹರಣೆಗಳಿವೆ. ಹಿಂದೆ ವಾಜಪೇಯಿ ಪ್ರಧಾನಿಯಾಗಿದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಧ್ವನಿ ಎತ್ತಿದ್ದರು.  ಉತ್ತರ ಕರ್ನಾಟಕದ ಜನರೆಂದರೆ ಲಿಂಗಾಯಿತ ಶಾಸಕರಿಗೆ ರಾಜ್ಯ ಮಟ್ಟದ ಯಾರೂ ಗಾಡ್ ಫಾದರ್ ಗಳಿಲ್ಲ. ಹೀಗಾಗಿ ಒಬ್ಬೊಬ್ಬ ನಾಯಕರನ್ನು ಬೆನ್ನು ಹತ್ತಿಕೊಂಡು ಹೋಗಿದ್ದಾರೆ.  ಆದರೆ, ಯತ್ನಾಳ ಗೌಡರು …

Read More »

ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

  ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ …

Read More »

ಮಾಜಿ ಶಾಸಕ ಬಸವಂತರೆಡ್ಡಿ ನಿಧನ: ಸಂತಾಪ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ

  ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ …

Read More »

ನಾಲ್ವರು ಸಾಧಕರಿಗೆ ಗಳಗನಾಥ ಸಾಹಿತ್ಯ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ

  ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. …

Read More »

ಬೆಳಗಾವಿ ಜಿಲ್ಲೆಯ 12 ಶಿಕ್ಷಕರಿಗೆ ಕೋವಿಡ್ ದೃಢ: ಪಾಲಕರು, ಪೋಷಕರಲ್ಲಿ ಶುರುವಾಯ್ತು ಆತಂಕ

  ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತೆ ಕ್ರಮಗಳ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು, ಪೆÇೀಷಕರಲ್ಲಿ ಆತಂಕ ಶುರುವಾಗಿದೆ. ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಸೇರಿ ಉನ್ನತ ಹಂತದ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ …

Read More »

3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ

ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್​ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್‌ಲೈನ್​​​​​ ಅನ್ನು ಗೇಲ್ …

Read More »