Breaking News

ಜಿಲ್ಲೆ

ಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ

ಬೆಳಗಾವಿ – ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. *ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ …

Read More »

ಗ್ರಾಮ ಪಂಚಾಯಿತಿ ಚುನಾವಣೆ ಊರಿನತ್ತ ಹೊರಟ ಮತದಾರರು

ಬೆಂಗಳೂರು (ಡಿ. 22): ಕರ್ನಾಟಕದಲ್ಲಿ ಇಂದಿನಿಂದ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ರಾಜ್ಯದ 30 ಜಿಲ್ಲೆಗಳಲ್ಲಿಯೂ ಆಯ್ದ ತಾಲೂಕುಗಳಲ್ಲಿ ಇಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಬಸ್​ಗಳಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಮಧ್ಯಾಹ್ನದ ವೇಳೆಗೆ ಊರುಗಳಿಗೆ ತೆರಳಿ …

Read More »

₹1 ಕೋಟಿ ಲಂಚ ಕೇಳಿದ್ರಾ ಅಬಕಾರಿ ಸಚಿವ ಹೆಚ್​​. ನಾಗೇಶ್? ಪ್ರಧಾನಿ ಮೋದಿಗೆ ದೂರು

ಕೋಲಾರ: ಕೋಲಾರದ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ಧ ಪ್ರಧಾನ ಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪದ ದೂರು ದಾಖಲಾಗಿದೆ. ಅಬಕಾರಿ ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರೂಪಾಯಿ ಲಂಚಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಸಚಿವ ಹೆಚ್​​​.ನಾಗೇಶ್ ಅವರ ವಿರುದ್ದ ಸಲ್ಲಿಕೆಯಾಗಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಅಧಿಕಾರಿಯ ಪುತ್ರಿಯೊಬ್ಬರು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿರುವ ಈ ದೂರು ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಸಹ ಅಧಿಕೃತವಾಗಿ ದಾಖಲಾಗಿದೆ ಎನ್ನಲಾಗಿದೆ. …

Read More »

ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ …

Read More »

ಸಿಂಹಾದ್ರಿಯ ಸಿಂಹ’ ಸಿನಿಮಾ ಪ್ರೇರಣೆ; ಭಿಕ್ಷುಕನನ್ನ ಚುನಾವಣಾ ಕಣಕ್ಕಿಳಿಸಿದ ಗ್ರಾಮಸ್ಥರು

ಮೈಸೂರು: ಡಾ. ವಿಷ್ಣುವರ್ಧನ್ ಅಭಿನಯದ ‘ಸಿಂಹಾದ್ರಿಯ ಸಿಂಹ’ ಸಿನಿಮಾದ ಪ್ರೇರಣೆಯಿಂದಾಗಿ ನಂಜನಗೂಡು ತಾಲ್ಲೂಕಿನ ಹುಳಿಮಾವು ಪಂಚಾಯ್ತಿ ವ್ಯಾಪ್ತಿಯ ಬೊಕ್ಕಹಳ್ಳಿ ಗ್ರಾಮದ ಯುವಕರೆಲ್ಲಾ ಸೇರಿ ಭಿಕ್ಷುಕರೊಬ್ಬರನ್ನು ಗ್ರಾಮ ಪಂಚಾಯ್ತಿ ಚುನಾವಣಾ ಅಖಾಡಕ್ಕಿಳಿಸಿದ್ದಾರೆ. ಗ್ರಾಮದ ನಿವಾಸಿ ಅಂಕನಾಯಕ ಎಂಬುವರಿಂದ ನಾಮಪತ್ರ ಸಲ್ಲಿಕೆ ಮಾಡಿಸಲಾಗಿದೆ. ವಿಶೇಷ ಚೇತನರಾಗಿದ್ದ ಆಂಕನಾಯಕ ಊರೂರು ತಿರುಗುತ್ತಾ, ಒಂದೊತ್ತಿನ ಊಟಕ್ಕೂ ಅಲೆಯುತ್ತಿದ್ದರು. ಗ್ರಾಮದ ಬಸ್​ ನಿಲ್ದಾಣ ಮತ್ತು ಅಲ್ಲಲ್ಲಿ ವಾಸ ಮಾಡುತ್ತಾ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ ಬಾರಿ …

Read More »

ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು: ಹೈಕೋರ್ಟ್ ಅಭಿಪ್ರಾಯ

ಬೆಂಗಳೂರು: ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ವಿದ್ಯಾಗಮ ಮರು ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತೆ ಎಂದು ಸರ್ಕಾರ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ …

Read More »

ಬೆಳ್ಳಂ ಬೆಳಗ್ಗೆ ಮತದಾನ ಶುರು

ಬೆಳಗಾವಿ- ಬೆಳ್ಳಂ ಬೆಳಗ್ಗೆ ಮತದಾನ ಶುರುವಾಯಿತು,ಮತ ಚಲಾಯಿಸಲು ಎಲ್ಲರೂ ಸರದಿಯಲ್ಲಿ ನಿಂತರು.ಬಾಸ್ ಜೊತೆ ಮತಗಟ್ಟೆಗೆ ಆಗಮಿಸಿದ ಶ್ವಾನವೊಂದು ಎಲ್ಲರ ಗಮನ ಸೆಳೆಯಿತು ಮಾಲೀಕನ ಜೊತೆ ಮತದಾನಕ್ಕಾಗಿ ಮತಗಟ್ಟೆಗೆ ಆಗಮಿಸಿದ ಶ್ವಾನದ ಹೆಸರು ಶಿರೂ.ಮತಗಟ್ಟಿಯ ಎದುರು ನಿಂತಿದ್ದ ಸರದಿಯಲ್ಲಿ ನಾಯಿ ಅಂತಿದಿತ್ತ ಓಡಾಡುತ್ತಲೇ ಇತ್ತು.ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿ ತಾಲೂಕಿನ ಕೆಎಚ್ ಕಂಗ್ರಾಳಿ ಮತಗಟ್ಟೆಯಲ್ಲಿ ಈ ಅಪರೂಪದ ಘಟನೆ ನಡೆದಿದ್ದು ಕಂಗ್ರಾಳಿ ಗ್ರಾಮದಲ್ಲಿ. ಜಿನ್ನಪ್ಪ ಮಾನೆ ಎಂಬುವವರ ಸಾಕು ನಾಯಿ …

Read More »

ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಹೈಕೋರ್ಟ್ ಶಾಕ್

ಬೆಂಗಳೂರು: ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಶಾಕ್ ಹೈಕೋರ್ಟ್​​ ಶಾಕ್ ನೀಡಿದ್ದು, ಸರ್ಕಾರದ ಆದೇಶ ಅನುಷ್ಟಾನಗೊಳಿಸದಂತೆ ಹೈಕೋರ್ಟ್ ನಿರ್ಬಂಧ ಹೇರಿದೆ. ಆಗಸ್ಟ್ 31 ರಂದು ಶಾಸಕರು, ಸಂಸದರ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ 62 ಪ್ರಕರಣಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆಯೂ ಹೈಕೋರ್ಟ್​ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಿತ್ತು. ಅರ್ಜಿಯಲ್ಲಿ ಸರ್ಕಾರ ನಿಯಮಬಾಹಿರವಾಗಿ, ಅಭಿಯೋಜಕರ ಅಭಿಪ್ರಾಯವಿಲ್ಲದೇ ನಿರ್ಧಾರ ಕೈಗೊಂಡಿದೆ …

Read More »

ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ

ಬೆಂಗಳೂರು,ಡಿ.21- ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ.  ಮೊದಲ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‍ಗಳನ್ನು ಬಳಸಿಕೊಳ್ಳಲಾಗಿದೆ.  ಮತಗಟ್ಟೆಗಳಿಗೆ ಸಿಬ್ಬಂದಿ, ಮತಪೆಟ್ಟಿಗೆ ಮತ್ತಿತರ ಸಾಮಾಗ್ರಿಗಳನ್ನು ಕೊಂಡೊಯ್ಯಲು ಮತ್ತು ಮರಳಿ ಕರೆತರಲು ಬಸ್‍ಗಳನ್ನು ಬಳಸಿಕೊಳ್ಳಲಾಗುತ್ತಿದೆ. ದೈನಂದಿನ ಮಾರ್ಗಗಳಲ್ಲಿ ಸಂಚರಿಸುವ ಬಸ್‍ಗಳನ್ನು ಹೊರತುಪಡಿಸಿ ಹೆಚ್ಚುವರಿ ಬಸ್‍ಗಳನ್ನು ಒಪ್ಪಂದದ ಮೇರೆಗೆ ಗ್ರಾಪಂ ಚುನಾವಣಾ ಕಾರ್ಯಕ್ಕೆ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ  ಮೂಲಗಳು ತಿಳಿಸಿವೆ.  ನಿತ್ಯ …

Read More »

ಕೊರೊನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿಜಯ್ ಶಿರ್ಕೆ ಅವರ ನಿಧನ

ಮುಂಬೈ, ಡಿ.21- ಕೊರೊನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿಜಯ್ ಶಿರ್ಕೆ ಅವರು ಚಿಕಿತ್ಸೆ ಫಲಿಸದೆ ಥಾಣೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಶಾಲಾ ಜೀವನದಲ್ಲೇ ಕ್ರಿಕೆಟ್‍ನತ್ತ ಒಲವು ತೋರಿದ್ದ ವಿಜಯ್ ಶಿರ್ಕೆ ಅವರು ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್‍ಗೆ ಆಪ್ತ ಗೆಳೆಯರಾಗಿದ್ದರಲ್ಲದೆ ಸಚಿನ್ ಹಾಗೂ ವಿನೋದ್ ಕಾಂಬ್ಳೆ ಅವರೊಂದಿಗೆ ಹಲವು ಪಂದ್ಯಗಳಲ್ಲಿ ಇನ್ನಿಂಗ್ಸ್ ಕಟ್ಟಿದ್ದರು. ಮುಂಬೈನ ಕಲ್ಯಾಣ್ ಪ್ರಾಂತ್ಯದಲ್ಲಿ ಜನಿಸಿದ ವಿಜಯ್ ಶಿರ್ಕೆ ಅವರು ಮುಂಬೈ ಕ್ರಿಕೆಟ್ ಅಸೋಸಿಯೇಷನ್‍ನ ತರಬೇತುದಾರರಾಗಿಯೂ ಕಾರ್ಯನಿರ್ವಹಿಸುವ ಮೂಲಕ …

Read More »