Breaking News

ಜಿಲ್ಲೆ

ಕೆಜಿಎಫ್-2, ಯಶ್ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ.

ಬೆಂಗಳೂರು: ಕೆಜಿಎಫ್-2, ಯಶ್ ಅಭಿಮಾನಿಗಳು ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಯೂ ಬಹುನೀರಿಕ್ಷೆಯಿಂದ ಕಾಯುತ್ತಿರುವ ಸಿನಿಮಾವಾಗಿದೆ. ಸದ್ಯ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ. ಹೌದು. ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆ ಮಾಡುವಂತೆ ಟ್ವಿಟ್ಟರ್ ಮೂಲಕವಾಗಿ ಅಭಿಮಾನಿಗಳು ಸಿನಿಮಾ ತಂಡದ ಮುಂದೆ ಬೇಡಿಕೆ ಇಡುತ್ತಿದ್ದಾರೆ. ‘ವೀನೀಡ್ ಕೆಜಿಎಫ್2 ಟೀಸರ್’ ಹ್ಯಾಶ್‍ಟ್ಯಾಗ್‍ನೊಂದಿಗೆ ಟ್ವೀಟ್ ನ ಸುರಿಮಳೆ ಗೈದಿದ್ದಾರೆ. ಬೆಳಗ್ಗಿನಿಂದಲೇ ಈ ವಿಚಾರ ಟ್ವಿಟರ್‍ನಲ್ಲಿ ಟ್ರೆಂಡಿಂಗ್ ಆಗಿದೆ. ಚಾಪ್ಟರ್-2 ಅಕ್ಟೋಬರ್ 23 …

Read More »

ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ

ಬೆಳಗಾವಿ : ವಿಜಯದ ದ್ಯೋತಕವಾಗಿರುವ “ವೀರಜ್ಯೋತಿ” ಯನ್ನು  ಸ್ವಾಗತಿಸುವ ಮೂಲಕ “ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು. ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಿಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ …

Read More »

ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …

Read More »

ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ.        ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು …

Read More »

ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.           ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ …

Read More »

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ

ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್​ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. …

Read More »

ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ.

ಚಿಕ್ಕಬಳ್ಳಾಪುರ: ಮನೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ. ತಂದೆ ರವಿಕುಮಾರ್, ಮಗ ರಾಹುಲ್‌ ಮೃತರು. ಘಟನೆಯಲ್ಲಿ ತಾಯಿ ಮುನಿರಾಜಮ್ಮ, ಮಗಳು ರುಚಿತಾ‌ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಭಾರಿ ಅನಾಹುತ ನಡೆದಿದೆ. ಮಳೆ ರಭಸಕ್ಕೆ ಮನೆ ಕುಸಿದು ತಂದೆ-ಮಗ ಇಬ್ಬರೂ ಮೃತಪಟ್ಟಿದ್ದು, ತಾಯಿ-ಮಗಳು ಆಸ್ಪತ್ರೆಯಲ್ಲಿ …

Read More »

ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್​ನಲ್ಲಿ ಗೆಸ್ಟ್ ರೋಲ್​ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ …

Read More »

ಶಿರಾದಲ್ಲಿ ಈಗ ತಮ್ಮವರನ್ನು ಗೆಲ್ಲಿಸಲು ಮಕ್ಕಳ ಶತಪ್ರಯತ್ನ

  ಬೆಂಗಳೂರು : ಕುಟುಂಬ ರಾಜಕಾರಣವೇ ಮೇಳೈಸುತ್ತಿರುವ ದಿನಗಳಲ್ಲಿ ತಮ್ಮ ತಂದೆ-ತಾಯಿಯ ಗೆಲುವಿಗಾಗಿ ಮಕ್ಕಳು ಬೆವರು ಹರಿಸುತ್ತಿರುವುದು ಈ ಉಪಚುನಾವಣೆಯ ವಿಶೇಷವಾಗಿದೆ. ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುವ ಈ ದಿನಗಳಲ್ಲಿ ತಮ್ಮ ತಂದೆಯ ಕುರ್ಚಿ ಭದ್ರಪಡಿಸಲು, ಅಪ್ಪನ ಗೆಲುವಿಗಾಗಿ ಮಗ, ತಾಯಿಯ ಗೆಲುವಿಗೆ ಮತ್ತೊಬ್ಬ ಪುತ್ರ ಮತಬೇಟೆ ಮಾಡುತ್ತಿರುವುದು ಶಿರಾದಲ್ಲಿ ಕಂಡುಬರುತ್ತಿದೆ. ಉಪಚುನಾವಣೆಯಲ್ಲಿ ಸೋತರೆ, ತಮ್ಮ ತಂದೆಯ ಕುರ್ಚಿಗೆ ಕಂಟಕ ಎಂಬುದು ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜೇಯೇಂದ್ರಗೆ …

Read More »