ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಕ್ಟೋಬರ್ 16ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಎಮ್.ನಿಂಗಪ್ಪ, ಉಪಾಧ್ಯಕ್ಷರಾಗಿ ಎನ್.ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಿಟೈನಿಂಗ್ ಅಧಿಕಾರಿಗಳ ಸಮಕ್ಷಮದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಸಂದಭ೯ದಲ್ಲಿ ಸಂಘದ ನಿಧೇ೯ಶಕರಾದ ಮಂಜುನಾಥಗೌಡ,ಜಿ.ನಾಗರಾಜ,ಹೊನ್ನೂರ್ ಬೀ,ಬಿ.ವೀರೇಶ್,ಹೆಚ್.ಮೂಗಪ್ಪ,ಎಸ್.ಮೆಹಬೂಬ್ ಸಾಬ,ಬಿ.ಖಾಸೀಂ ಪೀರ್,ಕೆ.ಬಸವನಗೌಡ,ವೈ.ಪ್ರಸನ್ನಕುಮಾರ್,ಶ್ರೀಮತಿ ಎನ್.ನಿಮ೯ಲಮ್ಮ ಹಾಜರಿದ್ದರೆಂದು ಕಾಯ೯ದಶಿ೯ಗಳಾದ ಬಸಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದಭ೯ದಲ್ಲಿ ಪೊಲೀಸ್ ಪೇದೆ ಲೋಕೇಶ್ ಹಾಜರಿದ್ದರು.
Read More »ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಉಡುಪಿ: ಜಿಲ್ಲೆಯ ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಬೆಂಗಳೂರಿನ ಹೇಸರಘಟ್ಟದಿಂದ ಐವರು ಯುವಕರ ತಂಡ ಉಡುಪಿ ಪ್ರವಾಸಕ್ಕೆ ಬಂದಿತ್ತು. ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಸಂಜೆ ಕಾಪು ಬೀಚ್‍ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಾಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ 15 ಸ್ಥಾನಗಳಿಗೆ ಕತ್ತಿ ಸಹೋದರರ ಬೆಂಬಲಿತ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆ
ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ 15 ಸ್ಥಾನಗಳಿಗೆ ಕತ್ತಿ ಸಹೋದರರ ಬೆಂಬಲಿತ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆಯಾಗಿದ್ದಾರೆ. ರಾಜಕೀಯ ಜಟಾಪಟಿ ಸಾಕ್ಷಿಯಾಗಿದ್ದ ಹುಕ್ಕೇರಿ ತಾಲ್ಲೂಕು ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಚುನಾವಣೆ ಕಳೆದ ಎರಡು ದಶಕದಿಂದ ಕತ್ತಿ ಸಹೋದರರ ತಂಡ ಗೆಲುವು ಸಾಧಿಸುತ್ತಾ ಬಂದಿದೆ. ಈ ಬಾರಿಯೂ ಸಹ ಶಾಸಕ ಉಮೇಶ ಕತ್ತಿ, ಮಾಜಿ ಸಂಸದ ರಮೇಶ ಕತ್ತಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ …
Read More »ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …
Read More »ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನ:ಸಿ.ಟಿ.ರವಿ
ಬೆಂಗಳೂರು, ಅ.18-ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನದ ಪರಮಾವಧಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪದ ಮೇಲೆ ತಿಹಾರ್ ಜೈಲಿಗೆ ಹೋಗಿ ಬಂದವರು, ಜನರಿಂದ ಹಾರ, ತುರಾಯಿ ಹಾಕಿಸಿಕೊಂಡು ಮೆರವಣಿಗೆ ಮಾಡುತ್ತಿದ್ದಾರೆ. ಅಂತಹವರು ಕೂಡ ನಾನು ಬಂಡೆ ಎಂದು ಕೊಚ್ಚಿಕೊಳ್ಳುವುದು ಕೂಡ ಒಂದು ರೀತಿ ಭಂಡತನವೇ ಎಂದು …
Read More »ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ:ಕಟೀಲ್
ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ …
Read More »ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಬೆಂಗಳೂರು: ಭಾರೀ ಮಳೆ, ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿದ್ದು, ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು, ಜೊತೆಗೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ಹಾಗೂ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಯ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ …
Read More »ನಾಳೆಸಿದ್ದರಾಮಯ್ಯ ಬೆಳಗಾವಿ ಗೆ
ಬೆಂಗಳೂರು, ಅ.18- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಳೆಯಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ತಮ್ಮ ಸ್ವಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ 12.30ಕ್ಕೆ ತಲುಪಲಿದ್ದಾರೆ. ಬಾದಾಮಿಯಲ್ಲಿ ಕೆಡಿಪಿ ಸಭೆ ನಡೆಸಿ ಅಂದು ಅಲ್ಲೆ ವಾಸ್ತವ್ಯ ಹೂಡಲಿದ್ದಾರೆ. ಮಾರನೇ ದಿನ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ …
Read More »ಹೋಮ್‍ಕ್ವಾರಂಟೈನ್ ನಲ್ಲಿ ಸಚಿವ ಸುರೇಶ್‍ಕುಮಾರ್
ಬೆಂಗಳೂರು, ಅ.18- ಕಳೆದ 13 ದಿನಗಳಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರ ಆರೋಗ್ಯ ಸುಧಾರಿಸಿದ್ದು, ಹೋಮ್‍ಕ್ವಾರಂಟೈನ್ ನಿಗಾ ವ್ಯವಸ್ಥೆಯಲ್ಲಿದ್ದಾರೆ. ಈ ಬಗ್ಗೆ ಖುದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಅ.5ರಂದು ನನಗೆ ಕೊರೋನಾ ಸೋಂಕು ತಗುಲಿದೆ ಎಂದು ತಿಳಿದ ನಂತರ ಬಿಬಿಎಂಪಿ ವೈದ್ಯರ ತಂಡದ ಸಲಹೆಯಂತೆ ನಾನು ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದು. ವೈದ್ಯರು ಸೂಚಿಸಿದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದು. ಆದರೆ, ಅ.10 …
Read More »ಕಾಂಗ್ರೆಸ್ ಭವನ ಕ್ಯಾಂಟಿನ್ ನನ್ನು ಶಾಸಕ ಸತೀಶ ಜಾರಕಿಹೊಳಿ ಇಂದು ಉದ್ಘಾಟಿಸಿದರು.
ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಾಂಗ್ರೆಸ್ ಭವನ ಕ್ಯಾಂಟಿನ್ ನನ್ನು ಶಾಸಕ ಸತೀಶ ಜಾರಕಿಹೊಳಿ ಇಂದು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಮೂರು ಉದ್ದೇಶದಿಂದ ಕಾಂಗ್ರೆಸ್ ಕಚೇರಿಯಲ್ಲಿ ಕ್ಯಾಂಟಿನ್ ತೆರೆ ಯಲಾಗಿದೆ. ಸಾಮಾನ್ಯ ಜನರು, ಕಾರ್ಯಕರ್ತರಿಗೆ ಕಡಿಮೆ ಬೆಲೆಯಲ್ಲಿ ಆಹಾರ ನೀಡುವ ಹಾಗೂ ಕಾಂಗ್ರೆಸ್ ಮಹಾನ್ ನಾಯಕರ ಇತಿಹಾಸ ತಿಳಿಸಿಕೊಡುವ ಉದ್ದೇಶದಿಂದ ಕ್ಯಾಂಟಿನ್ ತೆರೆಯಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ …
Read More »
Laxmi News 24×7