Breaking News
Home / ಜಿಲ್ಲೆ (page 908)

ಜಿಲ್ಲೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು116 ಜನರಿಗೆ ಸೊಂಕುದೃಡ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ 116 ಜನರಿಗೆ ಸೊಂಕು ತಗಲಿದ್ದು ದೃಡವಾಗಿದೆ.   ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಪತ್ತೆಯಾದ 116ಜನ ಸೊಂಕಿತರು ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕಿನವರಾಗಿದ್ದಾರೆ.ಇವತ್ತಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1645 ಕ್ಕೆ ಏರಿಕೆಯಾಗಿದೆ  

Read More »

ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. : ಸಚಿವ ಸುರೇಶ ಅಂಗಡಿ 

ಬೆಳಗಾವಿ: ಬಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಸುಟ್ಟವರು  ದೇಶದ್ರೋಹಿಗಳು ಅಂತಾ ಕೇಂದ್ರ ಸಚಿವ ಸುರೇಶ ಅಂಗಡಿ  ಹೇಳಿಕೆ ನೀಡಿದ್ದಾರೆ. ಆ್ಯಂಬುಲೆಸ್ ಗೆಬೆಂಕಿ ಹಚ್ಚಿದ ವಿಚಾರವಾಗಿ  ನಗರದ ಕಾಡಾ ಕಚೇರಿಯಲ್ಲಿ  ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದರ ಹಿಂದಿರುವವರನ್ನು ಪೊಲೀಸರು ಕಂಡು ಹಿಡಿಯಬೇಕು.   ವೈದ್ಯಕೀಯ  ಸಿಬ್ಬಂದಿಗಳು  ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು . ಕೃತ್ಯ ಎಸಗಿದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು …

Read More »

ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ರಾಮದುರ್ಗ ಪುರಸಭೆಯ ಸಿಬ್ಬಂದಿ, ಕಟಕೋಳ ಪೊಲೀಸ್ ಠಾಣೆಯ ಮೂವರು ಪೇದೆಗಳಿಗೆ , ಹಾಗೂ ರಾಮದುರ್ಗ ಕೆಎಸ್‌ಆರ್‌‌ಟಿಸಿ ಘಟಕದ 10 ಸಿಬ್ಬಂದಿಗೆ ಕೊರೊನಾ ದೃಢವಾಗಿದೆ. ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ 48 ಗಂಟೆಗಳ ಕಾಲ ರಾಮದುರ್ಗ ಪುರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಕಟಕೋಳ ಪೊಲೀಸ್ ಠಾಣೆಯ ಪೇದೆಗಳಿಗೂ …

Read More »

ಸರ್ಕಾರದ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳು, ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ..!

ಬೆಂಗಳೂರು,ಜು.24- ಸರ್ಕಾರದ ಆದೇಶವನ್ನು ಪಾಲನೆ ಮಾಡಲು ಮೀನಾಮೇಷ ಎಣಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಮತ್ತೆ ಚಾಟಿ ಬೀಸಿದ್ದಾರೆ. ಒಪ್ಪಂದದಂತೆ ಖಾಸಗಿ ಆಸ್ಪತ್ರೆಯವರು ಸರ್ಕಾರಕ್ಕೆ ಈವರೆಗೂ ಕೊಟ್ಟ ಭರವಸೆಯಂತೆ ಹಾಸಿಗೆಗಳನ್ನು ನೀಡದೆ ನಮ್ಮ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ನೀಡುತ್ತಿಲ್ಲ. ಒಂದು ಹಂತದವರೆಗೂ ಸಹಿಸಿಕೊಳ್ಳಬಹುದು. ಖಾಸಗಿ ಆಸ್ಪತ್ರೆಗಳ ವರ್ತನೆ ಅತಿಯಾಗಿದೆ. ಕೂಡಲೇ ಕಾನೂನು ಕ್ರಮ ಜರುಗಿಸಿ ಎಂದು ಎಚ್ಚರಿಕೆ ಕೊಟ್ಟರು. …

Read More »

ಮಾಸ್ಕ್‌ ಧರಿಸದೇ ಎಂಟ್ರಿ – ಪ್ರಶ್ನಿಸಿದ್ದಕ್ಕೆ ಕಂಪ್ಯೂಟರ್‌ ಎತ್ತಿ, ಪೀಠೋಪಕರಣ ಧ್ವಂಸ

ಹಾಸನ: ಪಾನಮತ್ತ ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಗ್ರಾಮ ಪಂಚಾಯಿತಿಗೆ ನುಗ್ಗಿ ಅಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಆತಂಕ ಸೃಷ್ಟಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನಲ್ಲಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ. ಗುರುವಾರ ಬ್ಯಾಕರವಳ್ಳಿ ಗ್ರಾಮ ಪಂಚಾಯತಿಗೆ ನುಗ್ಗಿದ ಹರೀಶ್, ನನಗೆ ಹೆಲ್ತ್ ಕಾರ್ಡ್ ಮಾಡಿಕೊಡಬೇಕು ಎಂದು ಸಿಬ್ಬಂದಿಗೆ ಜೋರು ದನಿಯಲ್ಲಿ ಕೇಳಿದ್ದಾನೆ. ಆಗ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೊರಗೆ ಹೋಗಿದ್ದಾರೆ ಅವರು ಬಂದ …

Read More »

ಮನ್ಯಾಗ ಇರ್ತಿರೋ ಅಥವಾ ಮನೆ ಮಾರಿ K.L.E.ನಾಗ ಇರ್ತಿರ್ ನೀವೇ ನಿರ್ಧಾರ ಮಾಡಿ…….?

ಕ ರೋ ನಾ ವೈರಸ್ ಇತ್ತೀಚಿನ ದಿನಗಳಲ್ಲಿ ತುಂಬಾ ಕೆಳಿಬರ್ಥಿರೋ ವಿಷಯ ಎಲ್ಲಿ ನೋಡಿದ್ರೂ ಅದೇ ಮಾತು, quarantine , isolation , ಸುಮಾರು ಇಂಥ ಪದಗಳನ್ನ ಬಹುಶಃ ನಮ್ಮೋರು ಬಳಸೆ ಇಲ್ಲ ಅನ್ಸತ್ತೆ , ಆದ್ರೆ ಇತ್ತೀಚಿನ ದಿನಮಾನ ಗಳಲ್ಲಿ ಇವೆಲ್ಲ ರೂಢಿ ನಾಮ ಥರ ಪ್ರತಿದಿನ ಉಪಯೋಗ ಮಾಡುವಂಥ ಪದ ಗಳಾಗಿವೆ ಇದರಲ್ಲಿ ಈ ಒಂದು ಮಹಾ ಮಾರಿ ವಿಷಯ ದಲ್ಲಿ ಸೋಶಿಯಲ್ ಮೀಡಿಯಾ ನಲ್ಲಿ ಆರೋಗ್ಯ …

Read More »

ಕೆಎಂಸಿಯಲ್ಲಿ ಕೊರೊನಾ ಚಿಕಿತ್ಸೆ ನಡುವೆ ಪುತ್ತಿಗೆ ಶ್ರೀಗಳಿಂದ ಪ್ರತಿದಿನ ಪೂಜೆ

ಉಡುಪಿ: ಪುತ್ತಿಗೆ ಸ್ವಾಮೀಜಿಗೆ ಕೊರೊನಾ ಸೋಂಕು ಹರಡಿದ್ದು, ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಸ್ವಾಮೀಜಿ ವಿಶ್ರಾಂತಿಯ ಜೊತೆಗೆ ನಿರಂತರ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ. ಅನುಷ್ಠಾನಗಳನ್ನು ಮಾಡುತ್ತಿದ್ದಾರೆ. ಆaಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಗಮನಸೆಳೆದಿದೆ. ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು ದೇಶಗಳಲ್ಲಿ ತಮ್ಮ ಶಾಖಾಮಠಗಳನ್ನು ಹೊಂದಿರುವ ಸ್ವಾಮೀಜಿ ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವೃತ ಕೈಗೊಂಡಿದ್ದರು.ಚಾತುರ್ಮಾಸ್ಯಕ್ಕೆ ಸಂಕಲ್ಪ ಮಾಡಿದ್ದ ಸಮಯದಲ್ಲಿ …

Read More »

ನಾಗರ ಹಾವು ಗೆ, ಮಾಸ್ಕ್ ಹಾಕಿ,ಮಾಸ್ಕ್ ಸೇಫ್, ಎಂದು ಬರೆದ ವಿದ್ಯಾರ್ಥಿನಿ

  ಮೂಡಲಗಿ : ಇಂದು ನಾಗ ಚತುರ್ಥಿ,ನಾಗರಹಾವು ಗಳು ಗೆ ಹಾಲು ಹಾಕುವ ಹಬ್ಬ ಗಳು, (ಶ್ರಾವಣ ಮಾಸ.) ಬಹುತೇಕ ಹಿಂದುಗಳು,ಶ್ರಾವಣ ಮಾಸವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲ್ಪಡುತ್ತದೆ. ಇಂತಹ ಸಂದರ್ಭದಲ್ಲಿ ಮೂಡಲಗಿ ನಗರದಲ್ಲಿ ಒಬ್ಬ ವಿದ್ಯಾರ್ಥಿ ಕೊರೋನಾ ನಿಯಂತ್ರಣ ದಲ್ಲಿ ಒಂದು ಪ್ರಮುಖವಾದ ಮಾಸ್ಕ್ ಧರಿಸಲು ಪಟ್ಟಣದ ವಿಧ್ಯಾರ್ಥಿ ಸುಪ್ರಿಯಾ ಕಮ್ಮಾರ ತಮ್ಮ ಮನೆಯ ಮುಂದೆ ನಾಗರಹಾವಿನ, ಚಿತ್ರವನ್ನು ಬಿಡಿಸಿ. ಅದಕ್ಕೆ ಮಾಸ್ಕ್ ಹಾಕಿ.ಮಾಸ್ಕ್ ಸೇಫ್ ಎಂದು ಬರೆದಿದ್ದಾಳೆ. ಜನರು …

Read More »

ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್

ಬೆಂಗಳೂರು: ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್ ಮಾಡಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. ಬಿಬಿಎಂಪಿಯ ಮಹಾ ಎಡವಟ್ಟು ಮಾಡಿಕೊಂಡಿದ್ದು, ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಮನೆ ಬಾಗಿಲಿಗೆ ಅಡ್ಡಲಾಗಿ ಕಬ್ಬಿಣದ ಶೀಟ್ ಅಳವಡಿಕೆ ಮಾಡಿದ್ದರು. ಆ ಮೂಲಕ ಸೋಂಕಿತ ವ್ಯಕ್ತಿ ಮನೆಯಿಂದ ಹೊರಬರದಂತೆ ಸೀಲ್‍ಡೌನ್ ಮಾಡಲಾಗಿತ್ತು. ಶಾಂತಿನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಘಟನೆ ನಡೆದಿದೆ.ಅಧಿಕಾರಿಗಳ ಯಡ್ಡವಟ್ಟು ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು …

Read More »

ವಿಡಿಯೋ: ನಡುರಸ್ತೆಯಲ್ಲೇ ಮಹಿಳೆಯನ್ನು ಏಕವಚನದಲ್ಲಿ ನಿಂದಿಸಿದ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಜಿಲ್ಲೆಯ ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ನಡು ರಸ್ತೆಯಲ್ಲೇ ಮಹಿಳೆಯನ್ನು ಏಕ ವಚನದಲ್ಲಿ ನಿಂದಿಸಿ ಅವಾಜ್ ಹಾಕಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೊರಬ ಸಾಗರ ರಸ್ತೆಯಲ್ಲಿರುವ ಸಿಮೆಂಟ್ ಅಂಗಡಿಯೊಂದರ ಮುಂದೆ ರಸ್ತೆಗೆ ವಾಹನವನ್ನು ಅಡ್ಡಲಾಗಿ ನಿಲ್ಲಿಸಲಾಗಿತ್ತು. ಇದೇ ರಸ್ತೆಯಲ್ಲಿ ಶಾಸಕರು ಸಾಗುವಾಗ ರಸ್ತೆಗೆ ವಾಹನ ಅಡ್ಡಲಾಗಿ ನಿಲ್ಲಿಸಿದ್ದಕ್ಕೆ ತಮ್ಮ ಕಾರಿನಿಂದ ಇಳಿದು, ಮೊದಲು …

Read More »