Breaking News

ಜಿಲ್ಲೆ

ಅಸಲಿ-ನಕಲಿ ದೇಶಭಕ್ತರು ಯಾರು ಎಂಬುದ್ದನ್ನು ಜನರು ತೀರ್ಮಾನ ಮಾಡುತ್ತಾರೆ: ಸತೀಶ್ ಜಾರಕಿಹೊಳಿ

ಗೋಕಾಕ: ಇತಿಹಾಸದಲ್ಲಿ ಬಹಳಷ್ಟು ಘಟನೆಗಳು ನಡೆದಿವೆ. ಬಿಜೆಪಿ ಪಕ್ಷವು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿ ಸುತ್ತಿದೆ. ದೇಶದಲ್ಲಿರುವ ಪ್ರತಿಯೊಂದು ಸಮುದಾಯವು ಸಮಾನತೆ ಹಾಗೂ ಪ್ರೀತಿಯಿಂದ ಬಾಳುತ್ತಿದೆ. ಆದರೆ ಬಿಜೆಪಿಯು ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ದೇಶದಲ್ಲಿನ ಶಾಂತಿ ಕದಡಲು ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಗೋಕಾಕನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ : ಡಿ.ಕೆ.ಶಿ

ಬೆಂಗಳೂರು, – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕಫ್ರ್ಯೂ ಜಾರಿಗೆ ತರುವಾಗ ಯಾವ ಮಂತ್ರಿಯ ಮಾತನ್ನು ಕೇಳಿಲ್ಲ. ಒಬ್ಬ ಸಚಿವ ಹೇಳಿದ ಎಂಬ ಕಾರಣಕ್ಕೆ ಯಡಿಯೂರಪ್ಪ ಸಹಿ ಮಾಡಿದ್ದರು. ಕೊನೆಗೆ ಅವರದೇ ಸರ್ಕಾರದ ಸಚಿವರು, ಪಕ್ಷದವರು ಟೀಕಿಸಿದರೆ ಎಂಬ ಕಾರಣಕ್ಕೆ …

Read More »

ಪ್ರಧಾನಿ ಸಂವಾದದ ವೇಳೆ ನಿದ್ರೆಗೆ ಜಾರಿದ ಸಿಎಂ, B.S.Y.ಸದಾನಂದ ಗೌಡ,& ಕಾರಜೊಳ

ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನಿದ್ರೆಗೆ ಜಾರಿದ್ದರು. ಈ ಕುರಿತ ವೀಡಿಯೋ ಈಗ ವೈರಲ್ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 6 ರಾಜ್ಯಗಳ ರೈತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬೆಂಗಳೂರಿನಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ಈ ಮೂವರೂ ಸಾಲಿನಲ್ಲಿ ಕುಳಿತು ನಿದ್ದೆಗೆ ಜಾರಿದ್ದರು.

Read More »

ಸಿಎಂ ಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ

ವಿಜಯಪುರ(ಡಿಸೆಂಬರ್​. 25): ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ, ಬದಲಾವಣೆಯಾಗುತ್ತೋ ಗೊತ್ತಿಲ್ಲ. ಮತ್ತೇನಾದರೂ ಆಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸದಾಗಿ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ಬಗ್ಗೆ ನೀವು ಮಾಧ್ಯಮದವರೇ ಅದನ್ನು ಎಬ್ಬಿಸಿದ್ದೀರಿ. ನೀವು ಯಾವಾಗ ಯಾರ ಪರವಾಗಿ ಸುದ್ದಿ ಬಿತ್ತರಿಸುತ್ತಿರೋ ಗೊತ್ತಿಲ್ಲ. ಎಲ್ಲವೂ …

Read More »

ಬೆಳಗಾವಿಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ, ಕಿಸಾನ್ ಸಮ್ಮಾನ ಕಾರ್ಯಕ್ರಮ

  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ, ನಗರ, ಗ್ರಾಮೀಣ ಮಂಡಳ ಘಟಕಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ ಮಾತನಾಡಿ, …

Read More »

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ

ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16ರಂದು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ ಸಂಪುಟ ವಿಸ್ತರಣೆಯಾಗುತ್ತೋ, ಇನ್ನೇನು ಆಗುತ್ತೋ ಎಂಬುದು ಗೊತ್ತಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಯತ್ನಾಳ್ ಪಕ್ಷದ ಅಧ್ಯಕ್ಷರಲ್ಲ, ಅವರೊಬ್ಬ ಆರ್ಡಿನರಿ ಶಾಸಕ. ಬೀದಿಯಲ್ಲಿ ನಿಂತು ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಪಕ್ಷದ ಚೌಕಟ್ಟಿನಲ್ಲಿ …

Read More »

ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು

ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …

Read More »

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ

ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.   ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

Read More »

ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !

ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …

Read More »

29ರಂದು ಬಿಎಸ್‍ವೈ-ಷಾ ಭೇಟಿ, ಸಂಕ್ರಾಂತಿಗೆ ಸಂಪುಟಕ್ಕೆ ಸರ್ಜರಿ ಫಿಕ್ಸ್..?

ಬೆಂಗಳೂರು,ಡಿ.25- ಕಳೆದ ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುನ್ನೆಲೆಗೆ ಬಂದಿದ್ದು, ಸಂಕ್ರಾಂತಿ ಹಬ್ಬದ ನಂತರ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಕರ್ನಾಟಕದ ಬೆಳವಣಿಗೆಗಳ ಕುರಿತಂತೆ ವಿಜಯೇಂದ್ರ ಮಾತುಕತೆ …

Read More »