Breaking News
Home / ಜಿಲ್ಲೆ (page 933)

ಜಿಲ್ಲೆ

ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ. ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ …

Read More »

ಯಾರಿಗೂ ಯಾವುದೇ ಪಾಸ್ ನೀಡಿಲ್ಲ’ – ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ

ಬೆಂಗಳೂರು: ಏಳು ದಿನ ಬೆಂಗಳೂರು ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ. ಕಮೀಷನರ್ ಭಾಸ್ಕರ್ ರಾವ್ ಕಂಟ್ರೋಲ್ ರೂಂ ಮೂಲಕ ಪೊಲೀಸ್ ಠಾಣೆಗಳಿಗೆ ಸೂಚನೆ ಕೊಟ್ಟಿದ್ದಾರೆ. ಇಂದಿನಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆಯವರೆಗೆ ಲಾಕ್‍ಡೌನ್ ಇರುತ್ತೆ. ಈ ವೇಳೆ ಕೆಲವು ವ್ಯಾಪಾರ ವಹಿವಾಟುಗಳು ನಡೆಯುತ್ತೆ ಅವರಿಗೆ ಅವಕಾಶ ಮಾಡಿ ಕೊಡಬೇಕು. ಅಲ್ಲದೇ ಲಾಕ್‍ಡೌನ್ ವೇಳೆ ಸಾರ್ವಜನಿಕರ ಜೊತೆ ಮೃದುವಾಗಿ …

Read More »

ಪರೀಕ್ಷೆ ನಡೆಸಲು ಮುಂದಾಗಿದ್ದ ಕ್ರೈಸ್ಟ್‌ ಸೇರಿ ಡೀಮ್ಡ್‌ ವಿವಿಗಳಿಗೆ ಸರ್ಕಾರದಿಂದ ಚಾಟಿ

ಬೆಂಗಳೂರು: ಕೋವಿಡ್‌ 19 ಸಮಯದಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲು ಮುಂದಾಗುತ್ತಿದ್ದ ಬೆಂಗಳೂರಿನ ಕ್ರೈಸ್ಟ್‌ ಸೇರಿ, ಡೀಮ್ಡ್‌ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಚಾಟಿ ಬೀಸಿದೆ. ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಇನ್ಯಾವುದೇ ತರಗತಿಗಳಿಗೆ ಪರೀಕ್ಷೆ ನಡೆಸದಂತೆ ಕ್ರೈಸ್ಟ್ ವಿಶ್ವವಿದ್ಯಾಲಯ ಸೇರಿ ಎಲ್ಲಾ ಡೀಮ್ಡ್ ವಿವಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಇಂಟರ್ನಲ್ ಅಸಸ್ಮೆಟ್ ಶೇ.50 ಹಾಗೂ ಹಿಂದಿನ ಪರೀಕ್ಷೆಗಳಿಂದ ಶೇ.50 ಅಂಕದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್‌ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ …

Read More »

ಲಾಕ್‍ಡೌನ್‍ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್

ಬೆಂಗಳೂರು: ಲಾಕ್‍ಡೌನ್‍ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‍ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಎಂಟ್ರಿ ಮತ್ತು ಎಕ್ಸಿಟ್‍ಗಳನ್ನ ಬ್ಯಾರಿಕೇಡ್‍ಗಳನ್ನ ಹಾಕಿ ಮುಚ್ಚಲಾಗಿದೆ. ಯಾವುದೇ ಬಸ್‍ಗಳ ಓಡಾಟವಿಲ್ಲ. ಇಡೀ ಮೆಜೆಸ್ಟಿಕ್ ಸುತ್ತಮುತ್ತ ಪೊಲೀಸರು ರಸ್ತೆಯನ್ನು ಬಂದ್ ಮಾಡಿದ್ದಾರೆ. ಅಲ್ಲದೇ ಮೆಜೆಸ್ಟಿಕ್ ನಿಲ್ದಾಣದ ಅಂಗಡಿ ಮುಂಗಟ್ಟು ಸಹ ಸಂಪೂರ್ಣ ಬಂದ್ ಆಗಿವೆ. ಹೋಟೆಲ್, ಟೀ ಅಂಗಡಿಗಳು ಓಪನ್ ಇಲ್ಲ. …

Read More »

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನ

ಬೆಂಗಳೂರು: ಇಂದಿನಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಆಗಿದೆ. ಹೀಗಾಗಿ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ. ಆದರೆ ರೈಲು ಸಂಚಾರ ಬಂದ್ ಮಾಡಿಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನರಿದ್ದಾರೆ. ಈ ಬಾರಿಯ ಲಾಕ್‍ಡೌನ್‍ನಲ್ಲಿ ರೈಲು ಮತ್ತು ಏರ್‌ಪೋರ್ಟ್ ಬಂದ್ ಮಾಡಿಲ್ಲ. ಹೀಗಾಗಿ ಅನೇಕರು ರೈಲು ಮತ್ತು ವಿಮಾನಗಳ ಮೂಲಕ ಪ್ರಯಾಣ ಮಾಡುತ್ತಿದ್ದಾರೆ. ಸಂಗೊಳ್ಳಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಇದ್ದಾರೆ. …

Read More »

ಲಾಕ್‍ಡೌನ್ ಎಫೆಕ್ಟ್- ಮಳೆಯನ್ನೂ ಲೆಕ್ಕಿಸದೆ ಮದ್ಯದಂಗಡಿ ಮುಂದೆ ಕುಡುಕರ ಕ್ಯೂ

ರಾಯಚೂರು: ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆ ನಾಳೆಯಿಂದ ಜಿಲ್ಲೆಯ ರಾಯಚೂರು ಹಾಗೂ ಸಿಂಧನೂರು ನಗರಗಳಲ್ಲಿ ಒಂದು ವಾರ ಸಂಪೂರ್ಣ ಲಾಕ್‍ಡೌನ್ ಮಾಡಲಾಗುತ್ತಿದೆ. ಹೀಗಾಗಿ ಕುಡುಕರು ಮಳೆಯನ್ನೂ ಲೆಕ್ಕಿಸದೆ ಒಂದು ವಾರಕ್ಕಾಗುವಷ್ಟು ಮದ್ಯ ಖರೀದಿಸಲು ಸರತಿಯಲ್ಲಿ ನಿಂತಿದ್ದಾರೆ. ಒಂದು ವಾರ ಮದ್ಯದಂಗಡಿಗಳು ಸಹ ಬಂದ್ ಆಗುವ ಹಿನ್ನೆಲೆ ಮದ್ಯ ಪ್ರೀಯರಿಗೆ ಕಷ್ಟವಾಗಿದ್ದು, ಮಳೆಯನ್ನೂ ಲೆಕ್ಕಿಸದೆ ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಗಂಜ್ ರಸ್ತೆಯ ಎಂಎಸ್‍ಐಎಲ್ …

Read More »

ಲಾಕ್‍ಡೌನ್ ಎಫೆಕ್ಟ್ – 2 ದಿನದಲ್ಲಿ 410 ಕೋಟಿ ಮೌಲ್ಯದ ಎಣ್ಣೆ ಸೇಲ್………….

ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳು ಲಾಕ್‍ಡೌನ್ ಆಗಲಿವೆ. ಲಾಕ್‍ಡೌನ್ ಅವಧಿ ಡ್ರೈ ಡೇ ಅಗೋದ ಬೇಡ ಅಂತ ಮದ್ಯಪ್ರಿಯರು ಎಣ್ಣೆ ಖರೀದಿಗೆ ಮುಗಿಬಿದ್ದಿದ್ದರು. ಎರಡು ದಿನಗಳಲ್ಲಿ ಅಬಕಾರಿ ಇಲಾಖೆ 410 ಕೋಟಿ ರೂ. ಮೌಲ್ಯದ ಮದ್ಯವನ್ನು ಮಾರಾಟ ಮಾಡಿ ಬೊಕ್ಕಸ ತುಂಬಿಕೊಂಡಿದೆ. ಸೋಮವಾರ ಒಂದೇ ದಿನ ಬರೋಬ್ಬರಿ 230 ಕೋಟಿ ಮೌಲ್ಯದ ಮದ್ಯವನ್ನು ಕೆಎಸ್‍ಬಿಎಲ್ (ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ) ಮಾರಿದೆ. ಸೋಮವಾರ 215 ಕೋಟಿ …

Read More »

ನಾಳೆಯಿಂದ ರಾಯಚೂರು ಜಿಲ್ಲೆಯ ಎರಡು ನಗರ ಲಾಕ್‍ಡೌನ್

ರಾಯಚೂರು: ನಾಳೆಯಿಂದ ಜುಲೈ 22 ರವರೆಗೆ ರಾಯಚೂರು ನಗರ ಮತ್ತು ಸಿಂಧನೂರು ನಗರಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ತುರ್ತು ಹಾಗೂ ಅಗತ್ಯ ಸೇವೆಗಳಾದ ಕಿರಾಣಿ , ಔಷಧಿ ಅಂಗಡಿ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತು ಪಡಿಸಿ ಉಳಿದೆಲ್ಲಾ ಕಾರ್ಯಚಟುವಟಿಕೆ ಸಂಪೂರ್ಣ ಬಂದ್ ಇರುತ್ತದೆ. ಜಿಲ್ಲೆಯ ಉಳಿದ ತಾಲೂಕುಗಳಾದ ದೇವದುರ್ಗ, ಲಿಂಗಸುಗೂರು, ಸಿರವಾರ, ಮಸ್ಕಿ ಹಾಗೂ ಮಾನ್ವಿಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಎಲ್ಲದಕ್ಕೂ ಅವಕಾಶ ಇದ್ದು …

Read More »

ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ…………

ದಾವಣಗೆರೆ: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಯರಾಮ್(18) ಮೃತ ವಿದ್ಯಾರ್ಥಿ. ರಿಸಲ್ಟ್​ ಬಂದ ಕೂಡಲೇ ತಾನು ಫೇಲಾಗಿರುವ ವಿಷಯ ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ಪಕ್ಕೀರಸ್ವಾಮಿ ಬಳಿ ಈ ಘಟನೆ ನಡೆದಿದೆ. ಭೌತಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದು, …

Read More »

14 ದಿನಗಳ ಕಾಲ ಉಡುಪಿ ಗಡಿಗಳು ಸೀಲ್‍ಡೌನ್- ಜಿಲ್ಲಾಧಿಕಾರಿ ಆದೇಶ

ಉಡುಪಿ: ಇಂದು ರಾತ್ರಿಯಿಂದ ಜಿಲ್ಲೆಯ ಎಲ್ಲ ಗಡಿಗಳು ಸೀಲ್‍ಡೌನ್ ಆಗಲಿದ್ದು, ಜೆಲ್ಲೆಯೊಳಗೆ ಜನಜೀವನ ಯಥಾಸ್ಥಿತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲ ಜಿಲ್ಲೆಗಳು ಪರಿಸ್ಥಿತಿಗನುಣವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಿದರೆ, ಇನ್ನೂ ಕೆಲ ಗಡಿಗಳನ್ನು ಸೀಲ್ ಮಾಡಲಾಗುತ್ತಿದೆ. ಇನ್ನೂ ಹಲವು ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳಿರುವ ತಾಲೂಕುಗಳನ್ನಷ್ಟೇ ಲಾಕ್ ಮಾಡಲಾಗುತ್ತಿದೆ. ಹೀಗಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿಗೆ ಸಂಪರ್ಕ ಕಲ್ಪಿಸುವ …

Read More »