Breaking News

ಜಿಲ್ಲೆ

ಖ್ಯಾತ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ.

ತಮ್ಮ ಮಧುರವಾದ ಧ್ವನಿಯಿಂದ ಸಾಕಷ್ಟು ಜನಪ್ರಿಯತೆ ಪಡೆದಿರುವ ‘ಸೋಜುಗಾದ ಸೂಜು ಮಲ್ಲಿಗೆ’ ಖ್ಯಾತಿಯ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ‘ಸೇನಾಪುರ’ ಎಂಬ ಟೈಟಲ್ ಇಟ್ಟಿದ್ದು, ಈ ಚಿತ್ರದಲ್ಲಿ ಅನನ್ಯಾ ಭಟ್ ಸೇರಿದಂತೆ ಗಿರಿರಾಜ್, ದಿನೇಶ್ ಮಂಗಳೂರು, ಪವನ್ ಕುಮಾರ್, ಶೇಖರ್, ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಗುರು ಸವನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಅಮಿತ್ ಕುಮಾರ್ ಹಾಗೂ ರಾಹುಲ್ …

Read More »

4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ): 2.25 ಕೋಟಿ ರೂ. ಮೊತ್ತದ 4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣಗಳಿಂದ ಕರ್ನಾಟಕಕ್ಕೆ ಬಂದು ಸರಣಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸಿಸಿಬಿ ಪೊಲೀಸರು 4 ಕೆ.ಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಫಯೂಮ್ ಹಾಗೂ ಮುರಸಲೀಂ ಮೊಹಮದ್ ಬಂಧಿತ ಆರೋಪಿಗಳಾಗಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದ್ದು, ನಾನೇ ಕಟ್ಟಿ ಬೆಳೆಸಿದ ಕ್ಷೇತ್ರ,ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ :ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದ್ದು, ನಾನೇ ಕಟ್ಟಿ ಬೆಳೆಸಿದ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆಗಿನ ಮುಖನೇ ಬೇರೆ ಈಗೀನ ಮುಖನೇ ಬೇರೆ. ನಾನು ಮುಂದಿನ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಟಾಂಗ್​ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆಕೆಯ ಗಾಡ್ ಫಾದರ್ ಇಬ್ಬರೂ ಪ್ರಚಾರ ಪ್ರೀಯರು. ನಾವು ಪ್ರಚಾರ …

Read More »

ಉತ್ತಮ ನಟ, ನಟಿ ಯಾರು? ಶಿವಣ್ಣ, ರಕ್ಷಿತ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ

ನವದೆಹಲಿ: ಹೊಸ ವರ್ಷದ ಸಂಭ್ರಮದ ನಡುವೆ 2020ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ದಕ್ಷಿಣ (ಸೌತ್) ಪ್ರಶಸ್ತಿ ಶನಿವಾರ(ಜನವರಿ 02) ಘೋಷಣೆಯಾಗಿದ್ದು, ಕನ್ನಡ ಚಿತ್ರರಂಗದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣಗೆ ಈ ಪ್ರಶಸ್ತಿ ಲಭಿಸಿದೆ. ತಮಿಳು, ಮಲಯಾಳಂ, ತೆಲುಗು ಹಾಗೂ ಕನ್ನಡ ಸೇರಿದಂತೆ ನಾಲ್ಕು ಚಿತ್ರರಂಗದಲ್ಲಿನ ಪ್ರತಿಭಾವಂತ ನಟರನ್ನು ಗುರುತಿಸಿ ಈ ಫೌಂಡೇಶನ್ ಪ್ರಶಸ್ತಿಗೆ ಆಯ್ಕೆ ಮಾಡುತ್ತಿದೆ ಎಂದು ವರದಿ ತಿಳಿಸಿದೆ. ಈ ಬಾರಿ …

Read More »

ಅರುಣ್ ಸಿಂಗ್ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ತ್ವರಿತವಾಗಿ ಅನುಮತಿ ನೀಡುವಂತೆ ಮನವಿ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ತ್ವರಿತವಾಗಿ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆಯುವ ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ಸಭೆ ಮತ್ತು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಅರುಣ್ ಸಿಂಗ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಮಾಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮತ್ತು …

Read More »

ರೈತರ ಆದಾಯ ದ್ವಿಗುಣಕ್ಕೆ ಮೋದಿ ಸರ್ಕಾರದಿಂದ ಸಹಕಾರ : B.S.Y.

ಬೆಂಗಳೂರು, ಜ.2- ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಿಳಿಸಿದರು. ಇಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಸಿಎಫ್‍ಟಿಆರ್‍ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ,  ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ …

Read More »

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2,443 ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ

ಹಾವೇರಿ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2,443 ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 40 ವರ್ಷದೊಳಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅನುಸೂಚಿತ ಜಾತಿ, ಬುಡಕಟ್ಟು, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಹಿಂದುಳಿದ ವರ್ಗಗಳು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಛೇರಿಯಲ್ಲಿ ಅಥವಾ ಆಯ್ದ …

Read More »

ರಾಜ್ಯ ಹೈಕೋರ್ಟ್ʼನಿಂದ ಮಹತ್ವದ ಆದೇಶ: ʼಥರ್ಡ್ ಪಾರ್ಟಿ ವಿಮೆʼಯಿಂದ ಅಪಘಾತಕ್ಕೀಡಾದವ್ರಿಗೆ ʼಪರಿಹಾರ ಸಿಗಲ್ಲʼ

ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಥರ್ಡ್ ಪಾರ್ಟಿ ವಿಮೆಯಿಂದ ಅಪಘಾತಕ್ಕೀಡಾದವರಿಗೆ ಪರಿಹಾರ ನೀಡಲಾಗುವುದು. ಆದ್ರೆ, ಅಪಘಾತ ಮಾಡಿದ ವಾಹನದ ಹಿಂಬದಿ ಸವಾರ ಮತ್ತು ಸಹ ಪ್ರಯಾಣಿಕರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರ ಸಿಗುವುದಿಲ್ಲ. ಆದ್ರೆ, ಪ್ರತ್ಯೇಕ ವಿಮೆ ಮೊತ್ತ ಭರಿಸಿದ್ರೆ ಮಾತ್ರ ಹಿಂಬದಿ ಸವಾರ, ಸಹ ಪ್ರಯಾಣಿಕರಿಗೂ ಪರಿಹಾರ ಅನ್ವಯವಾಗುತ್ತೆ. ಇಲ್ಲವಾದರೆ ವಿಮೆ‌ ಕಂಪನಿ ಪರಿಹಾರ ನೀಡಬೇಕಿಲ್ಲ ಎಂದು ಹೈಕೋರ್ಟ್​ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕಾನೂನಿನಡಿ …

Read More »

ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ಟೆಂಟೆಟಿವ್ ವೇಳಾಪಟ್ಟಿ

ಬೆಂಗಳೂರು – ರಾಜ್ಯದಲ್ಲಿ 2020-2021ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ರಾಜ್ಯಸರಕಾರ ಸಿದ್ಧತೆ ಮಾಡುತ್ತಿದೆ. ಮಂಗಳವಾರ ಅಥವಾ ಬುಧವಾರ ಈ ಎರಡೂ ಪರಿಕ್ಷೆಗಳ ಟೆಂಟೆಟಿವ್ ವೇಳಾಪಟ್ಟಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಮಾಹಿತಿ ನೀಡಿದ್ದಾರೆ.           ಮಕ್ಕಳಿಗೆ ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈಗ ಪ್ರಕಟಿಸಲಾಗುವ ವೇಳಾಪಟ್ಟಿಯೇ ಅಂತಿಮವೂ ಆಗಬಹುದು ಅಥವಾ ಅಲ್ಪಸ್ವಲ್ಪ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ

ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …

Read More »