Breaking News
Home / ಜಿಲ್ಲೆ (page 891)

ಜಿಲ್ಲೆ

ಕೊರೊನಾ ಸೋಂಕಿತರಿಗಾಗಿ 110 ವೆಂಟಿಲೆಟರ್ :ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ

ಬೆಳಗಾವಿ: ಕೊರೊನಾ ಸೋಂಕಿತರ ಆಕ್ಸಿಜನ್ ಕೊರತೆಯಿಂದ ಸಾವೀಗಿಡಾಗುತ್ತಿರುವುದರಿಂದ ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ 110 ಆಕ್ಸಿಜನ್ ಸಿಲಿಂಡರ್ ಗಳ ವ್ಯವಸ್ಥೆ ಮಾಡಿದ್ದು, ಜನರ ಮೆಚ್ಚುಗೆ ವ್ಯಕ್ತ ವಾಗುತ್ತಿದೆ. ನಗರದಲ್ಲಿ ಕೊರೊನಾ ಸೋಂಕಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿ.ಪಿ., ಶುಗರ್ ಕಾಯಿಲೆಯಿಂದ ಬಳಲುತ್ತಿರುವ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಡುತ್ತಿದ್ದು, ಇದರಿಂದ ಸಮಸ್ಯೆ ಅರಿತ  ರಾಜು ಸೇಠ ವಿಶೇಷವಾದ ಸೌಲಭ್ಯವನ್ನು ಒದಗಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಅಂಜುಮನ್ ಹಾಲ್ ನಲ್ಲಿ 110 …

Read More »

ಜಿಲ್ಲೆಯ ಸಚಿವರ ವಿರುದ್ಧ ‘ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’  ಎಂಬ  ಅಭಿಯಾನ ಆರಂಭಿಸುವಂತೆ ಮಾಧ್ಯಮಗಳಿಗೆ ಸತೀಶ್ ಜಾರಕಿಹೊಳಿ‌ ಸಲಹೆ

ಬೆಳಗಾವಿ:  ಬೆಳಗಾವಿಯಲ್ಲಿ  ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು,  ಜಿಲ್ಲೆಯ ಸಚಿವರ ವಿರುದ್ಧ ‘ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’  ಎಂಬ  ಅಭಿಯಾನ ಆರಂಭಿಸುವಂತೆ ಮಾಧ್ಯಮಗಳಿಗೆ ಸತೀಶ್ ಜಾರಕಿಹೊಳಿ‌ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು  ಮಂತ್ರಿಗಳು ಎಷ್ಟು ಸಭೆ ನಡೆಸಬೇಕಾಗಿತ್ತೋ ಅಷ್ಟು ಮಾಡಿಲ್ಲ, ಜನರಿಗೆ ಸ್ಪಂದಿಸಿಲ್ಲ.  ಬಹಳಷ್ಟು ಮಂತ್ರಿಗಳು ಇನ್ನೂ ಬೆಂಗಳೂರಿನಲ್ಲಿಯೇ ಇದ್ದಾರೆ. ತಮ್ಮ ಕ್ಷೇತ್ರಕ್ಕೂ ಬಂದಿಲ್ಲ, ತಮ್ಮ ಜಿಲ್ಲೆಗೂ ಬಂದಿಲ್ಲ ಇದೆಲ್ಲಾ ಜನರಿಗೂ ಗೊತ್ತು, ಜನ ತೀರ್ಮಾನ …

Read More »

ಕೊರೊನಾ ನಿರ್ವಹಣೆ ಬಗ್ಗೆ ಲೆಕ್ಕ ಕೊಡುವ ವಿಚಾರದಲ್ಲಿ ಸರ್ಕಾರ ಮರೆ ಮಾಚುತ್ತಿದೆ:ಸತೀಶ್ ಜಾರಕಿಹೊಳಿ‌

ಬೆಳಗಾವಿ:  ಕೊರೊನಾ ನಿರ್ವಹಣೆ ಬಗ್ಗೆ ಲೆಕ್ಕ ಕೊಡುವ ವಿಚಾರದಲ್ಲಿ ಸರ್ಕಾರ ಮರೆ ಮಾಚುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್ ಜಾರಕಿಹೊಳಿ‌ ಹೇಳಿದರು. ಕೋವಿಡ್ ನಿರ್ವಹಣೆಗೆ ಕಾಂಗ್ರೆಸ್ ಕೊಡುಗೆ ಶುನ್ಯ ಎಂಬ ಸಚಿವ ಆರ್. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಕೊಡುಗೆ ಏನಿದೆ ಎಂಬುದಕ್ಕೆ ಉದಾಹರಣೆ ನಾನೂ ಸೇರಿ ನಮ್ಮ ಶಾಸಕರೇ ಇದ್ದಾರೆ. ಕೆಪಿಸಿಸಿ ಕೊವಿಡ ನಿರ್ವಹಣೆಯಲ್ಲಿ ತೊಡಗಿಕೊಂಡಿದೆ. ಇದೆಲ್ಲ ಅವರು ಹೇಳುವುದು ಅವಶ್ಯಕತೆಯಿಲ್ಲ. …

Read More »

ರಾಮಮಂದಿರಕ್ಕೆ ಅಂಜನಾದ್ರಿ ಶಿಲೆ – ಪೇಜಾವರಶ್ರೀ ಮೂಲಕ ಅಯೋಧ್ಯೆಗೆ ರವಾನೆ

ಉಡುಪಿ: ಭಗವಾನ್ ಶ್ರೀ ರಾಮಚಂದ್ರನ ಮಂದಿರಕ್ಕೆ ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯಲಿದೆ. ರಾಮಮಂದಿರ ಶಿಲಾನ್ಯಾಸದ ಹಿನ್ನೆಲೆಯಲ್ಲಿ ದೇಶವ್ಯಾಪಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದೆ. ಇಡೀ ದೇಶದ ಪವಿತ್ರ ಕ್ಷೇತ್ರಗಳ ಮಣ್ಣು ಮತ್ತು ನೀರಿನ ಸಂಗ್ರಹ ಒಂದೆಡೆ ನಡೆಯುತ್ತಿದ್ದರೆ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶಿಲೆಯನ್ನು ಮೆರವಣಿಗೆ ಮೂಲಕ ತಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಒಪ್ಪಿಸಲಾಗಿದೆ. ಶ್ರೀರಾಮ ಸೇನೆಯ ರಾಜ್ಯ ಮುಖಂಡ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮೆರವಣಿಗೆಯ …

Read More »

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಕಮಲ್ ಪಂಥ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಿಸಿ ಆದೇಶ ನೀಡಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವಗಾವಣೆ ಮಾಡಲಾಗಿದೆ. ಉಳಿದಂತೆ ಕಮಲ್ ಪಂಥ್ ಜಾಗಕ್ಕೆ ದಯಾನಂದ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿ ಆಗಿ ನೇಮಕ ಮಾಡಲಾಗಿದೆ. ಆ.1ಕ್ಕೆ ಭಾಸ್ಕರ್ ರಾವ್ ಅವರು ಆಯುಕ್ತರಾಗಿ ಒಂದು ವರ್ಷ …

Read More »

ತಾಯಿಯ ಮಾಂಗಲ್ಯವನ್ನು ಬಿಡಿಸಿಕೊಡುವ ಜವಾಬ್ದಾರಿ ನನ್ನದು: ಸಿಸಿ ಪಾಟೀಲ್

ಗದಗ: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದ ತಾಯಿ ಕಸ್ತೂರಿ ಅವರು ಅಡವಿಟ್ಟಿರುವ ಮಾಂಗಲ್ಯವನ್ನು ವಾಪಸ್ ಕೊಡಿದುವುದಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಹೇಳಿದ್ದಾರೆ. ಕಸ್ತೂರಿ ಅವರು ಮಾಂಗಲ್ಯವನ್ನು ಅಡವಿಟ್ಟು ಟಿವಿ ಖರೀದಿ ಮಾಡಿ ಮಕ್ಕಳ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸುದ್ದಿಯನ್ನುಮಾಡಿತ್ತು. ಈ ವರದಿಯನ್ನು ಗಮನಿಸಿಮಾತನಾಡಿದ ಸಚಿವ ಸಿಸಿ ಪಾಟೀಲ್, ಘಟನೆ ಬಗ್ಗೆ ನಾನು ಮಾಹಿತಿ ಪಡೆದು ಮಹಿಳೆಯೊಂದಿಗೆ ಮಾತನಾಡಿದ್ದೇನೆ. ಅಲ್ಲದೇ …

Read More »

ಚಿಕಿತ್ಸೆ ಸಿಗದೆ ಆರು ದಿನದ ಬಾಣಂತಿ ಕೊರೊನಾಗೆ ಬಲಿ

ಬೆಂಗಳೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ 6 ದಿನದ ಬಾಣಂತಿ ಕೊರೊನಾಗೆ ಬಲಿಯಾಗಿರುವ ಅಮಾನವೀಯ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ರಾಜಾಜಿನಗರ ಖಾಸಗಿ ಆಸ್ಪತ್ರೆಯಲ್ಲಿ 6 ದಿನಗಳ ಹಿಂದೆ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು. ಆದರೆ ಮನೆಗೆ ತೆರಳಿದ ಸಂದರ್ಭದಲ್ಲಿ ಮಹಿಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಬಾಣಂತಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಅವರಿಗೆ ಆ್ಯಂಟಿಜೆನ್‌ ಟೆಸ್ಟ್ ಮಾಡಿದ ವೇಳೆ …

Read More »

ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ ಫಿನಾಲೆಗೆ ಆಯ್ಕೆ

ಚಿಕ್ಕೋಡಿ: ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ್‌ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ 2020ರ ಗ್ರ್ಯಾಂಡ್ ‌ಫಿನಾಲೆಗೆ ಆಯ್ಕೆಯಾಗಿವೆ. ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್‌ವೇರ್‌ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್‌ಎಂಎಸರ್‌ ಆರ್‌ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್‌ ವಿಭಾಗದ ವಿದ್ಯಾರ್ಥಿಗಳಾದ …

Read More »

ಬೆಳಗಾವಿ: ಕೊರೋನಾ ಸೋಂಕಿತರ ಅಂತ್ಯಕ್ರಿಯೆ ವೇಳೆ ಕಣ್ಣೀರು ಹಾಕಿದ ಪಾಲಿಕೆ ಅಧಿಕಾರಿ!

ಬೆಳಗಾವಿ: ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹದ ಅಂತ್ಯಕ್ರಿಯೆ ಪ್ರಕ್ರಿಯೆ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ ಕಣ್ಣೀರು ಹಾಕಿದ ಪ್ರಸಂಗ ಇಲ್ಲಿನ ಸದಾಶಿವ ನಗರದ ಸ್ಮಶಾನಭೂಮಿಯಲ್ಲಿ ಗುರುವಾರ ನಡೆದಿದೆ. ಯಾವ ಜನ್ಮದ ಋುಣವೂ ಇಲ್ಲದ ಮೃತರ ಅಂತ್ಯಕ್ರಿಯೆಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದು, ಎಲ್ಲರ ಮನಕಲಕುವಂತಿದೆ. ಮೃತರ ಕುಟುಂಬಸ್ಥರು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿದ್ದರು. ಬೆಳಗಾವಿ: ಕೊರೋನಾ ವಾರಿಯರ್ಸ್‌ಗೂ …

Read More »

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾವಾರು ಬಿಡುಗಡೆಯಾದ ಹಣದ ಲೆಕ್ಕ ಕೊಟ್ಟ ಸರ್ಕಾರ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕವನ್ನು ಸರ್ಕಾರ ಇಂದು ಬಹಿರಂಗಪಡಿಸಿದೆ. ನ್ಯಾಯವಾದಿ ಸುರೇಂದ್ರ ಉಗಾರೆ ಕೊರೊನಾ ಸಂದರ್ಭದಲ್ಲಿ ಖರ್ಚಾದ ಹಣದ ಕುರಿತು ಮಾಹಿತಿ ಕೇಳಿದ್ದರು. ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆರೋಪ ಮಾಡಿದ್ದವು. ಈ ಹಿನ್ನೆಲೆ ಸರ್ಕಾರ ಇಂದು ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕ ಕೊಟ್ಟಿದೆ. ಇದುವರೆಗೆ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ …

Read More »