Breaking News

ಜಿಲ್ಲೆ

ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಬೆಳಗಾವಿ : ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಸುಮಾರು 3000 ಕೋಟಿ ರು. ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, ಸುಮಾರು 8 ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊರೋನಾ ಇರುವುದರಿಂದ ಅಲ್ಲಿರುವವರಿಗೆ ಮಾಸ್ಕ್‌, ಸ್ಯಾನಿಟೈಸರ್‌ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೊರೋನಾ ಹಾಗೂ ಪ್ರವಾಹ …

Read More »

ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು.

ಬೆಳಗಾವಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಚಿಕ್ಕೋಡಿ ತಾಲ್ಲೂಕಿಗೆ ಸೋಮವಾರ ಭೇಟಿ ನೀಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು. ಇದು ಸಂತ್ರಸ್ತರು ಹಾಗೂ ರೈತರ ಅಸಮಾಧಾನಕ್ಕೆ ಕಾರಣವಾಯಿತು. ಯಡೂರ, ಯಡೂರವಾಡಿ, ಮಾಂಜರಿ, ಇಂಗಳಿ ಗ್ರಾಮಗಳಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸುತ್ತಾರೆಂದು ರೈತರು ನಿರೀಕ್ಷಿಸಿದ್ದರು. ತಮ್ಮ ಸಮಸ್ಯೆ ಆಲಿಸುತ್ತಾರೆಂದು ಕಾದಿದ್ದರು. ಆದರೆ, ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಚಿಕ್ಕೋಡಿ ಸಂಸದ …

Read More »

ಅದಕ್ಕಾಗಿಯೇ ಅವರನ್ನು ಕ್ಷೇತ್ರದ ಜನ ಅಂಜಲಿ “ತಾಯಿ’ ಅಂತಾರೆ…!!!

ಬೆಳಗಾವಿ- ಖಾನಾಪೂರ ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳ್ಕರ್ ಅವರು ಜಗನ್ಮಾತೆ ದುರ್ಗಾ ದೇವಿಗೆ ಹರಕೆ ಹೊತ್ತಿದ್ದಾರೆ. ಕ್ಷೇತ್ರದ ಜನತೆಯ ಸಕಲ ಶ್ರೇಯಸ್ಸಿಗೆ ವಿಶೇಷವಾದ,ವಿಶಿಷ್ಟವಾದ ,ಕಠಿಣ ಆಚರಣೆಯ ಹರಕೆ ಹೊತ್ತಿರುವ ಅವರು ನವರಾತ್ರಿಯ 9 ದಿನಗಳ ಕಾಲ ಬರಿಗಾಲಿನಲ್ಲಿದ್ದು 9 ದಿನಗಳ ಕಾಲ ಊಟ ಮಾಡದೇ ಕೇವಲ ಹಣ್ಣು ಹಂಪಲಗಳನ್ನ ಮಾತ್ರ ಸೇವಿಸುವ ಹರಕೆ ಹೊತ್ತ ಸೇವಾ ಶಾರದೆಯ ಜನಪರ ಕಾಳಜಿ ಪ್ರಶಂಸಾರ್ಹ. ಈ ಹಿಂದೆಯೂ ಶಾಸಕಿ ಅಂಜಲಿ ನಿಂಬಾಳ್ಕರ್ …

Read More »

ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ …

Read More »

ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ …

Read More »

ವಾರದ ಎಲ್ಲಾ ದಿನಗಳಂದು ಅನುಮೋದಿತ ಏಕರೂಪ ಪ್ರಯಾಣದರ

ಬೆಂಗಳೂರು: ವಾರಾಂತ್ಯ ದಿನಗಳಂದು ಪ್ರತಿಷ್ಠಿತ ಸಾರಿಗೆಗಳಲ್ಲಿ ಶೇ.10ರಷ್ಟು ವಿಧಿಸಲಾಗುತ್ತಿದ್ದ ಹೆಚ್ಚುವರಿ ಪ್ರಯಾಣದ ದರವನ್ನು ಕೆಎಸ್‍ಆರ್ ಟಿಸಿ ರದ್ದುಪಡಿಸಿದೆ. ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಪ್ರತಿಷ್ಠಿತ ಹವಾನಿಯಂತ್ರಿತ ಸಾರಿಗೆಗಳಲ್ಲಿ ಪ್ರಯಾಣಿಸಲು ಸಾರ್ವಜನಿಕರು ಆಸಕ್ತಿಯನ್ನು ತೋರುತ್ತಿಲ್ಲ. ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಲ್ಲಿ …

Read More »

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿಯಾಗಿದ್ದು, ತಾವಿರುವ ಹುದ್ದೆಯ ಬಗ್ಗೆ ಅರಿವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ …

Read More »

ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆ

ಕೂಡ್ಲಿಗಿ:ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಅಕ್ಟೋಬರ್ 17ರಂದು, ಅಂಬೇಡ್ಕರ್ ನಗರದ ಯುವಕರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ. ಅಂಬೇಡ್ಕರ್ ರವರ ಜೀವನ ಚರಿತ್ರೆ ಆಧಾರಿತವಾದ ಬಹು ಯಶಸ್ಸಿನಲ್ಲಿ ಮೂಡಿಬರುತ್ತಿರುವ, “ಮಹಾನಾಯಕ ” ಧಾರಾವಾಹಿಯ ಬ್ಯಾನರ್ ಗೆ ಮಾಲಾಪ೯ಣೆ ಮಾಡೋ ಮೂಲಕ ಅಭಿನಂದಿಸಿದರು.ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ದುರುಗೇಶ್,ರೈತ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ವಾಲ್ಮೀಕಿ ಮುಖಂಡ ಕೆ.ಕೆ.ಹಟ್ಟಿ ದೇವರ …

Read More »

ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ :B.S.Y.

ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ …

Read More »

ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …

Read More »