Breaking News

ಜಿಲ್ಲೆ

ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್- 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಚಾಲನೆ

ಬೆಂಗಳೂರು: ಗಡಿ ಭದ್ರತಾ ಪಡೆ ವತಿಯಿಂದ ಆಯೋಜಿಸಿದ್ದ ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್- 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿ.ಎಸ್.ಎಫ್ ನ ಐ.ಜಿ.ಎಸ್.ಕೆ.ತ್ಯಾಗಿ , ಬಿ.ಎಸ್.ಸಾಧು ಮತ್ತಿತರರು ಉಪಸ್ಥಿತರಿದ್ದರು – ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ಯಾರಾ ಸೈಕ್ಲಿಂಗ್ ಮೂಲಕ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ …

Read More »

ಈ ಬಾರಿ ಹೊಸ ವರ್ಷಾಚರಣೆಗೆ ಸಂಪೂರ್ಣ ನಿರ್ಬಂಧ: ಬಸವರಾಜ್ ಬೊಮ್ಮಾಯಿ

ಬೆಂಗಳೂರು,ಡಿ.27- ರಾಜ್ಯದಲ್ಲಿ ಬ್ರಿಟನ್ ಮಾದರಿಯ ರೂಪಾಂತರಗೊಂಡ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಈ ಬಾರಿ ಹೊಸ ವರ್ಷಾಚರಣೆಗೆ ಸಂಪೂರ್ಣ ನಿರ್ಬಂಧ ಹಾಕಿದೆ. ಕೋವಿಡ್ ರೂಪಾಂತರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ವರ್ಷಾಚರಣೆ ಸಂಬಂಧ ಸರ್ಕಾರದ ವತಿಯಿಂದ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದೇವೆ. ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಕ್ಕೆ ಸಹಕಾರ ನೀಡಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದರು. ವಿಧಾನಸೌಧದ ಪೂರ್ವ ದ್ವಾರದ …

Read More »

ಐದು ಕಾರುಗಳ ನಡುವೆ ಸರಣಿ ಅಪಘಾತ,. ಎರಡು ಕಾರು ಪಲ್ಟಿ

ಬೆಂಗಳೂರು: ಏರ್​ಪೋರ್ಟ್ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್ ಬಳಿ ಐದು ಕಾರುಗಳ ನಡುವೆ ಸರಣಿ ಅಪಘಾತವಾಗಿದೆ. ಎರಡು ಕಾರು ಪಲ್ಟಿಯಾಗಿದ್ದು. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರರ ಜಾಲಿ ರೈಡ್ ನಿಂದಾಗಿ ಈ ಸರಣಿ ಅಪಘಾತ ಸಂಭವಿಸಿದೆ. ನಂದಿಬೆಟ್ಟಕ್ಕೆ ಜಾಲಿ ರೈಡ್ ಹೋಗುತ್ತಿದ್ದ ಬೈಕ್ ಸವಾರರ ಟೀಂ ವೇಗವಾಗಿ ಬಂದು ಕಾರ್ ಓವರ್ ಟೆಕ್ ಮಾಡಿದ್ದಾರೆ. ಗಾಬರಿಯಾದ ಕಾರ್ ಚಾಲಕ ಎದುರು ರಸ್ತೆಗೆ ನುಗ್ಗಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. …

Read More »

ವಿಷ್ಣುವರ್ಧನ್ ಪ್ರತಿಮೆ ಧ್ವಂಸಕರಿಗೆ ಸುದೀಪ್ ಎಚ್ಚರಿಕೆ

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ ಪ್ರತಿಮೆ ಧ್ವಂಸಕರಿಗೆ ಅಭಿನಯ ಚಕ್ರವರ್ತಿ ರನ್ನ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದು, ನಿಮ್ಮ ಹೆಸರು ತಿಳಿಯುವ ಮೊದಲು ದೇಶ ಬಿಟ್ಟು ಹೋಗಿ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿರುವ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ವಿಷ್ಣು ಸರ್ ಪ್ರತಿಮೆ ಧ್ವಂಸಗೊಳಿಸಿರುವ ವಿಷಯ ನನಗೆ ತಡವಾಗಿ ತಿಳಿಯಿತು. ವಿಷ್ಣು ಸರ್ ಅಭಿಮಾನಿಯಾಗಿ ಮೂರ್ತಿಯನ್ನ ಒಡೆದು ಹಾಕಿರೋರಿಗೆ ಕೆಲ ವಿಷಯಗಳನ್ನ ಹೇಳಲು ಇಷ್ಟಪಡುತ್ತೇನೆ. …

Read More »

ಹೊಸ ವರ್ಷಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ 30 ಮತ್ತು 31 ರಂದು ಟಫ್ ರೂಲ್ಸ್ ಇರಲಿದೆ

ಬೆಂಗಳೂರು: ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಮಾರ್ಗಸೂಚಿ ಬರುವುದು ಫಿಕ್ಸ್ ಆಗಿದೆ. ಡಿಸೆಂಬರ್ 30 ಮತ್ತು 31ಕ್ಕೆ ಕಟ್ಟು ನಿಟ್ಟಿನ ಕ್ರಮ ಇರುತ್ತೆ ಅಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಬ್ರಿಟನ್‍ನಿಂದ ಬೆಂಗಳೂರಿಗೆ ಬಂದವರ ಪೈಕಿ 150 ಜನ ನಾಪತ್ತೆಯಾಗಿರೋದು ಒಂದುಕಡೆ ಆತಂಕ ಹೆಚ್ಚಿಸಿದೆ. ಇದರ ಮಧ್ಯೆಯೇ ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗ್ತಿದೆ. ಈಗ ಬ್ರಿಟನ್ ಕೊರೊನಾ ಹರಡುವುದನ್ನು ನಿಯಂತ್ರಣ ಮಾಡುವ ಸಲುವಾಗಿ ಬೆಂಗಳೂರಿನಲ್ಲಿ 2 …

Read More »

ಬಸ್- ಕ್ರೂಸರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು !

ಮೊಳಕಾಲ್ಮುರು: ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮುರು ತಾಲ್ಲೂಕಿನ ಬಿಜಿ ಕೆರೆ ಬಳಿ ಭಾನುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿಮ್ಮಣ್ಣ(40) ಪತ್ನಿ ರತ್ನಮ್ಮ(38) ಸೋಮನಮರಡಿ ಗ್ರಾಮದ ದುರುಗಪ್ಪ(16), ಗಜಲಿ ಗ್ರಾಮದ ಮಹೇಶ (19) ಹಾಗು 55 ವರ್ಷದ ಓರ್ವ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆ ದೆವದುರ್ಗ ತಾಲೂಕಿನ ಹುಣಸೂರು ಗ್ರಾಮದವರಾಗಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಸ್ …

Read More »

ಗ್ರಾಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಂಬೋಜಿ ನಿಧನ

ಖಾನಾಪುರ : ತಾಲ್ಲೂಕಿನ ನ್ಯಾಯವಾದಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ.ಅಂಬೋಜಿ (64) ಭಾನುವಾರ ಬೆಳಿಗಿನ ಜಾವ ನಿಧನರಾದರು. ಬಿಷ್ಟಾದೇವಿ ಜೀರ್ಣೊದ್ದಾರ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಕಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಕ್ಕೇರಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ನಡೆದ ಗ್ರಾಪಂ ಚುಣಾವಣೆಗೆ ಕಕ್ಕೇರಿ ಗ್ರಾಮದ ವಾರ್ಡ್ ನಂ.2ಕ್ಕೆ ಸ್ಪರ್ಧೆ ಮಾಡಿದ್ದರು.

Read More »

ಮೂರು ಸಾವಿರ ಮಠದ ಆಸ್ತಿ ವಾಪಸ್ ನೀಡಿ: ಕೆಎಲ್ಇ ಸಂಸ್ಥೆಗೆ ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ

ಹುಬ್ಬಳ್ಳಿ : ಹುಬ್ಬಳ್ಳಿಯ ಮೂರು ಸಾವಿರ ಮಠದ ಆಸ್ತಿಯನ್ನು ಕೆ ಎಲ್ ಇ ಸಂಸ್ಥೆಯವರು ವಾಪಸ್ ಮಠಕ್ಕೆ ನೀಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಸಾವಿರ ಮಠದ ಆಸ್ತಿಯಲ್ಲಿ ನಗರದ ಗಬ್ಬೂರು ಬಳಿ ಕೆಎಲ್ ಇ ಸಂಸ್ಥೆ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಕೆಎಲ್‌ಇ ಸಂಸ್ಥೆಯವರಿಗೆ ಮಠದಿಂದ 24 ಎಕರೆ 30 ಗುಂಟೆ ಜಾಗ ಕೊಟ್ಟಿದ್ದು ತಪ್ಪು. ಮಠದ ಆಡಳಿತ ಮಂಡಳಿ ನೇತೃತ್ವದಲ್ಲೇ …

Read More »

ಗೋಕಾಕ: ಜ.6 ರಂದು ತೆರಿಗೆ ಸಂದಾಯ ಮಾಡದ 21 ವಾಹನಗಳ ಹರಾಜು!!

ಗೋಕಾಕ: ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯ ಪ್ರಕಾರ ತೆರಿಗೆ ಸಂದಾಯ ಮಾಡದಿರುವ ಕಾರಣ ಮುಟ್ಟುಗೋಲು ಹಾಕಿಕೊಂಡಿರುವ 21 ವಾಹನಗಳನ್ನು ಜ. 6 ರಂದು ಮುಂಜಾನೆ 10.30 ಘಂಟೆಗೆ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಬಹಿರಂಗು ಹರಾಜು ಮಾಡಲಾಗುವುದು ಸಾರಿಗೆ ಅಧಿಕಾರಿ ಟಿ.ಜೆ.ಹೇಮಾವತಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಬಾಕಿ ಇರುವ ತೆರಿಗೆ ಸಂದಾಯ ಮಾಡಿ ವಾಹನವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳುಲು …

Read More »

ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ

ರಾಮದುರ್ಗ: ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್​ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್‌ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್​ ಭೇಟಿ ನೀಡಿ ಪರಿಶೀಲನೆ …

Read More »