Breaking News
Home / ಜಿಲ್ಲೆ (page 919)

ಜಿಲ್ಲೆ

ಕಲಬುರಗಿಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ

ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ ಹೊರಡಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ …

Read More »

ಡಿಸಿಎಂ ಕ್ಷೇತ್ರದ ‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ‘ಗೆ ಆರ್ಥಿಕ ಸಂಕಷ್ಟ: ಕ್ಯಾರೇ ಎನ್ನದ ಗೋವಿಂದ ಕಾರಜೋಳ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದ ತಿಮ್ಮಾಪುರ ಬಳಿಯಿರುವ ಜಿಲ್ಲೆಯ ಏಕೈಕ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟದಿಂದ ನಲುಗುತ್ತಿದೆ. ಈ ಬೆನ್ನಲ್ಲೇ ಇದೀಗ ಅಧ್ಯಕ್ಷ ರಾಮಣ್ಣ ತಳೇವಾಡ ಸೇರಿದಂತೆ 14ಮಂದಿ ನಿರ್ದೇಶಕರು ರಾಜೀನಾಮೆ ಸಲ್ಲಿಸಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ ಕ್ಷೇತ್ರ ಮುಧೋಳದ ತಿಮ್ಮಾಪುರ ರನ್ನ ನಗರದಲ್ಲಿರುವ  ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದೆ. ಸಕ್ಕರೆ ಕಾರ್ಖಾನೆ ಸಬಲೀಕರಣಕ್ಕೆ ಮುಂದಾಗದೇ ರಾಜೀನಾಮೆ ಕೊಡುವ ಮೂಲಕ …

Read More »

ಪಿಎಸ್‍ಎಸ್‍ಕೆಯಿಂದ ಕಬ್ಬು ತೆಗೆದುಕೊಂಡು ಹೋಗದಂತೆ ನಿರ್ಬಂಧ ಹಾಕುವಂತೆ ಮುರುಗೇಶ್ ನಿರಾಣಿ ಮನವಿ

ಮಂಡ್ಯ ಜಿಲ್ಲೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಮೀಸಲಿಟ್ಟಿರುವ ಕಬ್ಬನ್ನು ಇತರರು ತೆಗೆದುಕೊಂಡು ಹೋಗದಂತೆ ತಕ್ಷಣವೇ ಜಿಲ್ಲಾಡಳಿತ ನಿರ್ಬಂಧ ಹಾಕಬೇಕೆಂದು ಮಾಜಿ ಶಾಸಕ ಹಾಗೂ ನಿರಾಣಿ ಶುಗರ್ಸ್ ಲಿಮಿಟೆಡ್‍ನ ಅಧ್ಯಕ್ಷ ಮುರುಗೇಶ್ ನಿರಾಣಿ ಒತ್ತಾಯ ಮಾಡಿದ್ದಾರೆ. ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಪಾಂಡವಪುರ, ಶ್ರೀರಂಗಪಟ್ಟಣ ಹಾಗೂ ಕೆ.ಆರ್.ಪೇಟೆ ವ್ಯಾಪ್ತಿಯ ಕಬ್ಬನ್ನು ಜಿಲ್ಲಾಡಳಿತ ಮೀಸಲಿಟ್ಟಿದೆ.ಆದರೆ ನಮಗೆ ಮೀಸಲಿಟ್ಟಿರುವ ವ್ಯಾಪ್ತಿಯಿಂದ ಸಕ್ಕರೆ ಕಾರ್ಖಾನೆಗಳು ಕಬ್ಬನ್ನು ತೆಗೆದುಕೊಂಡು ಹೋಗುತ್ತಿವೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. …

Read More »

ರಾತ್ರಿ ರಕ್ತ ತರುವಂತೆ ಹೇಳಿ ಬೆಳಗ್ಗೆ ಸಾವಿನ ಸುದ್ದಿ ತಿಳಿಸಿದ್ರು’- ವೈದ್ಯರ ವಿರುದ್ಧ ಕಿಡಿ

ವಿಜಯಪುರ: ಹೆರಿಗೆ ಸಮಯದಲ್ಲಿ ತಾಯಿ-ಮಗು ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಹೆರಿಗೆಗೆಂದು ಕವಿತಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ನಾರ್ಮಲ್ ಡೆಲಿವರಿಯಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ತಡರಾತ್ರಿ ರಕ್ತ ತೆಗೆದುಕೊಂಡು ಬರಲು ವೈದ್ಯರು ಸೂಚಿಸಿದ್ದಾರೆ. ಆದರೆ ಬೆಳಗ್ಗೆ ಸಾವಿನ ವಿಚಾರವನ್ನೇ ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ವೈದ್ಯರ ನಿರ್ಲಕ್ಷ್ಯದಿಂದಲೇ ತಾಯಿ ಹಾಗೂ ಮಗುವಿನ …

Read More »

ಕನ್ನಡದ ಹಿರಿಯ ಕಲಾವಿದೆ ಬಿ.ಶಾಂತಮ್ಮ (95) ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಮೈಸೂರು: ಕನ್ನಡದ ಹಿರಿಯ ಕಲಾವಿದೆ ಬಿ.ಶಾಂತಮ್ಮ (95) ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಇಂದು ಸಂಜೆ ಸುಮಾರು 5.45ಕ್ಕೆ ಶಾಂತಮ್ಮ ನಿಧನರಾಗಿದ್ದಾರೆ. ಸುಮಾರು 160ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶಾಂತಮ್ಮ ಅವರು ಮೂಲತಃ ಚೆನ್ನೈ ನಿವಾಸಿ. ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾ ಬೆಂಗಳೂರಿನಲ್ಲಿ ಕುಟುಂಬದ ಜೊತೆ ವಾಸವಾಗಿದ್ದಾರೆ. ನಾಲ್ಕು ಗಂಡು ಮಕ್ಕಳು ಮತ್ತು ಇಬ್ಬರು ಪುತ್ರಿಯರಿದ್ದರು ಶಾಂತಮ್ಮ ಪ್ರತ್ಯೇಕವಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಂತೆ ಪುತ್ರಿ ಸುಮಾ ತಾಯಿಯನ್ನು ಮೈಸೂರಿನಲ್ಲಿ ತಮ್ಮ …

Read More »

ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅಂತಿಮ

ಬೆಂಗಳೂರು: ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅಂತಿಮ ನಿರ್ಧಾರ ಸೋಮವಾರ ಪ್ರಕಟವಾಗಲಿದೆ.   ಸಂಜೆ 4 ಗಂಟೆಗೆ ವಿಧಾನ ಸಭೆಯಲ್ಲಿ ಟಾಸ್ಕ್‌ ಫೋರ್ಸ್‌ ಸಭೆ ನಡೆಯಲಿದೆ. ಈ ವೇಳೆ ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾಡಿಕೊಂಡ …

Read More »

ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ? ಬೆಳಗಾವಿ ಲಾಕ್ ಡೌನ್ ಆಗತ್ತಾ..?

               ಬೆಳಗಾವಿ ಲಾಕ್ ಡೌನ್ ಆಗತ್ತಾ..?   ಬೆಂಗಳೂರು: ವೈದ್ಯಕೀಯ ಅವಸ್ಥೆ, ಕೊರೊನಾ ಅಬ್ಬರದ ನಡುವೆ ಬೆಂಗಳೂರಲ್ಲಿ ಮತ್ತೆ ಲಾಕ್‍ಡೌನ್ ಬೇಕಾ ಮತ್ತು ಬೇಡ್ವಾ ಅನ್ನೋದು ಇಂದು ತೀರ್ಮಾನ ಆಗುವ ಸಾಧ್ಯತೆಗಳಿವೆ. ಬುಧವಾರ ಬೆಳಗ್ಗೆ 5 ಗಂಟೆಗೆ ಕೊನೆ ಆಗುವ ಲಾಕ್‍ಡೌನ್‍ನ್ನು ಮತ್ತಷ್ಟು ದಿನ ಮುಂದುವರಿಸಬೇಕಾ? ಒಂದು ವೇಳೆ ಮುಂದುವರಿಸಿದ್ರೆ ಎಷ್ಟು ದಿನ? ಅಥವಾ ಇನ್ಮುಂದೆ ಲಾಕ್‍ಡೌನ್ ಬೇಕೇ ಬೇಡ್ವಾ ಅನ್ನೋದು …

Read More »

8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …

Read More »

ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ.

ಬೆಳಗಾವಿ- ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು …

Read More »

ಹಾಸನದಲ್ಲಿ ಮುಂದುವರಿದ ಸಾವಿನ ಸರಣಿ – ಓರ್ವ ಸಾವು, 41 ಜನರಿಗೆ ಕೊರೊನಾ

ಹಾಸನ: ಜಿಲ್ಲೆಯಲ್ಲಿ ಇಂದು ಒಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹೊಸದಾಗಿ 41 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 886ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ. ಇದುವರೆಗೆ 553 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 305 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 28 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 16 ಜನ ತೀವ್ರ …

Read More »