ಅಥಣಿ : ದೇಶದಲ್ಲಿ ಬದುಕುತ್ತಿರುವ ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು . ಸಮಾಜದಲ್ಲಿ ಸಮಾನತೆ ಸಮಾಜ ನಿರ್ಮಿಸಲು ಪ್ರತಿಯೊಬ್ಬರು ಕೈಜೊಡಿಸಬೇಕೆಂದು ಅಥಣಿ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕರಾದ ಜ್ಯೋತಿ ನರೋಟಿ ಹೇಳಿದರು . ಜಿಲ್ಲಾ ಪಂಚಾಯತ ಬೆಳಗಾವಿ ತಾಲೂಕಾ ಆಡಳಿತ ಸಮಾಜ ಕಲ್ಯಾಣ ಇಲಾಖೆ ಅಥಣಿ ಹಾಗೂ ಗ್ರಾಮ ಪಂಚಾಯತ ನದಿ ಇಂಗಳಗಾಂವ ಇವರ ಸಹಯೋಗದಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳ ಜಾಗೃತಿ …
Read More »ರೇಣುಕಾ ಯಲ್ಲಮ್ಮ ದೇಗುಲದ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ
ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ. ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ …
Read More »ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋದ ಮಹಿಳೆ ವಾಪಸ್ ಬರಲೇ ಇಲ್ಲ..
ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ. ದಡದ ಮರದ ಕೊಂಬೆಯಲ್ಲಿ ಶವ ಪತ್ತೆ.. ಶಾಂತಾಬಾಯಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದಳು. ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಇಂದು ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿಯಿರುವ ಹಳ್ಳದ ದಡದ ಮರದ ಕೊಂಬೆಯಲ್ಲಿ …
Read More »ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ
ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ. 18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ. ಗೋಡೆ ಕುಸಿಯುವ …
Read More »150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ
ಹಾಸನ: 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಹೇಳಿದರು. ರಾಜ್ಯದ …
Read More »ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆ
ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆಯಾಗಿದೆ. ಹಾಲಿನ ಪ್ಯಾಕೆಟ್ ಜೊತೆಗೆ ಮೂಟೆಯಲ್ಲಿ ಪಿಪಿಇ ಕಿಟ್‍ಗಳು ಕೂಡ ಪತ್ತೆಯಾಗಿವೆ. ಆನೇಕಲ್ ತಾಲೂಕಿನ ಹುಸ್ಕೂರು ಆರ್‌ಟಿಒ ಕಚೇರಿ ಮುಂದೆ ಹಾಲಿನ ಪಾಕೆಟ್‍ಗಳು ಪತ್ತೆಯಾಗಿವೆ. ನಂದಿನಿ, ಅಕ್ಷಯಕಲ್ಪ ಕಂಪನಿಯ ಹಾಲಿನ ಪ್ಯಾಕೆಟ್‍ಗಳು ಬಿದ್ದಿವೆ. ರಸ್ತೆಯ ಪಕ್ಕದಲ್ಲಿ ಬಿದ್ದಿರುವುದರಿಂದ ವಾಸನೆ ಬರುತ್ತಿದ್ದು, ಸಾರ್ವಜನಿಕರಿಗೆ ಓಡಾಡಲು ಪರದಾಡುತ್ತಿದ್ದಾರೆ. ಹಾಲಿನ ಪ್ಯಾಕೆಟ್‍ಗಳ ಮೇಲೆ 9ನೇ ಡೇಟ್ ಇದೆ. ಆದರೆ ಇಷ್ಟೊಂದು …
Read More »ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದವನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ವಿಜಯಪುರ: ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದವನನ್ನು ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ.ವಿಜಯಪುರ ತಾಲೂಕಿನ ಅತ್ತಾಲಟ್ಟಿ ಬಳಿ ಘಟನೆ ನಡೆದಿದ್ದು, ಅತ್ತಾಲಟ್ಟಿ ನಿವಾಸಿ ಬಂದೇನವಾಜ್ ಮೊಕಾಶಿಯವರನ್ನು ರಕ್ಷಣೆ ಮಾಡಲಾಗಿದೆ. ಸಕಾಲಕ್ಕೆ ತೆರಳಿ ಅಗ್ನಿಶಾಮಕ ದಳದ ಸಿಬ್ಬಂದಿ ವ್ಯಕ್ತಿಯ ಪ್ರಾಣ ಉಳಿಸಿದ್ದಾರೆ. ಸಾರವಾಡದಿಂದ ಅತ್ತಾಲಟ್ಟಿಗೆ ಹೊರಟಿದ್ದ ವೇಳೆ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋಗಿದ್ದ. ಕಳೆದ ರಾತ್ರಿ ನಡೆದ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. …
Read More »“ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುತ್ತೇನೆ”
ಬೆಂಗಳೂರು, ಅ.12- ಆರೋಗ್ಯ ಇಲಾಖೆಯಂತಹ ಪ್ರಮುಖ ಜವಾಬ್ದಾರಿಯನ್ನು ನನ್ನ ಮೇಲೆ ವಿಶ್ವಾಸವಿಟ್ಟು ಸಿಎಂ ಹಾಗೂ ವರಿಷ್ಠರು ನೀಡಿದ್ದಾರೆ. ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಅದನ್ನು ನಿಭಾಯಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಆದಿಚುಂಚನಗಿರಿ ಶಾಖಾಮಠಕ್ಕೆ ಇಂದು ಭೇಟಿ ನೀಡಿದ ಅವರು, ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಎಸ್.ಎಂ.ಕೃಷ್ಣ ಸರ್ಕಾರದ ವೇಳೆ ಸಂಪುಟದಲ್ಲಿ ಹೆಚ್ಚಿನ ಸ್ಥಾನಕ್ಕಾಗಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯನ್ನು ಪ್ರತ್ಯೇಕಿಸಲಾಗಿತ್ತು. …
Read More »ರಮೇಶ ಜಾರಕಿಹೊಳಿ ಉಪ ಚುನಾವಣೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯB.S.Y.ಗೆ
ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾದ ಜಾರಕಿಹೊಳಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಬಿಜೆಪಿ ಟಿಕೆಟ್ ಅವರನ್ನು ಮುನಿರತ್ನ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಮುನಿರತ್ನಗೆ ಟಿಕೆಟ್ ಕೈ ತಪ್ಪಬಾರದು. ಈ ಕುರಿತು ಹೈಕಮಾಂಡ್ ನಾಯಕರ ಬಳಿ ಮಾತುಕತೆ …
Read More »ಅಮರನಾಥ್ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಲಾಬಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಸದ್ಯಕ್ಕೆ ಬಿಜೆಪಿ ಕಠಿಣ ಸವಾಲಾಗಿದೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಲೋಕಸಭೆ ವ್ಯಾಪ್ತಿಗೆ ಬರುವ ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಜಾರಕಿ ಹೊಳಿ …
Read More »
Laxmi News 24×7