ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ. ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ರಿಪೇರಿಗಾಗಿ ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಗಡೆ ನಿಲ್ಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡು ಅ ನಾಲ್ಕು ಕಾರುಗಳು ಸುಟ್ಟು ಹೋಗಿವೆ.
Read More »ಕೋಟೂರ ಗ್ರಾಮದ ರಸ್ತೆ ಸುಧಾರಣೆ ಕಾಮಗಾರಿಗೆ ಅದ್ಧೂರಿ ಚಾಲನೆ!
ಕೋಟೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಪರಮಾನಂದವಾಡಿ ರಸ್ತೆ (0.00 ಕಿ.ಮೀ ದಿಂದ 1.80 ಕಿ.ಮೀ ವರೆಗೆ) ಸುಧಾರಣಾ ಕಾಮಗಾರಿಯ ಭೂಮಿ ಪೂಜೆಯನ್ನು ಇಂದು ನೆರವೇರಿಸಲಾಯಿತು. ಕಾಮಗಾರಿಯ ವಿವರಗಳು: ಇಲಾಖೆ: ಲೋಕೋಪಯೋಗಿ ಇಲಾಖೆ (PWD) ಯೋಜನೆ: ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ (ಶೀರ್ಷಿಕೆ: 4059 – ಇತರೆ ಬಂಡವಾಳ ವೆಚ್ಚಗಳು) ಅಂದಾಜು ವೆಚ್ಚ: ₹2 ಕೋಟಿ ಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿಕಲಚೇತನರ ಕಲ್ಯಾಣಕ್ಕೆ ಹೊಸ ಭರವಸೆ!
ಬೆಳಗಾವಿ ಗ್ರಾಮೀಣ ಕ್ಷೇತ್ರದ ಒಟ್ಟು 7 ಗ್ರಾಮ ಪಂಚಾಯತಿಗಳ ‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ’ (VRWs) ನೇಮಕಾತಿ ಆದೇಶ ಪತ್ರಗಳನ್ನು ಇಂದು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ನೇಮಕಾತಿಯು ಗ್ರಾಮೀಣ ಭಾಗದ ವಿಕಲಚೇತನರ ಸಬಲೀಕರಣ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆಗಳು ಹಾಗೂ ನಿಮ್ಮ ಸೇವೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ ಎಂದು ಹಾರೈಸುತ್ತೇನೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ …
Read More »ಸಹೋದರನಿಗಾಗಿ ಪತ್ರಕರ್ತನ ಹೋರಾಟ ವಿಫಲ,ಎರಡೂವರೆ ವರ್ಷಗಳ ಹಿಂದೆ ಯಕೃತ್ತು(ಲಿವರ್) ಕಸಿ ಮಾಡಿಸಿಕೊಂಡ ಯುವಕ ಸಾವು
ಚಿಕ್ಕೋಡಿ:ಲಿವರ್ ಕಸಿ ಶಸ್ತ್ರಚಿಕಿತ್ಸೆಯಿಂದ ಬಳಲುತ್ತಿದ್ದ ಪತ್ರಕರ್ತ ಕಾಶಿನಾಥ ಸುಳಕೂಡೆ ಅವರಿಂದ ಗುಣಮುಖರಾದ ಚಿಕ್ಕೋಡಿ ತಾಲೂಕಿನ ಕರೋಶಿಯ ಯುವಕ ಬಾಜಿರಾವ ಸಂಭಾಜಿ ಸುಳಕುಡೆ (೩೬)ಇಂದು ನಿಧನರಾದರು. ಇದರಿಂದಾಗಿ ಕಳೆದ 3.5 ವರ್ಷಗಳಿಂದ ತನ್ನ ಸಹೋದರನ ಜೀವ ಉಳಿಸಲು ಪ್ರಯತ್ನಿಸುತ್ತಿದ್ದ ಅಣ್ಣ, ಪತ್ರಕರ್ತನ ಪ್ರಯತ್ನಗಳು ವಿಫಲವಾಗಿವೆ. ಈ ಘಟನೆ ಚಿಕ್ಕೋಡಿ, ಕರೋಶಿ ಮತ್ತು ಇತರ ಪ್ರದೇಶಗಳಲ್ಲಿ ಸಂಚಲನ ಮೂಡಿಸುತ್ತಿದೆ. ಚಿಕ್ಕೋಡಿ ತಾಲೂಕಿನ ಕರೋಶಿಯ ಯುವಕ ಬಾಜಿರಾವ್ ಸುಳಕುಡೆ ಯಕೃತ್ತಿನ ಕಾಯಿಲೆಯಿಂದ ಬಳಲು ಪ್ರಾರಂಭಿಸಿದರು. …
Read More »5000+ ಕೋಟಿ ಠೇವಣಿ ಸಂಗ್ರಹಿಸಿದ ಯಕ್ಸಂಬಾದ ಶ್ರೀ ಬೀರೇಶ್ವರ ಸಂಸ್ಥೆ
ಚಿಕ್ಕೋಡಿ: ಕರ್ನಾಟಕ ಗಡಿ ಭಾಗದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಶ್ರೀ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ( ಮಲ್ಟಿ ಸ್ಟೇಟ್) 5 ಸಾವಿರ ಕೋಟಿ ರೂಪಾಯಿ ಠೇವು ಸಂಗ್ರಹಿಸುವ ಮೂಲಕ ಗ್ರಾಹಕರ ಅಚ್ಚುಮೆಚ್ಚಿನ ಹಾಗೂ ವಿಶ್ವಾಸಾರ್ಹ ಸಹಕಾರಿ ಸಂಸ್ಥೆಯಾಗಿ ಹೊರಹೊಮ್ಮಿದೆ. ಜೊಲ್ಲೆ ಗ್ರೂಪ್ ಸಂಸ್ಥಾಪಕರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ನೇತೃತ್ವದಲ್ಲಿ 1991ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಇಂದು ಕರ್ನಾಟಕ, ಮಹಾರಾಷ್ಟ್ರ …
Read More »ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪದೋಷಗಳಿದ್ರೆ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಚಿವರಾದ …
Read More »ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಕೈಯಲ್ಲಿ ಕೊಡಗಳನ್ನ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಕಳೆದ 20 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಜನ, ಜಾನುವಾರುಗಳು ಪರಿತಪಿಸುವಂತಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಕುಡಿಯುವ ನೀರು …
Read More »ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ
ಚಿಕ್ಕಮಗಳೂರು: ನಾನೊಬ್ಬ ರೈತನ ಮಗನಾಗಿದ್ದು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಚಿಕ್ಕಮಗಳೂರು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಮಾತನಾಡಿದ ಅವರು, ನಾನು ಒಬ್ಬ ರೈತರ ಮಗ. ಒಬ್ಬ ಕೃಷಿಕ ಈಗ ಶಾಸಕನಾಗಿದ್ದೇನೆ. ಕೃಷಿ ವಿಚಾರ ತಿಳಿಯಲು ವಿದೇಶ ಪ್ರವಾಸಕ್ಕೆ ಹೋಗಿತ್ತಿದ್ದೇನೆ ಎಂದು ತಿಳಿಸಿದ್ದಾರೆ. ಮೊದಲಿನಿಂದಲೂ ನಾನು ವಿದೇಶಕ್ಕೆ ಹೋಗಿ ಬರುತ್ತಿದ್ದೇನೆ. ಬೇರೆ ಬೇರೆ ದೇಶಗಳಲ್ಲಿ ಕೃಷಿ ಹೇಗಿದೆ ಎಂದು ನೋಡಬೇಕು. ಹಾಗಾಗಿ ಪ್ರವಾಸಕ್ಕೆ ಹೋಗ್ತಾ ಇದಿನಿ. …
Read More »ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ
ಬೆಂಗಳೂರು: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ ಅಂತ ಮಾಜಿ ಸಚಿವ ಆರಗ ಜ್ಞಾನೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಲ್ಲಿ ಫಾರಿನ್ ಟ್ರಿಪ್ ಪಾಲಿಟಿಕ್ಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸೊನ್ನೆ ಅಭಿವೃದ್ಧಿ, ಈಗ ಕಿತ್ತಾಟ ಶುರುವಾಗಿದೆ. ಅದು ಎಲ್ಲಿಗೆ ಹೋಗಿ ನಿಲ್ಲುತ್ತೋ ಹೇಳೋಕೆ ಸಾಧ್ಯವಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಅಂತಾರೆ. ಹೈಕಮಾಂಡನ್ನ ಧಿಕ್ಕರಿಸೋ ಕೆಲಸ ನಡೆದಿದೆ. ಸಿಎಂ-ಡಿಸಿಎಂ ಕುರ್ಚಿ ಹೋರಾಟದಲ್ಲಿ ಸಂಪೂರ್ಣವಾಗಿ ಕರ್ನಾಟಕ …
Read More »ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್ ರಾಜಣ್ಣ
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ಮಹಿಳಾ ಮೀಸಲಾತಿ ಬಂದ್ರೆ ಪುತ್ರಿ ರಶ್ಮಿ ರಾಜಣ್ಣ ರನ್ನ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಸಿಎಂ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿ, ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತೆ ಅಂತ ಅಂದುಕೊಂಡ್ರೆ ಸುಳ್ಳು. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ, ಬಜೆಟ್ …
Read More »
Laxmi News 24×7