Breaking News

ಜಿಲ್ಲೆ

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.  

Read More »

ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಬೆಂಬಲಿಸಿ: ಶಾಸಕ ಸತೀಶ್ ಜಾರಕಿಹೊಳಿ

ಬೆಂಗಳೂರು : ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಡೆಸುತ್ತಿರುವ ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಇಂದು ರೈತರ ಹಸ್ತಾಕ್ಷರ ಚಳುವಳಿ (ಸಹಿ)ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರದ 3 ಕೃಷಿ ಸುಗ್ರಿವಾಜ್ಞೆಗಳಾದ ಕೃಷಿ ವ್ಯಾಪಾರ ಮತ್ತು ವಾಣಿಜ್ಯ ಸುಗ್ರಿವಾಜ್ಞೆ, ರೈತರ ಬೆಲೆ ಭರವಸೆ ಮತ್ತು ಕೃಷಿ …

Read More »

ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.  ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …

Read More »

ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …

Read More »

ರಸ್ತೆ ದಾಟಿ ಬಂದ ಮೇಲೆ ಮೈಕೈ ನೋವು ಗ್ಯಾರೆಂಟಿ. ವಾಹನಗಳು ಸುರಕ್ಷಿತವಾಗಿ ಇರುತ್ತವೆ ಅನ್ನೋ ನಂಬಿಕೆಯೂ ಇಲ್ಲಾ

ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು ಬಿದ್ದಿವೆ. ಇದರ ಜೊತೆ ಜೊತೆಗೆ ಜಿಲ್ಲೆಯ ರಸ್ತೆಗಳು ಸಹ ಹಾಳಾಗಿ ಹೋಗಿವೆ. ಜಿಲ್ಲೆಯಿಂದ ಆರಂಭವಾಗುವ ರಾಯಚೂರು- ಬಾಚಿ ರಾಜ್ಯ ಹೆದ್ದಾರಿ ಸಂಖ್ಯೆ 20 ಇದು ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ರಸ್ತೆ ತುಂಬಾ ಎಲ್ಲಿ ನೋಡಿದ್ರೂ ಆರಡಿ ಮೂರಡಿ ಗುಂಡಿಗಳೇ ಕಾಣಿಸುತ್ತವೆ. ರಾಯಚೂರು ಹೊರವಲಯದ ಸಾಥಮೈಲ್ ನಿಂದ ಕಲ್ಮಲವರೆಗೆ ಇರುವ ರಸ್ತೆ ಆ …

Read More »

ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

ಕಲ್ಲೋಳಿ : ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಹಾಗೂ ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ನೈರ್ಮಲ್ಯ ಕಾಪಾಡಿ ಹಾಗೂ …

Read More »

ಕ್ಷುಲ್ಲಕ ಕಾರಣಕ್ಕಾಗಿ ನವ ವಿವಾಹಿತೆ ಆತ್ಮಹತ್ಯೆ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ನಿಖಿಲ್‌ ಚೋಪಡೆ (19) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. ಕಳೆದ ಐದು  ತಿಂಗಳ ಹಿಂದಷ್ಟೇ ಜ್ಯೋತಿ, ಉಚಗಾಂವ ಗ್ರಾಮದ ನಿಖಿಲ್ ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು.  ತವರು ಮನೆಗೆ ಆಗಮಿಸಿದ್ದ  ಜ್ಯೋತಿ ಒಂದಿಲ್ಲದೊಂದು ಬೇಡಿಕೆ ಇಡುತ್ತಿದ್ದಳು. ಇತ್ತೀಚೆಗಷ್ಟೆ ಪೋಷಕರಿಗೆ ಕಾಡಿಬೇಡಿ  ಫ್ರೀಡ್ಜ್  ಖರೀದಿಸಿದ್ದಳು. ಇದೀಗ  ಸೋಫಾ‌ ಸೆಟ್ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಳು.  …

Read More »

ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ ಬಂದಿದ್ದು, ಈ ಕ್ಷೇತ್ರದ ಮೊಸಳೆ ಅನ್ನೋದು ವಿಶೇಷ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಇಲ್ಲಿನ ಕೆರೆಯಲ್ಲಿ ವಾಸವಾಗಿರುವ ದೇವರ ಮೊಸಳೆ ಎಂದೇ ಪ್ರಸಿದ್ಧಿ ಪಡೆದ ‘ಬಬಿಯಾ’ ಅನ್ನುವ ಮೊಸಳೆ ಗರ್ಭಗುಡಿ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುವ ‘ಬಬಿಯಾ’ಗೆ ಪ್ರತಿನಿತ್ಯದ ಪೂಜೆಯ ಬಳಿಕ …

Read More »

ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ

ಬೆಂಗಳೂರು: ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ ಬಡಿದಾಡಿಕೊಂಡಿರುವ ಘಟನೆ ಜೆಪಿ ನಗರದ ಎಸ್.ವಿ ಇನ್‍ಫ್ರಾ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಒಂದೇ ಅಪಾರ್ಟ್‍ಮೆಂಟ್‍ನಲ್ಲಿ ಬೇರೆ ಬೇರೆ ಫ್ಲಾಟ್‍ಗಳಲ್ಲಿ ವಾಸವಿರೋ ಕುಮಾರಿ ಹಾಗೂ ವರಲಕ್ಷ್ಮಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಕಳೆದ 14ರಂದು ಚಪ್ಪಲಿ ಸ್ಟಾಂಡ್ ವಿಚಾರಕ್ಕೆ ವರಲಕ್ಷ್ಮಿ ಹಾಗೂ ಕುಮಾರಿ ನಡುವೆ ಗಲಾಟೆ ಶುರುವಾಗಿತ್ತು. ಕುಮಾರಿ ಅವರ ಚಪ್ಪಲಿ ಸ್ಟ್ಯಾಂಡ್ ಅನ್ನು ವರಲಕ್ಷ್ಮಿ ಡ್ಯಾಮೇಜ್ ಮಾಡಿದ್ದರು. ಹೂವಿನ ಫಾಟ್‍ನಿಂದ ಚಪ್ಪಲಿ ಸ್ಟ್ಯಾಂಡ್‍ಗೆ ಹೊಡೆದು ವರಲಕ್ಷ್ಮಿ …

Read More »

ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ

ಹಾವೇರಿ: ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಹಾವೇರಿ ನಗರಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಮಹಿಳೆಯನ್ನು ಮೂಲತಃ ಕಲಬುರಗಿ ಜಿಲ್ಲೆಯ ಬಾಪುನಗರದ ಜಯಶ್ರೀ ಕನ್ವರ್ ಉಪಾದ್ಯ (30) ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಅಶ್ವಿನಿ ನಗರ, ಶಿವಾಜಿ ನಗರ ಸೇರಿದಂತೆ ನಗರದ ನಾಲ್ಕು ಮನೆಗಳನ್ನು ಈಕೆ ಕಳ್ಳತನ ಮಾಡಿದ್ದಾಳೆ. ಬಂಧಿತ ಆರೋಪಿಯಿಂದ 3,43,500 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಹಾಗೂ …

Read More »