Breaking News

ಜಿಲ್ಲೆ

ಬಾಲಕಿ ಬೇರೊಬ್ಬನೊಂದಿಗೆ ವಿವಾಹವಾಗಲು ಮುಂದಾಗಿರುವ ವಿಷಯ ತಿಳಿದು ಆಕೆಯನ್ನು ಕಣಕುಂಬಿ ಅರಣ್ಯಕ್ಕೆ ಬೈಕ್ ನಲ್ಲಿ ಕರೆದೊಯ್ದು ಕೊಲೆ

ಬೆಳಗಾವಿ – 2019ರ ನವೆಂಬರ್ ತಿಂಗಳಲ್ಲಿ ಅಪಹರಣವಾಗಿದ್ದ ಅಪ್ರಾಪ್ತ ಬಾಲಕಿಯನ್ನು ನಂತರದಲ್ಲಿ ಕತ್ತು ಸೀಳಿ, ಕೊಲೆ ಮಾಡಿ ಕಣಕುಂಬಿ ಅರಣ್ಯದಲ್ಲಿ ಹೂತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಅಪಹರಿಸಲಾಗಿತ್ತು. ಈ ಕುರಿತು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು. ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಹಳ್ಳಿ ಎಂಬಾತ ಬಾಲಕಿಯೊಂದಿಗೆ ಸಲುಗೆಯಿಂದಿದ್ದ ಮಾಹಿತಿ ಅರಿತ ಪೊಲೀಸರು ತೀವ್ರ ತನಿಖೆ ನಡೆಸಿದಾಗ ಸಂಪೂರ್ಣ ವಿವರ ಹೊರಬಿದ್ದಿದೆ. …

Read More »

ಸಚಿವ ಸಂಪುಟ ಬಗ್ಗೆ ಯಾವುದೇ ಮಾತುಕತೆ ಇಲ್ಲ, ಶಾಸಕರಿಗೆ ಬಹಿರಂಗ ಹೇಳಿಕೆ ಕೊಡಲು ಅವಕಾಶ ಇಲ್ಲ,

ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಭಾರತೀಯ ಜನತಾಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕೋರ್ ಕಮಿಟಿ ಸಭೆ ನಡೆಯಿತು. ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಸೇರಿದಂತೆ ಕೋರ್ ಕಮಿಟಿ 14 ಸದಸ್ಯರು ಭಾಗವಹಿಸಿದ್ದರು. ಸಭೆಯ ಬಳಿಕ ಅರವಿಂದ ಲಿಂಬಾವಳಿ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ಶನಿವಾರ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಸಂಬಂಧ ಚರ್ಚಿಸಿ, ಲವ್ …

Read More »

ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿಸಂಪುಟ ವಿಸ್ತರಣೆತೀರ್ಮಾನ.:BSY

ಬೆಳಗಾವಿ :ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅವರ ಸಂದೇಶ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸಂಪುಟ ವಿಸ್ತರಣೆ ಸಂಬಂದ ಅರುಣ ಸಿಂಗ್ ಸಂದೇಶ ತಂದಿದ್ದಾರೆ.ಅವರ ಸಂದೇಶ ಏನಿದೆ ನೋಡಿ ವಿಸ್ತರಣೆ, ಪುನರ್ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ರಾಜ್ಯದ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ. ಬಿಬಿಎಂಪಿ ಚುನಾವಣಾ ಬಗ್ಗೆ ಹೈಕೋರ್ಟ್ ತೀರ್ಮಾನ. ಈ ಬಗ್ಗೆ ಮಾಹಿತಿ ಸಿಕ್ಕಿದೆ ನೋಡೊಣ ಎಂದು ಬೆಳಗಾವಿ ವಿಮಾನ …

Read More »

ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ: ಕಮಲ್ ಪಂಥ್

ಬೆಂಗಳೂರು: ನಾಳೆ ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ. ಈ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಭದ್ರತೆಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಬೆಳಗ್ಗೆಯಿಂದ ಪೊಲೀಸ್ ಇಲಾಖೆ ಭದ್ರತೆಗಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 15 ಸಾವಿರಕ್ಕಿಂತ ಹೆಚ್ಚು ಪೊಲೀಸರು ನಾಳೆ ಕಾರ್ಯ ನಿರ್ವಹಿಸಲಿದ್ದಾರೆ. 5 …

Read More »

ಬೆಳಗಾವಿ ಉಪಚುನಾವಣೆ ಬಿಜೆಪಿ ಆಕಾಂಕ್ಷಿ ಪಟ್ಟಿಯಲ್ಲಿ ಮತ್ತೊಂದು ಹೆಸರು !

ಬೆಂಗಳೂರು : ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ಈಗ ಬಿಜೆಪಿಯಿಂದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿದೆ. ವಿವಿಧ ಹಿಂದೂಪರ ಸಂಘಟನೆಯ ಮುಖಂಡರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮುತಾಲಿಕ್ ಕೊಡುಗೆ ಬಹಳಷ್ಟಿದೆ. ಬೆಳಗಾವಿ ಜಿಲ್ಲೆಯಲ್ಲೇ ಮುತಾಲಿಕ್ …

Read More »

ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ.

ಬೆಂಗಳೂರು: ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ. ಸರ್ಕಾರದ ಯಾವುದೇ ಬೆದರಿಕೆಗೆ ನಾವು ಬಗ್ಗಲ್ಲ. ಸರ್ಕಾರ ನಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದ್ರೂ ನಾವು ಸುಮ್ಮನಿರಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ನಾವು ಬಂದ್ ಮಾಡೇ ಮಾಡ್ತೀವಿ ಅಂತಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದು, ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ …

Read More »

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …

Read More »

,ಪಿಡಿಒಗಳಿಂದ ಬಿಜೆಪಿ ಹಣ ವಸೂಲಿಎಚ್.ಡಿ.ರೇವಣ್ಣ ಗಂಭೀರ ಆರೋಪ

ಹಾಸನ: ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಪಿಡಿಓಗಳು 10 ಸಾವಿರ ಹಣ ನೀಡುವಂತೆ ದೊಡ್ಡಮಟ್ಟದ ಬಿಜೆಪಿ ನಾಯಕರು ಸೂಚಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಎಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆಗೆ ವಂತಿಕೆ ನೀಡಬೇಕು ಎಂದು ಪಿಡಿಓ -ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಹಾಗೂ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ …

Read More »

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ.: ಯತ್ನಾಳ ಕಿಡಿ

ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …

Read More »

ಬಿ.ಸಿ. ಪಾಟೀಲ್‍ರಿಂದ ರೈತ ಸಮುದಾಯಕ್ಕೆ ಅವಮಾನ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »