Breaking News

ಜಿಲ್ಲೆ

ಕೊವಿಡ್-19: ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಸೋಂಕಿತರು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ . ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371 ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ …

Read More »

ಕಲಬುರಗಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ 6 ಶಾಲಾ ಸಿಬ್ಬಂದಿ ರಕ್ಷಣೆ..

ಕಲಬುರಗಿ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಕಷ್ಟ ಪಡುತ್ತಿದೆ. ಪ್ರವಾಹಕ್ಕೆ ಸಿಲುಕಿ ನರಳುತ್ತಿದೆ. ಕಾಗಿಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಶಾಲೆ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಮಳಖೇಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ಜನ ಸಿಬ್ಬಂದಿ ಸಿಲುಕಿದ್ದರು. ಅವರನ್ನು NDRF ತಂಡ ರಕ್ಷಿಸಿದೆ. ನಿನ್ನೆ ಬೆಳಗ್ಗೆ ಶಾಲೆಗೆ ಕಾಗಿಣಾ ನದಿಯ ನೀರು ನುಗ್ಗಿ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದರು. ವಸತಿ ಶಾಲೆಯಿಂದ …

Read More »

ಕೊರೊನಾ ಸೋಂಕಿನಿಂದ  ಮೃತಪಟ್ಟ ಸಾರಿಗೆ ಇಲಾಖೆ ಸಿಬ್ಬಂದಿ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ:ಲಕ್ಷ್ಮಣ ಸವದಿ

ಬೆಳಗಾವಿ : ಕೊರೊನಾ ಸೋಂಕಿನಿಂದ  ಮೃತಪಟ್ಟ ಸಾರಿಗೆ ಇಲಾಖೆ ಸಿಬ್ಬಂದಿ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಕೊರೊನಾದಿಂದ ಸಾರಿಗೆ ಇಲಾಖೆ ಮೂರು ಸಾವಿರ ಕೋಟಿಗೂ ಅಧಿಕ ನಷ್ಟ ಅನುಭವಿಸುತ್ತಿದೆ. ಇದರಿಂದ ಸಾರಿಗೆ ಇಲಾಖೆಯ ಸಿಬ್ಬಂದಿಯ ವೇತನ ವಿಳಂಬವಾಗುತ್ತಿದೆ.  ಸದ್ಯ ಸಾರಿಗೆ ಇಲಾಖೆಯಲ್ಲಿ 1 ಲಕ್ಷ 30 ಸಾವಿರ ಸಿಬ್ಬಂದಿ …

Read More »

ವಿದ್ಯಾರ್ಥಿನಿ ಕಣ್ಣೀರಿಗೆ ಮಿಡಿದ ಸಚಿವ- ಸರ್ಕಾರವೇ ಭರಿಸಲಿದೆ ಶಿಕ್ಷಕಿಯ ಚಿಕಿತ್ಸಾ ವೆಚ್ಚ

ಬೆಂಗಳೂರು: ಮೂಡಬಿದಿರೆ ತಾಲೂಕಿನ ಶಿರ್ತಾಡಿಯ ಶಿಕ್ಷಕಿ ಎನ್. ಪದ್ಮಾಕ್ಷಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಅದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಕ ದಂಪತಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವರದಿಗಳನ್ನು ಗಮನಿಸಿದ ತಕ್ಷಣವೇ ಸಚಿವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ. ಅಲ್ಲದೆ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು …

Read More »

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಕೆ.ಎಚ್ ಮುನಿಯಪ್ಪ?

ಕೋಲಾರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಭಿಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ರು. ಕೋಲಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ …

Read More »

ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ. 10 ನಿಯಮಗಳು 1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು. 2. ಪಟಾಕಿ ಮಾರಾಟದ ಮಳಿಗೆಗಳನ್ನು …

Read More »

ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ………..

ಬೆಂಗಳೂರು, ಅ.14- ಉತ್ತಮ ಕರ್ತವ್ಯ ನಿರ್ವಹಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ ಅಕಾರಿ ಮತ್ತು ಸಿಬ್ಬಂದಿಗಳನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ. ನಕಲಿ ಛಾಪಾ ಕಾಗದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾದ ಎಸ್‍ಜೆ ಪಾರ್ಕ್ ಪೊಲೀಸರ ತಂಡಕ್ಕೆ 50 ಸಾವಿರ ನಗದು ನೀಡಿದರೆ, ಅತ್ಯಾಚಾರಿಯನ್ನು ಬಂಸಿದ ಶ್ರೀರಾಮಪುರ ಪೆÇಲೀಸರ ತಂಡಕ್ಕೆ 1 ಲಕ್ಷ ರೂ. ನಗದು …

Read More »

ಬಿಜೆಪಿ,ಕಾಂಗ್ರೆಸ್ ವೈಫಲ್ಯಗಳೇ ನಮ್ಮ ಚುನಾವಣೆ ಅಸ್ತ್ರ : HDK

ಬೆಂಗಳೂರು, ಅ.14- ನಮ್ಮ ಪಕ್ಷ ಅಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವೈಫಲ್ಯಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದೇವೆ ಎಂದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಜನರು ಮಳೆಯಿಂದ ಮನೆ-ಮಠ ಕಳೆದುಕೊಂಡಿದ್ದಾರೆ. ಅಲ್ಲದೆ …

Read More »

ಡಿಜೆಹಳ್ಳಿ ಗಲಭೆ ಪ್ರಕರಣ : ಸಂಪತ್‍ರಾಜ್-ಜಾಕೀರ್ ವಿಚಾರಣೆಗೆ ಮುಂದಾದ ಎನ್‍ಐಎ

ಬೆಂಗಳೂರು,ಅ.14-ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಸಂಬಂಸಿದಂತೆ ತನಿಖೆ ನಡೆಸುತ್ತಿರುವ ಎನ್‍ಐಎ ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಅವರ ಆಪ್ತ, ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್‍ನ್ನು ವಿಚಾರಣೆಗೊಳಪಡಿಸಲು ತೀರ್ಮಾನಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈ ಇಬ್ಬರಿಗೂ ವಿಚಾರಣೆಗೆ ಹಾಜರಾಗು ವಂತೆ ಸದ್ಯದಲ್ಲೇ ಎನ್‍ಐಎ ನೋಟಿಸ್ ನೀಡಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಶಾಸಕರಾದ ಜಮೀರ್ ಅಹಮ್ಮದ್ ಖಾನ್ ಮತ್ತು ರಿಜ್ವಾನ್ ಅವರನ್ನು ಎನ್‍ಐಎ ವಿಚಾರಣೆಗೊಳಪಡಿಸಿ ಗಲಭೆಗೆ ಸಂಬಂಸಿದಂತೆ ಹಲವು …

Read More »

ಕಲ್ಬುರ್ಗಿ ನಗರದಲ್ಲಿ ಭಾರಿ ಮಳೆ

ಕಲಬುರ್ಗಿ: ಇಲ್ಲಿನ ಕುಸನೂರು ರಸ್ತೆಯ ರಾಜಾಜಿ ನಗರದ ನಿವಾಸಿಗಳಾದ ಗುರುರಾಜ ಕುಲಕರ್ಣಿ, ಮೀನಾಕ್ಷಿ, ಚಂದ್ರಕಾಂತ ಅವರ ಕುಟುಂಬಗಳಿಗೆ ಮಂಗಳವಾರದ ರಾತ್ರಿ ಎಂದಿನಂತಿರಲಿಲ್ಲ. ಸಂಜೆಯವರೆಗೂ ಮಳೆಯ ಸುದ್ದಿಯೇ ಇರದಿದ್ದರಿಂದ ನಿರಾಳರಾಗಿ ನಿದ್ದೆಗೆ ಜಾರಿದವರಿಗೆ ಕೆಲವೇ ನಿಮಿಷಗಳಲ್ಲಿ ಪ್ರವಾಹದ ನೀರಿನ ಸದ್ದು ಕೇಳಿಸಿತು. ಎದ್ದು ನೋಡುವಷ್ಟರಲ್ಲಿ ಕುಲಕರ್ಣಿ ಅವರ ಕೆಳಗಿನ ಮನೆಯಲ್ಲಿ ಕ್ರಮೇಣ ನೀರು ತುಂಬಿಕೊಳ್ಳಲಾರಂಭಿಸಿತು. ಎದುಗಿನ ರಸ್ತೆಯಲ್ಲೇ ಹೊಳೆ ಹರಿದು ಬಂತೇನೋ ಎಂಬಷ್ಟು ಮಳೆಯ ರಭಸ ಅವರನ್ನು ಎಬ್ಬಿಸಿತು. ಗಂಗಾಧರ ಕುಲಕರ್ಣಿ ಅವರು …

Read More »