Breaking News

ಜಿಲ್ಲೆ

ವಂಶಾಡಳಿತ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಕ್ರೋಶ

ಬೆಂಗಳೂರು: ಯಾರ ಹೆಸರನ್ನೂ ಉಲ್ಲೇಖಿಸದೇ ವಂಶಾಡಳಿತ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ್, ಪಕ್ಷದ ಹೈಕಮಾಂಡ್ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಿದೆ. ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ಹೆಸರನ್ನು ಹೇಳದೇ ತಮ್ಮದೇ ಪಕ್ಷದ ಕೆಲವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಪೋಸ್ಟ್ ನಲ್ಲಿ ಏನಿದೆ ನಮ್ಮ ಹೆಮ್ಮೆಯ ಪ್ರಧಾನಿ …

Read More »

ಬೆಳಗಾವಿ ದೇಸೂರು ಬಳಿ ಓವರ್‍ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿ ಅಕ್ಕ, ತಮ್ಮ ಸ್ಥಳದಲ್ಲೇ ಸಾವ

ಬೆಳಗಾವಿ: ಲಾರಿ ಡಿಕ್ಕಿಯಾಕಿ ಬೈಕಿನಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಬಳಿ ನಡೆದಿದೆ. ರೇಣುಕಾ ತೇಗೂರ್(25), ಕಲ್ಮೇಶ್ ಕೊಳವಿ(19) ಮೃತ ದುರ್ದೈವಿಗಳು. ದೇಸೂರ್‍ನಿಂದ ಕಮಲ್ ನಗರದತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಓವರ್‍ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ಚಕ್ರದಡಿ ಸಿಲುಕಿ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿತ್ತು. ಬೆಳಗಾವಿ ಗ್ರಾಮೀಣ …

Read More »

ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ:ಪುನೀತ್ ರಾಜ್‍ಕುಮಾರ್

ಚಾಮರಾಜನಗರ: ನಮ್ಮ ಚಾಮರಾಜನಗರದ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಹೇಳಿದ್ದಾರೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ನಾಲ್ಕು ನಿಮಿಷದ ವಿಡಿಯೋವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ವಚ್ರ್ಯುವಲ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಪುನೀತ್, ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ. ನನ್ನ ತಂದೆಯ ಊರಾದ ಚಾಮರಾಜನಗರದ ಅಭಿವೃದ್ಧಿಗೆ ಸದಾ ಸಿದ್ಧ. ನಮ್ಮ …

Read More »

ರಮೇಶ್ ಕತ್ತಿ ನನ್ನ ಬಾಲ್ಯದ ಸ್ನೇಹಿತ ಅವರೇ ಅದ್ಯಕ್ಷ ರಾಗಬೇಕು:ರಮೇಶ್ ಜಾರಕಿಹೊಳಿ

ಬೆಳಗಾವಿ-ಡಿಸಿಸಿ ಬ್ಯಾಂಕ್ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಾಳೆ ನಡೆಯಲಿದ್ದು ಈಗ ಬೆಳಗಾವಿಯ ಸರ್ಕ್ಯುಟ್ ಹೌಸ್ ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಕೆಲವು ನಿರ್ದೇಶಕರು ರಮೇಶ್ ಕತ್ತಿ ಅವರ ಪುನರಾಯ್ಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಹಿರಿಯ ನಾಯಕರು, ಬೆಳಗಾವಿಯಲ್ಲಿ ಸಭೆ ಸೇರಿದ್ದಾರೆ ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ‌, ಮಾಜಿ ಸಚಿವ ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ‌, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಸಂಸದ …

Read More »

ಹೊಸಗುಡ್ಡದಹಳ್ಳಿ ದುರಂತದದಲ್ಲಿ ಬೆಂಕಿಗಾಹುತಿಯಾಯ್ತು ಬದುಕು..!

# ಶಿವಣ್ಣ ಬೆಂಗಳೂರು, ನ.13- ಸುಟ್ಟು ಹೋದ ಕಟ್ಟಡ, ಬೆಂದು ಹೋದ ಮರ, ಸುಟ್ಟು ಕರಕಲಾಗಿರುವ ವಸ್ತುಗಳು, ಬೆಂಕಿಗೆ ಆಹುತಿಯಾಗಿರುವ ಬ್ಯಾರೆಲ್‍ಗಳು… ಇವು ಕಂಡುಬಂದಿದ್ದು ನಗರದ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಲ್ಲಿ. ನವೆಂಬರ್ 10ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿ ನಲ್ಲಿ ಬೆಂಕಿ ಕಾಣಿಸಿಕೊಂಡು ಗೋದಾಮಿನಲ್ಲಿದ್ದ ರಾಸಾಯನಿಕ ವಸ್ತುಗಳೆಲ್ಲ ಆಹುತಿಯಾಗಿರುವುದಲ್ಲದೆ ಇಡೀ ಕಟ್ಟಡವನ್ನೇ ಆಪೋಷನ ತೆಗೆದು ಕೊಂಡಿದೆ. ಕಟ್ಟಡದ ಮುಂದಿದ್ದ ಎರಡು ವಿದ್ಯುತ್ ಕಂಬದ ಕೇಬಲ್‍ಗಳು, ಕಾರು, …

Read More »

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ.

ಬೆಂಗಳೂರು, ನ.13- ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ. ಉಪನ್ಯಾಸಕ ವೃತ್ತಿ ತೊರೆದು 1987ರಲ್ಲಿ ಬೆಂಗಳೂರಿಗೆ ಬಂದಾಗ ಅವರು ಡಾ.ರಾಜ್‍ಕುಮಾರ್ ರಸ್ತೆಯ ಅಭಿಮಾನಿ ಪ್ರಕಾಶನದ ಬಳಿ ನಿಂತಿದ್ದರು. ಇಲ್ಲಿ ತಮ್ಮ ಪತ್ರಕರ್ತ ಜೀವನ ವೃತ್ತಿ ಕಟ್ಟಿಕೊಳ್ಳಲು ಭಾರೀ ಕನಸು ಕಂಡಿದ್ದರು. ಆಗ ಅಭಿಮಾನಿ ಪ್ರಕಾಶನ ವತಿಯಿಂದ ಹೊರತರಲಾಗುತ್ತಿದ್ದ ಪೊಲೀಸ್ ಫೈಲ್ ಹಾಗೂ ಹಲವು ನಿಯತಾಲಿಕೆಗಳು ಪ್ರಕಟಗೊಳ್ಳುತ್ತಿದ್ದವು. ಇಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರು ರವಿಬೆಳಗೆರೆ …

Read More »

KAS ಅಧಿಕಾರಿ ಸುಧಾಗೆ ಮುಂದಿದೆ ಮಾರಿಹಬ್ಬ..!

ಬೆಂಗಳೂರು,ನ.13- ಅಕ್ರಮ ಆಸ್ತಿ ಸಂಪಾದನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಿಂದ ದಾಳಿಗೊಳಗಾಗಿರುವ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಬಿ.ಸುಧಾಗೆ ಇನ್ನಷ್ಟು ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಸಿಬಿ ದಾಳಿ ಸಂದರ್ಭದಲ್ಲಿ ಸುಮಾರು ನೂರು ಕೋಟಿಗೂ ಅಧಿಕ ಆಕ್ರಮ ಆಸ್ತಿ ಸಂಪಾದನೆ ಮಾಡಿರುವುದು ಕಂಡು ಬಂದಿರುವ ಕಾರಣ ಜಾರಿ ನಿದೇರ್ಶನಾಲಯ(ಇಡಿ) ಹಾಗೂ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಐದು ಕೋಟಿಗೂ ಹೆಚ್ಚಿನ ಭ್ರಷ್ಟಾಚಾರದ …

Read More »

ಬಿಜೆಪಿಯಲ್ಲಿ ಯಾರೂ ಶಾಸಕರಾಗಬೇಕು. ಲೋಕಸಭಾ ಸದಸ್ಯರಾಗಬೇಕು ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು

ಚಿಕ್ಕೋಡಿ : ಸುರೇಶ ಅಂಗಡಿ ಕುಟುಂಬದವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದ್ರೆ , ನಾನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು ನೀಡಿದ್ದಾರೆ. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಿರಿಯರು. ಅವರು ತಮ್ಮ ಪಕ್ಷದಲ್ಲಿ ಯಾರು  ಅಭ್ಯರ್ಥಿಯಾಗಬೇಕು. ಯಾರನ್ನು ಲೋಕಸಭಾ ಸದಸ್ಯರಾಗಬೇಕೆಂದು ಹೇಳಿದ್ದರೇ ಅದನ್ನು ಸ್ವಾಗತಿಸುತ್ತಿದ್ದೇ. ಆದರೆ ಬಿಜೆಪಿಯಲ್ಲಿ …

Read More »

1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಜಲಸಂಗ್ರಹಾಲಯ ಉದ್ಘಾಟನೆ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಷೇತ್ರದ ಪ್ರಜೆಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಸುಳಗಾಂವ, ಆಡಿ, ಮತ್ತಿವಾಡೆ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ …

Read More »

ರಾಜ್ಯದಲ್ಲಿ 7 ತಿಂಗಳ ಬಳಿಕ ನ.17ರಿಂದ ವಿದ್ಯಾರ್ಥಿ ನಿಲಯಗಳು ಓಪನ್

ಬೆಂಗಳೂರು,ನ.13- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಏಳು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಇದೇ 17 ( ಮಂಗಳವಾರ)ರಿಂದ ಆರಂಭವಾಗಲಿವೆ. ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …

Read More »