ಕಲಬುರಗಿ: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ್ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕದ ಮಾಡಿದೆ. ಸೌಂಡ್ …
Read More »ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ
ಶಿವಮೊಗ್ಗ: ಪತಿ ಸಾವಿನ ಬಳಿಕ ಪೇದೆ ನೀಡುತ್ತಿದ್ದ ಕಿರುಕುಳ, , ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಅಪಪ್ರಚಾರ ತಾಳಲಾಗದೇ ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್‌ನಲ್ಲಿ ಪತ್ತೆಯಾಗಿದ್ದು, ಪೇದೆ ಮೋಹನ್ ಕಾಟ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ. ಮೃತ ಸ್ವಾತಿ ಹಾಗೂ ಜಗದೀಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ …
Read More »ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಬೈರತಿ ಬಸವರಾಜ್ ರನ್ನು ಬಂಧಿಸಿ ಏಳು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದ ಸಿಐಡಿ ಪೊಲೀಸರು, ಇಂದು 42ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಬೈರತಿ ಬಸವರಾಜ್‌ಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಹಾಗಾಗಿ ಸೋಮವಾರ ಜಾಮೀನು ಅರ್ಜಿ ವಿಚಾರಣೆ ಇದೆ. ಅಲ್ಲಿ ತನಕ ಜಯದೇವ …
Read More »ಫೆ.22 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ಪವರ್ ಕಟ್
ಬೆಳಗಾವಿ; ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ.22 ಭಾನುವಾರ ದಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ವಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅದೇ ರೀತಿಯಲ್ಲಿ ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ …
Read More »ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ ಮಗು ಸೇರಿ ನಾಲ್ವರ ದುರ್ಮರಣ
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ …
Read More »ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೂ ಕೂಡ ದ್ವಿಚಕ್ರ ವಾಹನದಲ್ಲಿ ತೆರಳದಂತೆ ಮನವಿ ಮಾಡಿದ್ದಾರೆ. ಈಗಾಗಲೇ ಚಿರತೆ ಸೆರೆಗೆ ಬೋನುಗಳನ್ನು ಕೂಡ ಅರಣ್ಯ ಇಲಾಖೆ …
Read More »ಫೆ.22ರಂದು ಯುವ ಜೆಡಿಎಸ್ ಸಮಾವೇಶ
ಬೆಳಗಾವಿ : ಜೆಡಿಎಸ್ ವತಿಯಿಂದ ಫೆ.22ರಂದು ಬೆಳಗ್ಗೆ 11ಕ್ಕೆ ನಗರದ ಗಾಂಧಿ ಭವನದಲ್ಲಿ ಯುವ ಜನತಾದಳದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಭಾಗದಲ್ಲಿ ಪಕ್ಷದ ಪ್ರಾಬಲ್ಯ ಕಡಿಮೆ ಇದೆ ಎಂದು ಹಲವರು ಹೇಳುತ್ತಿದ್ದಾರೆ. ಇದನ್ನೇ ಸವಾಲಾಗಿ ಸ್ವೀಕರಿಸಿ, ಪಕ್ಷ ಸಂಘಟನೆ ಮತ್ತು ಪಕ್ಷವನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, …
Read More »Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ
ಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭವಾಗಿದೆ. ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಟ್ರೇಡ್ಸ್‌ಮನ್ 10ನೇ ತರಗತಿ ಪಾಸ್, ಅಗ್ನಿವೀರ ಟ್ರೇಡ್ಸ್‌ಮನ್ 8ನೇ ತರಗತಿ ಪಾಸ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ದಾಖಲಾತಿಗೆ ನೋಂದಣಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ. ಅಭ್ಯರ್ಥಿಗಳು ಭಾರತೀಯ ಸೇನೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ …
Read More »ಮಹಿಳಾ ಅಧಿಕಾರಿಗೆ ಬೆದರಿಕೆ ಪ್ರಕರಣ ಬಂಧಿತರು ಪುನಃ ಪೊಲೀಸ್ ವಶಕ್ಕೆ
ಬೆಳಗಾವಿ: ಮಹಿಳಾ ಅಧಿಕಾರಿ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯ ಸೆರೆಹಿಡಿದು, ವೈರಲ್ ಮಾಡುವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ಮೂವರು ಯುಟ್ಯೂಬರ್‌ಗಳನ್ನು ಪುನಃ ವಶಕ್ಕೆ ಪಡೆದಿರುವ ಮಾಳಮಾರುತಿ ಠಾಣೆ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ದುಲ್ ರಶೀದ್ ಮಕಾನದಾರ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಇವರಿಂದ ಮಾಹಿತಿ ಪಡೆದು ಕಳೆದ ವಾರ …
Read More »ಛತ್ರಪತಿ ಶಿವಾಜಿ ದೇಶಪ್ರೇಮದ ಪ್ರತೀಕ
ಬೆಳಗಾವಿ:ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ, ಶಿಸ್ತು ಮತ್ತು ದೇಶಪ್ರೇಮದ ಪ್ರತೀಕ. ಅವರ ಜೀವನ ನಮ್ಮಲ್ಲಿ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಹಿರಿಯ ಸಾಹಿತಿ ಸಿ.ಕೆ.ಜೋರಾಪುರ ತಿಳಿಸಿದರು . ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಾಜಿ ಉದ್ಯಾನದಲ್ಲಿ ಗುರುವಾರ ಏರ್ಪಡಿಸಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯದಲ್ಲೇ ಸ್ವರಾಜ್ಯದ ಮಹಾನ ಕನಸು ಕಂಡ ಶಿವಾಜಿ ತಮ್ಮ ಬುದ್ಧಿವಂತಿಕೆ ಮತ್ತು …
Read More »
Laxmi News 24×7