Breaking News

ಜಿಲ್ಲೆ

ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ …

Read More »

ಕಾಂಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.:bjp

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರತ್ನ ಜಯಗಳಿಸಿದ ಬೆನ್ನಲ್ಲೇ ಬಿಜೆಪಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕಾಲೆಳೆದಿದೆ. ಪ್ರಚಾರದ ಸಮಯದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಲೆಯೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆಇಂದು ತಿರುಗೇಟು ನೀಡಿದ ಬಿಜೆಪಿ, ಅಯ್ಯೋ ಸಿದ್ದರಾಮಯ್ಯನವರೇ ಆರ್. ಆರ್ ನಗರದಲ್ಲಿ ಕಾಂಗ್ರೆಸ್ಸ್ ಪಕ್ಷವೇ ಇಲ್ಲವಲ್ಲ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕವಾಗಿ ವಂಗ್ಯವಾಡಿದೆ. ಟ್ವೀಟ್‍ನಲ್ಲಿ ಏನಿದೆ? ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ …

Read More »

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಉಪಚುನಾವಣೆ

ಬೆಂಗಳೂರು,ನ.10-ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ(ಪ್ರ) ಹಾಗೂ ಉಪಚುನಾವಣೆ ಅಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನವೆಂಬರ್ 18ರವರೆಗೂ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನವೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ನವೆಂಬರ್ 23ರವರೆಗೆ ಕಾಲಾವಕಾಶವಿದೆ.

Read More »

ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ: ಕುಸುಮಾಗೆ ಟಾಂಗ್

ಬೆಂಗಳೂರು: ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ ಎಂದು ಉಪಚುನಾವಣಾ ಫಲಿತಾಂಶದಲ್ಲಿ ಜಯಗಳಿಸಿರುವ ಮುನಿರತ್ನ ಅವರು ಕಾಂಗ್ರೆಸ್ಸಿನ ಕುಸುಮಾಗೆ ಟಾಂಗ್ ನೀಡಿದ್ದಾರೆ. ಗೆಲುವು ಸಾಧಿಸಿರುವ ಮುನಿರತ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊದಲು ರಾಜರಾಜೇಶ್ವರಿ ನಗರದ ಮತದಾರರಿಗೆ ಧನ್ಯವಾದ ತಿಳಿಸಿದರು. ಇದೇ ವೇಳೆ ಪ್ರತಿಸ್ಪರ್ಧಿ ಬಗ್ಗೆ ಮಾತನಾಡಿ, ಸತ್ಯ ಮಾತಾಡಿ. ಕೊನೆಯ ಕ್ಷಣದಲ್ಲಿ ನಾನು ಬಳಸದೇ ಇರುವ ಪದವನ್ನು ಬಳಸಿದ್ದೇನೆ ಅಂತ ಕಣ್ಣೀರು ಹಾಕಿದ್ದೀರಲ್ವ ಅದಕ್ಕಿಂತ ದೊಡ್ಡ ತಪ್ಪು ಇನ್ಯಾವುದೂ ಇಲ್ಲ. ಇನ್ನು …

Read More »

ಲೈಟ್ ಕಂಬದ ವಿಚಾರಕ್ಕೆ ಜಗಳ – ನಾದಿನಿಗೆ ಹಿಗ್ಗಾಮುಗ್ಗ ಥಳಿಸಿದ ಬಾವ

ಕೋಲಾರ: ಕ್ಷುಲ್ಲುಕ ಕಾರಣಕ್ಕೆ ಉಂಟಾದ ಜಗಳದಲ್ಲಿ ವ್ಯಕ್ತಿಯೋರ್ವ ತನ್ನ ತಮ್ಮನ ಹೆಂಡತಿಯನ್ನು ಹಿಗ್ಗಾಮುಗ್ಗ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.ಮನೆ ಬಳಿ ವಿದ್ಯುತ್ ಕಂಬ ಅಳವಡಿಸುವ ವಿಚಾರದಲ್ಲಿ ಬಾವನೊಂದಿಗೆ ಜಗಳ ಕಿತ್ತ ನಾದಿನಿ, ಮೊದಲಿಗೆ ಬಾವನಿಗೆ ಪೊರಕೆ ಸೇವೆ ಮಾಡಿದ್ದಾಳೆ. ಈ ವೇಳೆ ಇಬ್ಬರ ನಡುವೆ ಜಗಳ ಹೆಚ್ಚಾದಾಗ ಜಗಳ ಬಿಡಿಸುವ ನೆಪದಲ್ಲಿ ಬಂದ ಬಾವನ ಮಗನೂ ಕೂಡ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ. …

Read More »

ವೀರಶೈವ ಮಹಾಸಭಾ ಯುವ ಘಟಕಕ್ಕೆ ಸುರೇಶ ಅಂಗಡಿ ಅಣ್ಣನ ಮಗ

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ಮೋಹನ ಅಂಗಡಿ ಅವರ ಪುತ್ರ ಚೇತನ ಅಂಗಡಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ವೀರಶೈವ ಬಾಂಧವರನ್ನು ಅದರಲ್ಲೂ ಮುಖ್ಯವಾಗಿ ಸಮಾಜದ ಯುವ ಪೀಳಿಗೆಯನ್ನು ಒಗ್ಗೂಡಿಸುವುದು, ಅವರಿಗೆ …

Read More »

ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ.

ಬೆಳಗಾವಿ – ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಇಡೀ ದಿನ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಯಬೇಕು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಸಭೆ ನಡೆದಿರಲಿಲ್ಲ. ಕಳೆದ ವಾರ ಮಂಗಳೂರಿನಲ್ಲಿ ಸಭೆ ನಡೆದಿತ್ತು. ಬೆಳಗಾವಿ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕಾರಿಣಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಚುನಾವಣೆ ಪೂರ್ವತಯಾರಿಯ ಭಾಗವಾಗಿ …

Read More »

ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್-

ಬೆಂಗಳೂರು: ರಾಜ್ಯದಲ್ಲಿ ಸ್ಕೂಲ್ ಆರಂಭದ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ. ಮತ್ತೊಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಇದರ ನಡುವೆ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಕಾಲೇಜು ಶಿಕ್ಷಣ ಇಲಾಖೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಕಠಿಣ ಮಾರ್ಗಸೂಚಿಗಳನ್ನೇ ಪ್ರಕಟಿಸಿದೆ. ಮಾರ್ಗಸೂಚಿಗಳು: ಕಾಲೇಜ್ ಆರಂಭಕ್ಕೆ 3 ದಿನ ಮೊದಲು ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಬೋಧಕರು ಫೇಸ್ ಮಾಸ್ಕ್, ಫೇಸ್ …

Read More »

ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..

ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..  

Read More »

ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದರೆ. ಇತ್ತ ಕುಸುಮಾರಿಂದ ಟೆಂಪಲ್ ರನ್

ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್ ಆರ್ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಆರಂಭವಾಗಿದೆ. ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕೌಂಟಿಂಗ್ ಆರಂಭದ ಬಳಿಕ ಮತ ಎಣಿಕಾ ಕೇಂದ್ರದ ಕಡೆ ಹೋಗಲು ನಿರ್ಧಾರ ಮಾಡಿದ್ದಾರೆ. ಸದ್ಯ ಟಿವಿಯಲ್ಲಿಯೇ ಬೆಳವಣಿಗೆಗಳನ್ನು ವೀಕ್ಷಿಸ್ತಿರೊ ಮುನಿರತ್ನ ಅವರು, ಚುನಾವಣಾ ಫಲಿತಾಂಶಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿನ್ನೆ ಆಗಮಿಸಿದ್ದಾರೆ.ಇತ್ತ ಕಾಂಗ್ರೆಸ್ …

Read More »