ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …
Read More »ವಿದ್ಯುತ್ ದರ ಏರಿಸಿ ಶಾಕ್ ಕೊಟ್ಟ ಸರ್ಕಾರ
ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಪ್ರಕಟಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವದ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ನವೆಂಬರ್ 1 ರಿಂದಲೇ ಪೂರ್ವಾನ್ವಯವಾಗಿ ಪರಿಷ್ಕೃತ ದರ ಜಾರಿಗೆ ಬರಲಿದೆ. ಐದು ತಿಂಗಳ ಮಟ್ಟಿಗೆ ಹೊಸ ಪರಿಷ್ಕೃತ ದರ ಜಾರಿಯಲ್ಲಿ ಇರಲಿದೆ ಜನವರಿಯಲ್ಲೇ ವಿದ್ಯುತ್ ಸರಬರಾಜು ಕಂಪನಿಗಳು ದರ …
Read More »ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ
ಹಾವೇರಿ: ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಮಹೇಶ್ ಪರಸಳ್ಳಿ(38) ಮತ್ತು ಮಂಜಪ್ಪ ಕರಿಯಪ್ಪನವರ (44) ಆತ್ಮಹತ್ಯೆ ಮಾಡಿಕೊಂಡ ರೈತರು. ಒಂದೂವರೆ ಎಕರೆ ಜಮೀನು ಹೊಂದಿದ್ದ ಮಹೇಶ್, ಬ್ಯಾಂಕ್ ಮತ್ತು ಕೈ ಸಾಲ ಸೇರಿ ಸುಮಾರು ನಾಲ್ಕೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದನು. ಇವರು ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಯನ್ನು ಬೆಳೆದಿದ್ದರು. ಆದರೆ ಈ …
Read More »ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.
ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …
Read More »ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ …
Read More »ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ
ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ …
Read More »ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ
ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ …
Read More »ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.
ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …
Read More »ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ
ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ ದೊಡ್ಡ ಮೇಲಾಟವೇ ನಡೆದಿತ್ತು. ಆದ್ರೆ, ಇದೆಲ್ಲವನ್ನೂ ಮೆಟ್ಟಿ ನಿಲ್ಲೋಕೆ ಸಿಎಂ ಬಿಎಸ್ವೈ ಸಜ್ಜಾಗಿದ್ದಾರೆ. ಇಂದು ಮಂಗಳೂರಿನಲ್ಲಿ ನಡೀತಿರೋ ರಾಜ್ಯ ಕಾರ್ಯಕಾರಿಣಿಯಲ್ಲಿ ಖಡಕ್ ಸಂದೇಶ ರವಾನಿಸೋಕೆ ರೆಡಿಯಾಗಿದ್ದಾರೆ. ನಾಯಕತ್ವ ಬದಲಾವಣೆ.. ಸಿಎಂ ಚೇಂಜ್.. ಯಡಿಯೂರಪ್ಪ ಕುರ್ಚಿಗೆ ಕಂಟಕ.. ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಇದೇ ಮಾತು. ವಿಪಕ್ಷಗಳಿಂದ ಹಿಡಿದು ಸ್ವಪಕ್ಷಿಯರವರೆಗೂ ಆಡಿದ್ದ ಮಾತು. ಆದ್ರೀಗ, …
Read More »ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …
Read More »
Laxmi News 24×7