(ಡಿಸೆಂಬರ್.21): ಚುನಾವಣೆ ಯಾವುದೇ ಇರಲಿ, ಬೆರಳಿಗೆ ಇಂಕ್ ಹಚ್ಚುವುದು ಕಡ್ಡಾಯ. ಒಮ್ಮೆ ಹಚ್ಚಿದ ಇಂಕ್ ಎಷ್ಟೇ ಉಜ್ಜಿ, ತೀಡಿದರೂ ಅದು ಹೋಗಲ್ಲ. ಅಂತಹ ಅಳಿಸಲಾಗದ ಶಾಯಿಯನ್ನು ಜಗತ್ತಿನ ಹಲವು ರಾಷ್ಟ್ರಗಳಿಗೆ ಸರಬರಾಜು ಮಾಡುವುದು ನಮ್ಮ ಮೈಸೂರಿನ ಹೆಚ್ಚುಗಾರಿಕೆ. ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಇದೀಗ ಗ್ರಾಮ ಪಂಚಾಯಿತಿ ಚುನಾವಣೆಗೂ ಇಂಕ್ ಸರಬರಾಜು ಮಾಡಿದ್ದು, 1ನೇ ಹಂತದ ಚುನಾವಣೆಗೆ ಇಂಕ್ ತಲುಪಿಸಿದ್ರೆ, 2ನೇ ಹಂತದ ಚುನಾವಣೆಗೆ ಪ್ಯಾಕಿಂಗ್ ಕಾರ್ಯವು ಮುಗಿದಿದೆ. …
Read More »ಕಾಂಗ್ರೆಸ್ ಪಕ್ಷವು ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ
ಬೆಂಗಳೂರು,ಡಿ.21- ಕಾಂಗ್ರೆಸ್ ಪಕ್ಷವು ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಆ ಕಾರಣಕ್ಕಾಗಿ ಅನಿವಾರ್ಯವಾಗಿ ಕೆಲವು ನಿರ್ಧಾರಗಳನ್ನು ಮಾಡಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್‍ನ ಕೆಲವು ನಾಯಕರು ಹಾಗೂ ಜೆಡಿಎಸ್‍ನಿಂದ ಹೋದವರೆ ಈಗ ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ನನ್ನ ನಿಜವಾದ ರಾಜಕಾರಣ ಶುರುವಾಗುವುದು 2023ಕ್ಕೆ ಇದುವರೆಗಿನ ರಾಜಕಾರಣ ತಾತ್ಕಾಲಿಕವಾಗಿ ಮಾಡಿದ್ದು, 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಸುದ್ದಿಗಾರರಿಗೆ …
Read More »ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ.
ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ಟಾರ್ಚರ್ ವಿರೋಧಿಸಿ ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ. ಕೊರೋನಾದಿಂದಾಗಿ ಎಲ್ಲಾ ಕ್ಷೇತ್ರಗಳು ಆಎರ್ಹಿಕವಾಗಿ ಸಂಕಷ್ಟಕ್ಕೀಡಾಗಿವೆ. ಪೋಷಕರೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಆದರೆ ಪೋಷಕರು ಆರ್ಥಿಕವಾಗಿ ಶಕ್ತಿವಂತರಾಗಿದ್ದಾಗ ಇಂತದ್ದೇ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳು ಓದಬೇಕು ಎಂದು ಹಠಕ್ಕೆ ಬಿದ್ದು, ರಾತ್ರಿಯಿಡಿ ಶಾಲೆಗಳ ಮುಂದೆ ನಿಂತು ಅರ್ಜಿ ಪಡೆದರು. ತಮ್ಮ ಮಕ್ಕಳಿಗೆ ಅದೇ ಶಾಲೆಯಲ್ಲಿ …
Read More »ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ
ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಬಿಜೆಪಿ-ಜೆಡಿಎಸ್ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …
Read More »ಸತೀಶ್ ಜಾರಕಿಹೊಳಿ ಅವರ್ ಜೊತೆ ಹೆಲಿಕಾಫ್ಟರ್ ನಲ್ಲಿ ಸುತ್ತಾಡುವ ಅವಕಾಶ ನಿಮಗೆ ಬೇಕಾ…?
ಬೆಳಗಾವಿ: ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ’ ಅವರ ಜಯಂತೋತ್ಸವ ನಿಮಿತ್ತ ಗೋಕಾಕ್ ನಗರದಲ್ಲಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ವಿಜೇತರಾಗುವ 10 ಯುವಕರಿಗೆ ತಮ್ಮ ಹೆಲಿಕಾಪ್ಟರ್ನಲ್ಲಿ ಓಡಾಡಲು ಅವಕಾಶ ಕಲ್ಪಿಸುವುದಾಗಿ ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದ ಸಂಘಟನೆ ತಿಳಿಸಿದೆ. ಸತೀಶ್ ಜಾರಕಿಹೊಳಿ ನೇತೃತ್ವದ ಮಾನವ ಬಂಧುತ್ವ ವೇದಿಕೆ ಸಂಘಟನೆ ‘ಸಾವಿತ್ರಿಬಾಯಿ ಫುಲೆ ಅವರ ಹೋರಾಟ’ ಮತ್ತು ‘ಮಹಿಳಾ ಶಿಕ್ಷಣಕ್ಕೆ ಅವರ ಕೊಡುಗೆ’ ಎಂಬ ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ …
Read More »ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.
ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ. ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ, ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ …
Read More »ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ
ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು. ಕಳೆದ ಆರು …
Read More »ಇಂದಿನಿಂದ ರುಪ್ಸಾ ಆನ್ಲೈನ್ ಕ್ಲಾಸ್ ಬಂದ್: ಡಿ.31ರವರೆಗೆ ಸರ್ಕಾರಕ್ಕೆ ಡೆಡ್ಲೈನ್
ಬೆಂಗಳೂರು(ಡಿ.21): ಶಿಕ್ಷಣ ಇಲಾಖೆ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ, ಇಂದಿನಿಂದ ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿದೆ. ಜೊತೆಗೆ ಸಂಪೂರ್ಣ ಶೈಕ್ಷಣಿಕ ವರ್ಷವನ್ನು ಸ್ಥಗಿತ ಮಾಡಲು ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಸರ್ಕಾರ ಶಾಲೆಗಳನ್ನು ಪುನರಾರಂಭಿಸುವ ಸಮಯದಲ್ಲಿ ಶಾಲೆಗಳನ್ನು ಮುಚ್ಚಲು ಖಾಸಗಿ ಶಿಕ್ಷಣ ಮಂಡಳಿ ಮುಂದಾಗಿದೆ. ಇಂದಿನಿಂದ ರುಪ್ಸಾ ಅಡಿಯ ಖಾಸಗಿ ಶಾಲೆಗಳ ಆನ್ ಲೈನ್ ಕ್ಲಾಸ್ ಬಂದ್ …
Read More »ಹೆಚ್ಡಿಕೆ & ಯಡಿಯೂರಪ್ಪ ಅವರ ವಿರುದ್ಧವೂ ಏಕವಚನದಲ್ಲೇ ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಅದರ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧವೂ ಏಕವಚನದಲ್ಲೇ ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ರೈತ ಹೋರಾಟಗಾರ ಅಂತ ಹಸಿರು ಶಾಲು ಹಾಕಿಕೊಳ್ತಾನೆ. ಬಡವರ ಅಕ್ಕಿಯನ್ನ ಐದು ಕೆ.ಜಿ.ಗೆ ಇಳಿಸಿದ್ದಾನೆ. ಯಾಕೆ ಕಡಿಮೆ ಮಾಡಿದ್ರು, ಏನ್ ಅವರಪ್ಪನ ಮನೆಯಿಂದ ಕೊಡ್ತಿದ್ನಾ.. ಬಡವರ ಪರ ಹೃದಯವೇ ಇಲ್ಲದ ನಿಮ್ಮನ್ನ ಮನುಷ್ಯರು ಅಂತ ಕರೆಯಬೇಕಾ..? ಬಿಎಸ್‌ವೈ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ …
Read More »
Laxmi News 24×7