ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ಎಸ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದಿರಾನಗರ ಕ್ಲಬ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಲಬ್ ಸದಸ್ಯ ರಾಮ್ ಮೋಹನ್ ಕೋರ್ಟ್‌ಗೆ ದೂರು ನೀಡಿದ್ದರು.ಕೋರ್ಟ್ ನಿರ್ದೇಶನದಂತೆ ಈಗ ಬಿಎನ್‌ಎಸ್ ರೆಡ್ಡಿ ಮತ್ತು ನಾಗೇಂದ್ರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 120 ,418, 465, 471, 420,468, 417ರ ಅಡಿ ಪ್ರಕರಣ ದಾಖಲಾಗಿದೆ.ದೂರಿನಲ್ಲಿ …
Read More »ರಾಜ್ಯದ ನಗರಗಳ ಹವಾಮಾನ ವರದಿ: 14-10-2020
ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. …
Read More »ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಅಥಣಿ :ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ವೇಳೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ಬಸವರಾಜ ಖೇಮಲಾಪುರ ವಿಪತ್ತು ನಿರ್ವಾಹಕ ಘಟಕದ ಸಂಯೋಜಕರು ದರೂರ ಹಾಗೂ ವಲಯ ಮೇಲ್ವಿಚಾರಕರು , ಸೇವಾಪ್ರತಿನಿಧಿಗಳು ಮತ್ತು ವೈದ್ದ್ಯಾದಿಕಾರಿಗಳು ಮತ್ತು ನರ್ಸ್ ಸ್ವಯಂ ಸೇವಕರು ಜಕ್ಕಪ್ಪ ತೀರ್ಥ, ವಿಠ್ಠಲ್ ಕುಂಬಾರ್, …
Read More »ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ
ಚಲಿಸುವ ಗಡಿಯಾರ ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ ಹಗಲಲಿ ಕನಸ ನಕ್ಷತ್ರಗಳು ಮರೆಯಾಗುವಂತೆ ಮಾಯವಾಗುವ ನೆನಪೇ ಒಂದು ಚಲಿಸುವ ಗಡಿಯಾರ ಕತ್ತಲೆ ಬೆಳಕನಾವರಿಸುವಂತೆ ಮನವನಾವರಿಸುವ ನೆನಪೇ ಒಂದು ಚಲಿಸುವ ಗಡಿಯಾರ…. ನವಿರಾದ ಸುಖಗಳ ನಡುವೆ ಸಿಹಿಯಾದ ಅನುಭವ ಬೆರೆಸುವ ನೆನಪೇ ಒಂದು ಚಲಿಸುವ ಗಡಿಯಾರ ಭವಿಷ್ಯದ ಗರ್ಭದಲಿ ಗರಿಬಿಚ್ಚಿ ನಲಿವಂತೆ ಸಿಹಿನೆನಪಿನ ತರಂಗಗಳನ್ನು ಬಡಿದೆಬ್ಬಿಸುವ ನೆನಪೇ ಒಂದು ಚಲಿಸುವ ಗಡಿಯಾರ ಹೃದಯದ ಭಾವನೆಗಳನ್ನು …
Read More »ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ.
ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು. ಜಲಸಂಪನ್ಮೂಲ …
Read More »ಗೋವಿಂದ ಕಾರಜೋಳರಮೇಶ್ ಜಾರಕಿಹೊಳಿಭೇಟಿ
ಬೆಂಗಳೂರು : ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಇಂದು ಭೇಟಿ ಮಾಡಿದರು. ಹಲವು ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಬಳಿಕ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾದ ಅನಾಹುತಗಳು, ಹಾನಿಯನ್ನು ತಡೆಗಟ್ಟಲು ವ್ಯವಸ್ಥಿತವಾಗಿ ಕಾರ್ಯತಂತ್ರ ರೂಪಿಸಿದ ಸಚಿವರ ಕಾರ್ಯಗಳನ್ನು ಶ್ಲಾಘಿಸಿದರು.
Read More »ಬಾಲಚಂದ್ರ ಜಾರಕಿಹೊಳಿ ಅವರ, ಸೂಚನೆಯ ಮೇರೆಗೆ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಗೆ ಇಂದು ಆರೋಗ್ಯ ಕಿಟ್ ನೀಡಿದರು.
ಗೋಕಾಕ್ : ಸಚಿವ ರಮೇಶ್ , ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ, ಸೂಚನೆಯ ಮೇರೆಗೆ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಗೆ ಇಂದು ಆರೋಗ್ಯ ಕಿಟ್ ನೀಡಿದರು. ಕೊರೊನಾ ನಿಯಂತ್ರಣದಲ್ಲಿ ಕಳೆದ ಏಳೆಂಟು ತಿಂಗಳಿಂದ ತಮ್ಮ ಜೀವನವನ್ನು ಲೆಕ್ಕಿಸಿದೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ, ಪಟ್ಟಣ ಪಂಚಾಯತಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಪೊಲೀಸ್ ಇಲಾಖೆ ಸಿಬ್ಬಂದಿ ಕಿಟ್ ನೀಡಿ, ಸನ್ಮಾನಿಸಿ ಗೌರಿವಿಸಿದರು. ಇದೇ ವೇಳೆ ಮುಖಂಡರು …
Read More »ಮುನಿರತ್ನಗೆ ಬಿಗ್ ರಿಲೀಫ್ – ಆರ್‍ಆರ್ ನಗರ ಎಲೆಕ್ಷನ್‍ಗೆ ಸುಪ್ರೀಂ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಅವಕಾಶ ಕೊಡಬಾರದು ಎಂದು ಬಿಜೆಪಿಯ ನಾಯಕ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮಾಜಿ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಅರ್ಜಿ ವಿಚಾರಣೆ ನಡೆಸಿರುವ ಮುಖ್ಯ ನ್ಯಾ. ಎಸ್.ಎ ಬೊಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಚುನಾವಣೆಗೆ ತಡೆ ನಿಡಲು ನಿರಾಕರಿಸಿದೆ. ಈಗಾಗಲೇ ಚುನಾವಣೆ ದಿನಾಂಕ ಪ್ರಕಟವಾಗಿದ್ದು ಅಕ್ಟೋಬರ್ 16ಕ್ಕೆ …
Read More »ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..
ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ …
Read More »ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ …
Read More »
Laxmi News 24×7